Advertisement
ಎಪಿಎಲ್, ಬಿಪಿಎಲ್ ಕಾರ್ಡ್ ಎಂಬ ಭೇದವಿಲ್ಲದೆ ಎಲ್ಲರೂ ಖಾಸಗಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ಪಡೆಯಲು ಅವಕಾಶವಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹೇಳಿದ್ದರೂ ಕೆಲವು ಖಾಸಗಿ ಆಸ್ಪತ್ರೆಗಳಲ್ಲಿ ಹಣ ವಸೂಲಿ ಮಾಡುತ್ತಿದ್ದಾರೆ ಎಂಬ ದೂರುಗಳ ಹಿನ್ನೆಲೆಯಲ್ಲಿ ದ.ಕ.ದ 8 ಮೆಡಿಕಲ್ ಕಾಲೇಜು ಮತ್ತು ಒಂದು ಆಸ್ಪತ್ರೆ ಸೇರಿ ಒಟ್ಟು 9 ಕಡೆ ಪ್ರತಿ ಆಸ್ಪತ್ರೆಯಲ್ಲಿ ಇಬ್ಬರಂತೆ ಆರೋಗ್ಯ ಮಿತ್ರ ಕಾರ್ಯಕರ್ತರನ್ನು ನೇಮಕ ಮಾಡಲಾಗಿದೆ. ಅವರು ಆಸ್ಪತ್ರೆಗೆ ಬರುವ ರೋಗಿಗಳಿಗೆ ನೆರವಾಗಲಿದ್ದಾರೆ.
ಕೋವಿಡ್ ಲಕ್ಷಣಗಳಿರುವ ರೋಗಿಗಳು ವೆನ್ಲಾಕ್‌ಗೆ ಬಂದು ಶಿಫಾರಸು ಪತ್ರದೊಂದಿಗೆ ಖಾಸಗಿ ಆಸ್ಪತ್ರೆಗಳಿಗೆ ತೆರಳಬೇಕು. ತುರ್ತ ಸಂದರ್ಭ ನೇರವಾಗಿ ಖಾಸಗಿ ಆಸ್ಪತ್ರೆಗಳಲ್ಲಿ ದಾಖಲಾದಲ್ಲಿ ರೋಗಿಗಳಿಗೆ ಇರುವ ಕಾಯಿಲೆಗೆ ಸಂಬಂಧಿಸಿದಂತೆ ಆಸ್ಪತ್ರೆಯವರು ವೆನ್ಲಾಕ್‌ಗೆ ರಿಕ್ವೆಸ್ಟ್ ಲೆಟರ್ ಕಳುಹಿಸುತ್ತಾರೆ. ಆ ಪತ್ರಕ್ಕೆ ವೆನ್ಲಾಕ್ ಅಧಿಕಾರಿಗಳು ಅನುಮತಿ ನೀಡುತ್ತಾರೆ. ಈ ಎಲ್ಲ ಪ್ರಕ್ರಿಯೆಗಳಿಗೆ ಆರೋಗ್ಯಮಿತ್ರರ ಸಹಾಯ ಪಡೆಯಬಹುದು.