Advertisement
ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಇಂದು ಆಯೋಜಿಸಿದ ಸಮಾರಂಭದಲ್ಲಿ ಸಂಸದ ನಳಿನ್ ಕುಮಾರ್ ಕಟೀಲು ಹಾಗೂ ತಮಿಳುನಾಡು ಬಿಜೆಪಿ ಅಧ್ಯಕ್ಷರಾದ ಅಣ್ಣಾಮಲೈ ಅವರು ಈ ಪ್ರಣಾಳಿಕೆಯನ್ನು ಅನಾವರಣಗೊಳಿಸಿದರು.ಸಂಪರ್ಕ, ಮೂಲಸೌಕರ್ಯ ಅಭಿವೃದ್ಧಿಯಲ್ಲಿ ದಾಪುಗಾಲು, ಕೈಗಾರಿಕೆ ಮತ್ತು ಬಂಡವಾಳ ಆಕರ್ಷಣೆ, ಸ್ಟಾರ್ಟ್ ಅಪ್ ಮತ್ತು ಉದ್ಯಮಶೀಲತೆ, ಪ್ರವಾಸೋದ್ಯಮ, ನಾರಿಶಕ್ತಿ, ಸಂಸ್ಕೃತಿ ಹಾಗೂ ಪರಂಪರೆ, ಕೃಷಿ, ಪಶುಸಂಗೋಪನೆ, ಮೀನುಗಾರಿಕೆ, ಯುವಜನತೆ ಮತ್ತು ಸಂವಹನ, ಕರಾವಳಿ ಅಭಿವೃದ್ಧಿ ಮತ್ತು ಭದ್ರತೆ ಅಂಶಗಳು ಇದರಲ್ಲಿವೆ.
ಬಿ.ಸಿ.ರೋಡ್-ಅಡ್ಡಹೊಳೆ ನಡು ವಿನ ರಾಷ್ಟ್ರೀಯ ಹೆದ್ದಾರಿ ಕಾಮ ಗಾರಿಯನ್ನು ಪೂರ್ತಿಗೊಳಿಸುವುದು ನಮ್ಮ ಆದ್ಯತೆ. ಅದೇ ರೀತಿ ಪ್ರಗತಿಯಲ್ಲಿರುವ ಬಿ.ಸಿ.ರೋಡ್-ಪುಂಜಾಲಕಟ್ಟೆ- ಚಾರ್ಮಾಡಿ ಹೆದ್ದಾರಿ, ಕುಲಶೇಖರದಿಂದ ಮೂಡುಬಿದಿರೆಯಾಗಿ ಸಾಂಗ್ಲಿ ವರೆಗಿನ ಹೆದ್ದಾರಿ, ಸಂಪಾಜೆಯಿಂದ ಮಾಣಿ ವರೆಗಿನ ಹೆದ್ದಾರಿ ಕಾಮಗಾರಿ, ಅಂತೆಯೇ ಪ್ರಾರಂಭಗೊಳ್ಳಲಿರುವ ಉಜಿರೆಯಿಂದ ಪೆರಿಯಶಾಂತಿ ವರೆಗಿನ ಹೆದ್ದಾರಿ ಕಾಮಗಾರಿ ಗಳನ್ನು ಆದ್ಯತೆ ಮೇರೆಗೆ ಪೂರ್ಣ ಗೊಳಿಸಲಾಗುವುದು ಎಂದು ಅವರು ತಿಳಿಸಿದರು.
Related Articles
Advertisement
ಹೊಸ ರೈಲು ಮಾರ್ಗ, ಕಾರಿಡಾರ್ಮಂಗಳೂರು-ಬೆಂಗಳೂರು ನಡುವೆ ಒಂದು ಹೊಸ ರೈಲು ಮಾರ್ಗದ ಕಲ್ಪನೆಯಿದೆ. ಪ್ರಯಾಣಿಕರು ಮತ್ತು ಸರಕು ಸಾಗಣೆಗೆ ಒಂದು ವೇಗದ ಕಾರಿಡಾರ್ ನಿರ್ಮಾಣ ಮಾಡುವ ಚಿಂತನೆಯಿದೆ. ಇದರಿಂದ ಮಂಗಳೂರು ಬಂದರಿನ ಅಭಿವೃದ್ಧಿಗೆ ಹೊಸ ವೇಗ ಸಿಗಬಹುದು. ಪ್ರವಾಸೋದ್ಯಮ ದೃಷ್ಟಿಯಿಂದ ಸಸಿಹಿತ್ಲು ಬೀಚನ್ನು ಸಾಹಸ ಕ್ರೀಡಾ ಕೇಂದ್ರವಾಗಿ ಅಭಿವೃದ್ಧಿಪಡಿಸುವುದು, ದೇಗುಲ ಪ್ರವಾಸೋದ್ಯಮ, ಪರಿಸರ ಪ್ರವಾಸೋದ್ಯಮಕ್ಕೆ ಆದ್ಯತೆ; ನಾರೀ ಶಕ್ತಿ ಅಭಿವೃದ್ಧಿಗೆ, ಮಹಿಳಾ ಸುರಕ್ಷತೆ ಮತ್ತು ಭದ್ರತೆ ಬಗ್ಗೆ ಹೆಚ್ಚಿನ ಆದ್ಯತೆ ನೀಡುವುದು ನಮ್ಮ ಯೋಜನೆಯಲ್ಲಿದೆ. ಎಂದು ಕ್ಯಾ| ಚೌಟ ತಿಳಿಸಿದ್ದಾರೆ. ಬ್ಯಾಕ್ ಟು ಊರು!
ನಮ್ಮ ಜಿಲ್ಲೆಯ ಜನರು ದೇಶದ ಬೇರೆ ಬೇರೆ ಭಾಗಗಳಿಗೆ ಹೋಗಿ ಉದ್ಯಮಶೀಲತೆಯನ್ನು ಬೆಳೆಸಿಕೊಂಡು ಯಶಸ್ಸು ಕಂಡಿದ್ದಾರೆ. ಅಂಥವರನ್ನು “ಬ್ಯಾಕ್ ಟು ಊರು’ ಎಂಬ ಚಿಂತನೆಯಲ್ಲಿ ಮರಳಿ ಊರಿಗೆ ಕರೆಸಿಕೊಳ್ಳುವ ಕಲ್ಪನೆಯಿದೆ. ಅವರನ್ನೆಲ್ಲ ಸಕಾರಾತ್ಮಕವಾಗಿ ತೊಡಗಿಸಿಕೊಂಡು ಈ ಜಿಲ್ಲೆಯ ಅಭಿವೃದ್ಧಿಗೆ ಹೇಗೆ ಕೆಲಸ ಮಾಡಬಹುದು ಎಂದು ಚಿಂತಿಸಿ ಅವರಿಗೆ ಪೂರಕವಾಗುವ ಸನ್ನಿವೇಶ ರೂಪಿಸುವ ಯೋಜನೆಯಿದೆ. “ಬಿ ಯುವರ್ ಓನ್ ಬಾಸ್’ ಎನ್ನುವ ಕಲ್ಪನೆಯಡಿ ಉದ್ಯಮಶೀಲರಾಗಲು ಯುವಕರಿಗೆ ಪ್ರೋತ್ಸಾಹ, ಗೇಮಿಂಗ್, ಆ್ಯನಿಮೇಶನ್, ಡಿಸೈನ್ ಮುಂತಾದ ಸೃಜನಶೀಲ ಕ್ಷೇತ್ರಗಳ ಬೆಳವಣಿಗೆಗೆ ಉತ್ತೇಜನ ನೀಡುವುದು, ದ.ಕ. ಜಿಲ್ಲೆ ಹಿಮ ಒಂದನ್ನು ಬಿಟ್ಟರೆ ಬೇರೆಲ್ಲ ಸಿಗುವ ಒಂದು ಪ್ರದೇಶ. ಹಾಗಾಗಿ ಇಲ್ಲಿ ಒಂದು ಫಿಲ್ಮ್ ಸಿಟಿ ನಿರ್ಮಿಸಲು ಪೂರಕ ಪ್ರಯತ್ನಗಳನ್ನು ಮಾಡಬೇಕೆಂಬ ಚಿಂತನೆಯಿದೆ ಎಂದು ಚೌಟ ಹೇಳಿದರು.