Advertisement
ಸಂಸದ ನಳಿನ್‌ಗೆ ಕೊರೊನಾಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲು ಅವರಿಗೆ ಕೊರೊನಾ ದೃಢಪಟ್ಟಿದೆ. ಈ ಕುರಿತಂತೆ ಟ್ವಿಟರ್‌ನಲ್ಲಿ ಮಾಹಿತಿ ನೀಡಿದ ಅವರು, “ನನಗೆ ಕೋವಿಡ್ ದೃಢವಾಗಿದ್ದು, ಯಾವುದೇ ಲಕ್ಷಣಗಳಿಲ್ಲದೆ ಆರೋಗ್ಯವಾಗಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ’ ಎಂದು ಟ್ವೀಟ್ ಮಾಡಿದ್ದಾರೆ. ನಳಿನ್ ಅವರಿಗೆ ಈ ಹಿಂದೆಯೂ ಒಂದು ಬಾರಿ ಕೊರೊನಾ ದೃಢಪಟ್ಟಿತ್ತು.
ಉಡುಪಿ: ಜಿಲ್ಲೆಯಲ್ಲಿ ಸೋಮವಾರ 219 ಮಂದಿಗೆ ಸೋಂಕು ದೃಢಪಟ್ಟಿದೆ. ಒಟ್ಟು 4,922 ಮಂದಿಯನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು. 193 ಮಂದಿ ಹೋಂ ಐಸೊಲೇಶನ್‌ನಲ್ಲಿ, 7 ಮಂದಿ ಕೋವಿಡ್ ಆಸ್ಪತ್ರೆಯಲ್ಲಿ ಹಾಗೂ 19 ಮಂದಿ ಕೋವಿಡ್ ಕೇರ್ ಸೆಂಟರ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 40 ಮಂದಿ ಬಿಡುಗಡೆಯಾಗಿದ್ದಾರೆ. 1,158 ಪ್ರಕರಣಗಳು ಸಕ್ರಿಯವಾಗಿವೆ. ಕೋವಿಡ್ 19 ರೋಗಿಗಳ ಆರೈಕೆಗಾಗಿ 61 ಬೆಡ್‌ಗಳನ್ನು ಮೀಸಲಿರಿಸಲಾಗಿದೆ. ಜಿಲ್ಲೆಯಲ್ಲಿ ಪಾಸಿಟಿವಿಟಿ ದರ ಶೇ, 4.41 ರಷ್ಟಿದೆ. ಪಡುಬಿದ್ರಿ: ಐವರು ವಿದ್ಯಾರ್ಥಿಗಳಿಗೆ ಸೋಂಕು
ಪಡುಬಿದ್ರಿ: ಹೆಜಮಾಡಿಯ ಖಾಸಗಿ ಶಾಲೆಯ 4 ಹಾಗೂ ಪಡುಬಿದ್ರಿಯ ಅನುದಾನಿತ ಶಾಲೆಯ ಓರ್ವ ವಿದ್ಯಾರ್ಥಿ ಸೇರಿದಂತೆ ಐವರು ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್ ವರದಿಯಾಗಿದೆ.
Related Articles
Advertisement
ಇದನ್ನೂ ಓದಿ:ರಾಜ್ಯದಲ್ಲಿ ಹೊಸ ಕೋವಿಡ್ ಪ್ರಕರಣಗಳಲ್ಲಿ ಸ್ವಲ್ಪ ಇಳಿಕೆ; ಒಮಿಕ್ರಾನ್ ಏರಿಕೆ
ಕಾಸರಗೋಡು: 116 ಮಂದಿಗೆ ಸೋಂಕು; 2 ಸಾವುಕಾಸರಗೋಡು: ಜಿಲ್ಲೆಯಲ್ಲಿ ಸೋಮವಾರ 116 ಮಂದಿಗೆ ಸೋಂಕು ದೃಢಪಟ್ಟಿದ್ದು 44 ಮಂದಿ ಗುಣಮುಖರಾಗಿದ್ದಾರೆ. ಪ್ರಸ್ತುತ 796 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಬ್ಬರು ಮೃತಪಟ್ಟಿದ್ದು ಒಟ್ಟು ಸಂಖ್ಯೆ 842ಕ್ಕೇರಿದೆ. ಕೇರಳ 5,797 ಮಂದಿಗೆ ಸೋಂಕು
ರಾಜ್ಯದಲ್ಲಿ ಸೋಮವಾರ 5,797 ಮಂದಿಗೆ ಸೋಂಕು ದೃಢಪಟ್ಟಿದ್ದು 2,796 ಮಂದಿ ಗುಣಮುಖರಾಗಿದ್ದಾರೆ. 19 ಮಂದಿ ಮೃತಪಟ್ಟಿದ್ದು ಒಟ್ಟು ಸಂಖ್ಯೆ 49,757ಕ್ಕೇರಿದೆ. 37,736 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೊಡಗು: 19 ಮಂದಿಗೆ ಸೋಂಕು
ಮಡಿಕೇರಿ: ಜಿಲ್ಲೆಯಲ್ಲಿ ಸೋಮವಾರ 19 ಮಂದಿಗೆ ಸೋಂಕು ದೃಢಪಟ್ಟಿದ್ದು 12 ಮಂದಿ ಗುಣಮುಖರಾಗಿದ್ದಾರೆ. 270 ಸಕ್ರಿಯ ಪ್ರಕರಣಗಳಿವೆ. ಜಿಲ್ಲೆಯಲ್ಲಿ ಪಾಸಿಟಿವಿಟಿ ದರ ಶೇ. 6.31 ಆಗಿದೆ ಎಂದು ಜಿಲ್ಲಾಧಿಕಾರಿ ಡಾ| ಬಿ.ಸಿ. ಸತೀಶ ಅವರು ತಿಳಿಸಿದ್ದಾರೆ.