Advertisement

ದಕ್ಷಿಣಕನ್ನಡ ಜಿಲ್ಲೆಯಲ್ಲಿ ರಾತ್ರಿ ನಿರ್ಬಂಧ ರದ್ದು ; ನಿಷೇಧಾಜ್ಞೆ ವಿಸ್ತರಣೆ

10:27 AM Aug 08, 2022 | Team Udayavani |

ಮಂಗಳೂರು : ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ಹಾಗೂ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ರಾತ್ರಿ 9 ರಿಂದ ಬೆಳಗ್ಗೆ 6 ಗಂಟೆಯವರೆಗೆ ವಿಧಿ ಸಿದ್ದ ಕೆಲವು ನಿರ್ಬಂಧಗಳನ್ನು ಆ. 8ರ ಮುಂಜಾನೆಯಿಂದ ಅನ್ವಯವಾಗುವಂತೆ ರದ್ದುಗೊಳಿಸಲಾಗಿದೆ. ಆದರೆ ಮಂಗಳೂರು ಪೊಲೀಸ್‌ ಕಮಿಷನರೆಟ್‌ ಸೇರಿದಂತೆ ಜಿಲ್ಲೆಯಾದ್ಯಂತ ಇರುವ ನಿಷೇಧಾಜ್ಞೆಯನ್ನು ಆ. 14ರ ಮಧ್ಯರಾತ್ರಿ ವರೆಗೆ ವಿಸ್ತರಿಸಲಾಗಿದೆ.

Advertisement

ಎಲ್ಲ ವಾಣಿಜ್ಯ, ವ್ಯವಹಾರ ಮಳಿಗೆಗಳು, ಅಂಗಡಿಗಳು ಹಾಗೂ ಮದ್ಯದ ಅಂಗಡಿಗಳು ಆ. 8ರಿಂದ ಎಂದಿನಂತೆ ಕಾರ್ಯಾಚರಿಸಬಹುದಾಗಿದೆ ಎಂದು ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಡಾ| ಕೆ.ವಿ. ರಾಜೇಂದ್ರ ಆದೇಶದಲ್ಲಿ ತಿಳಿಸಿದ್ದಾರೆ. ವಾಹನ ಸಂಚಾರಕ್ಕೆ ಯಾವುದೇ ನಿರ್ಬಂಧಗಳಿರುವುದಿಲ್ಲ. ಆದರೆ ಅನಗತ್ಯ ರಾತ್ರಿ ಸಂಚಾರ ಬೇಡ ಎಂದು ಹೇಳಿದ್ದಾರೆ.

ಇದನ್ನೂ ಓದಿ : ಈ ಗ್ರಾಮದಲ್ಲಿ ಮುಸ್ಲಿಂ ಕುಟುಂಬ ಇಲ್ಲದಿದ್ದರೂ, ಹಿಂದೂಗಳೇ ಸೇರಿ ಮೊಹರಂ ಹಬ್ಬ ಆಚರಿಸುತ್ತಾರೆ

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next