Advertisement

ಕೋವಿಡ್ ಲಸಿಕಾ ಕೇಂದ್ರದಲ್ಲಿ ಜಾಗರೂಕತೆಯಿಂದ ಕರ್ತವ್ಯ ನಿರ್ವಹಿಸಲು ಜಿಲ್ಲಾಧಿಕಾರಿ ಸೂಚನೆ

04:47 PM Jan 14, 2021 | Team Udayavani |

ಮಂಗಳೂರು : ಕೋವಿಡ್ ನಿರೋಧಕ ಲಸಿಕೆ ಈಗಾಗಲೇ ಜಿಲ್ಲೆಗೆ ಆಗಮಿಸಿದ್ದು, ಜನವರಿ 16ರಂದು ಅಧಿಕೃತವಾಗಿ ಆರಂಭವಾಗಲಿದ್ದು ಜಿಲ್ಲೆಯ ಎಲ್ಲಾ ಕೇಂದ್ರದಲ್ಲಿ ಜಾಗರೂಕತೆಯಿಂದ ಕರ್ತವ್ಯ ನಿರ್ವಹಿಸಬೇಕೆಂದು ಅಧಿಕಾರಿಗಳಿಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಹೇಳಿದ್ದಾರೆ.

Advertisement

ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ನಡೆದ ಕೋವಿಡ್ 19 ಲಸಿಕಾ ಶಿಬಿರದ ಪೂರ್ವ ಸಿದ್ದತೆಯ ಕುರಿತ ಪೂರ್ವ ಭಾವಿ ಸಭೆಯಲ್ಲಿ ಮಾತನಾಡಿದ ಅವರು  ಜನವರಿ 16 ರಿಂದ ಜಿಲ್ಲೆಯ 6 ಲಸಿಕಾ ಕೇಂದ್ರಗಳಲ್ಲಿ ಲಸಿಕೆ ನೀಡುವ ಪ್ರಕ್ರಿಯೆ ಪ್ರಾರಂಭವಾಗುತ್ತಿದ್ದು, ವ್ಯಾಕ್ಸಿನೇಷನ್ ಪಡೆಯುವ ಫಲಾನುಭವಿಗಳನ್ನು ವೀಕ್ಷಣೆಯಲ್ಲಿಟ್ಟು ಅಡ್ಡ ಪರಿಣಾಮದ ಕುರಿತು ಖಾತ್ರಿ ಪಡಿಸಿಕೊಳ್ಳಿ ಎಂದರು.

ಮಂಗಳೂರು ಕೇಂದ್ರ‌ಕ್ಕೆ ಲಸಿಕೆ ತಲುಪಿದ್ದು, ಅದನ್ನು ಜಿಲ್ಲೆಯ 6 ಕೇಂದ್ರಗಳಿಗೆ ತಲುಪಿಸುವ ತಯಾರಿ ನಡೆದಿದೆ ಎಂದರು.

ಇದನ್ನೂ ಓದಿ:ನಾವು 17 ಮಂದಿ ಶಾಸಕರು ಮತ್ತೊಮ್ಮೆ ಸಭೆ ಸೇರಲಿದ್ದೇವೆ: ಆರ್.ಶಂಕರ್

ಉದ್ಘಾಟನೆಯ ದಿನದಂದು ಆರೋಗ್ಯ ಸಿಬ್ಬಂದಿಗಳಿಗೆ ಕೋವಿಡ್ ಲಸಿಕೆ ನೀಡಲಾಗುತ್ತದೆ. ಈವರೆಗೆ ಯಾವುದೇ ಅಡ್ಡ ಪರಿಣಾಮ ಯಾವುದೇ ಭಾಗದಲ್ಲಿ ಕಂಡುಬಂದಿಲ್ಲ ಅದರಂತೆ ಲಸಿಕೆ ನೀಡುವ ಮುನ್ನ ಫಲಾನುಭವಿಗಳನ್ನು ವೈದ್ಯಕೀಯ ತಪಾಸಣೆ ನಡೆಸಿ, 18 ವರ್ಷಕ್ಕಿಂತ ಮೇಲ್ಪಟ್ಟವರನ್ನು ಅತ್ಯಂತ ಸೂಕ್ಷ್ಮವಾಗಿ ತಪಾಸಣೆ ನಡೆಸಬೇಕು. ಫಲಾನುಭವಿಗಳಿಗೆ ಯಾವುದೇ ರೀತಿಯ ಗೊಂದಲ ಉಂಟಾಗದಂತೆ ಜಾಗೃತಿ ವಹಿಸಬೇಕು‌ ಹೇಳಿದರು.

Advertisement

ವ್ಯಾಕ್ಸಿನ್ ಕೇಂದ್ರದಲ್ಲಿ ಕುಡಿಯುವ ನೀರಿನ ವ್ಯವಸ್ಥೆ, ಮಾಸ್ಕ್, ಸ್ಯಾನಿಟೈಸರ್, ಥರ್ಮಲ್ ಸ್ಕ್ಯಾನರ್ ಸಮರ್ಪಕವಾಗಿ ಬಳಕೆಯಾಗುವಂತೆ ನಿಗಾ ವಹಿಸಬೇಕು ಹಾಗೂ ಇನ್ನಿತರ ಅಗತ್ಯ ವೈದ್ಯಕೀಯ ಉಪಕರಣಗಳು ಲಭ್ಯವಿರಬೇಕು. ಅದರ ಜೊತೆಗೆ ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದರು. ಒಂದು ವೇಳೆ ವ್ಯಾಕ್ಸಿನ್ ಪಡೆದ ವ್ಯಕ್ತಿಯಲ್ಲಿ ಯಾವುದೇ ತೊಂದರೆ ಕಂಡು ಬಂದಲ್ಲಿ ಸೂಕ್ತ ತಪಾಸನಣೆ ನಡೆಸಿ ತುರ್ತು ಚಿಕಿತ್ಸೆ ನೀಡಲು ಕ್ರಮಕೈಗೊಳ್ಳುವಂತೆ ಸೂಚಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next