Advertisement
ವಿಧಾನಸೌಧದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಸೇರಿದಂತೆ ಕಾಂಗ್ರೆಸ್ ನಾಯಕರು ನಡೆಸಿದ ಜಂಟಿ ಪತ್ರಿಕಾಗೋಷ್ಠಿಯಲ್ಲಿ, ರಾಜ್ಯ ಬಿಜೆಪಿ ನಾಯಕರಿಂದಲೂ ಹೈಕಮಾಂಡ್ ಗೆ ಕಪ್ಪ ಕಾಣಿಕೆ ಸಲ್ಲಿಕೆಯಾಗಿದೆ ಎಂದು ಆರೋಪಿಸಿದರು. ಬಿಜೆಪಿ ಹೈಕಮಾಂಡ್ ಕೂಡ 391 ಕೋಟಿ ಕಪ್ಪ ಕಾಣಿಕೆ ಸ್ವೀಕರಿಸಿರುವ ಡೈರಿ ಮಾಹಿತಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವುದಾಗಿ ಹೇಳಿದರು.
Related Articles
ಕೆ.ಗೋವಿಂದರಾಜು ಡೈರಿಯಲ್ಲಿ ಕಾಂಗ್ರೆಸ್ಸಿಗರ ಹೆಸರು, ಸಹರಾ ಬಿರ್ಲಾ ಡೈರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹೆಸರಿದೆ, ಲೆಹರ್ ಸಿಂಗ್ ಡೈರಿಯಲ್ಲಿ ಬಿಜೆಪಿ ನಾಯಕರ ಹೆಸರಿದೆ. ಹಾಗಾಗಿ ಮೂರು ಡೈರಿಗಳ ಬಗ್ಗೆಯೂ ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳಿಂದ ತನಿಖೆ ನಡೆಸುವಂತೆ ಕಾಂಗ್ರೆಸ್ ಮುಖಂಡರು ಆಗ್ರಹಿಸಿದ್ದಾರೆ.
Advertisement
ಐಟಿ ಇಲಾಖೆ ಮಾಹಿತಿ ನೀಡಲ್ಲ ಎಂದು ಸಿಎಂಗೆ ಹೇಳಿತ್ತು!ಡೈರಿಯನ್ನು ತಾನು ನೋಡಿದ್ದೇನೆ ಎಂದು ರಾಷ್ಟ್ರೀಯ ವಾಹಿನಿ ಆಂಕರ್ ಹೇಳಿದ್ದಾರೆ. ಆದರೆ ಐಟಿ ದಾಳಿ ವೇಳೆ ಸಿಕ್ಕಿರುವ ಡೈರಿಯಲ್ಲಿನ ಮಾಹಿತಿ ನೀಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆದಾಯ ತೆರಿಗೆ ಇಲಾಖೆಗೆ ಪತ್ರ ಬರೆದಿದ್ದರು. ಆದರೆ ಯಾವುದೇ ಕಾರಣಕ್ಕೂ ಮಾಹಿತಿ ಕೊಡಲು ಸಾಧ್ಯವಿಲ್ಲ ಎಂದು ಅಧಿಕಾರಿಗಳು ಉತ್ತರ ನೀಡಿದ್ದರು. ಹಾಗಿದ್ದರೂ ರಾಷ್ಟ್ರೀಯ ಮಾಧ್ಯಮಗಳಿಗೆ ಡೈರಿ ಹೇಗೆ ಸಿಕ್ಕಿತು? ಇದೊಂದು ವ್ಯವಸ್ಥಿತ ಷಡ್ಯಂತ್ರವಲ್ಲದೇ ಇನ್ನೇನು ಎಂದು ದಿನೇಶ್ ಗುಂಡೂರಾವ್ ತಿರುಗೇಟು ನೀಡಿದ್ದಾರೆ.