ಬೆಳಗಾವಿ: ಮಹಿಳೆಯರು ಭಾರತದ ಹೈನೋದ್ಯಮ ಕ್ಷೇತ್ರದ ನಿಜವಾದ ನಾಯಕಿಯರು ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು. ಬೆಳಗಾವಿ ಗ್ರಾಮೀಣ ಕ್ಷೇತ್ರದ ಕೆಕೆ ಕೊಪ್ಪ ಗ್ರಾಮದಲ್ಲಿ ಸೋಮನಾಥನಗರದ ನೂತನ ಹಾಲು ಉತ್ಪಾದಕರ ಸಹಕಾರ ಸಂಘ ಮತ್ತು ಶ್ರೀ ಸ್ವಾಮಿ ವಿವೇಕಾನಂದ ಯುವಕ ಸಂಘಗಳ ಉದ್ಘಾಟನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಹೈನುಗಾರಿಕೆ ಪ್ರತಿಯೊಂದು ಗ್ರಾಮಗಳಲ್ಲಿಯೂ ತನ್ನದೇ ಆದ ಪ್ರಾಮುಖ್ಯತೆಯನ್ನು ಪಡೆದುಕೊಂಡಿದ್ದು, ನಿತ್ಯ ಆದಾಯ ಕೊಡುವ ಕಸುಬಾಗಿದೆ. ಇಂದು ಬೆಳಗಾವಿ ಗ್ರಾಮೀಣ ಕ್ಷೇತ್ರದ ಪ್ರತಿಯೊಂದು ಹಳ್ಳಿಗಳಲ್ಲಿ ಮಹಿಳೆಯರು ಹೈನುಗಾರಿಕೆ ಮೂಲಕ ತಮ್ಮ ಬದುಕು ಕಟ್ಟಿಕೊಂಡು ತಮ್ಮ ಕುಟುಂಬ ಸಲಹುತ್ತಿದ್ದಾರೆ ಎಂದು ಹೇಳಿದರು.
ಇದೇ ವೇಳೆ ಗ್ರಾಮದಲ್ಲಿ ಜಾನುವಾರುಗಳ ಆರೋಗ್ಯದ ಹಿತದೃಷ್ಟಿಯಿಂದ ಲಸಿಕಾ ಅಭಿಯಾನಕ್ಕೂ ಚಾಲನೆ ನೀಡಲಾಯಿತು. ಸಂಸದೆ ಮಂಗಲಾ ಸುರೇಶ ಅಂಗಡಿ, ಸೋಮಪ್ಪ ಹದಗಲ್ಲ, ಸುರೇಶ ಕಂಬಿ, ಮೋಹನ ಅಂಗಡಿ, ಬಸವಣ್ಣೆಪ್ಪ ಪಗಾದ, ಯಲ್ಲಪ್ಪ ದೊಡವಾಡಿ, ನಾಗಪ್ಪ ಯಳ್ಳೂರ, ಗಂಗಾಧರ್ ಯಳ್ಳೂರ, ಕಲ್ಲಪ್ಪ ಸಂಪಗಾಂವಿ, ಸಂತೋಷ ಕಂಬಿ, ರಾಮನಗೌಡ ಪಾಟೀಲ, ಸುರೇಶ ಕುಡಿನಟ್ಟಿ ಕೆ ಕೆ ಕೊಪ್ಪ ಗ್ರಾಮ ಪಂಚಾಯಿತಿ ಅಧ್ಯಕ್ಷ ಮತ್ತು ಉಪಸ್ಥಿತರಿದ್ದರು.