Advertisement

ದಕ್ಷಿಣ ಕನ್ನಡ ಜಿಲ್ಲೆ: 10 ಮಂದಿಗೆ ಸೋಂಕು

02:04 AM Dec 04, 2021 | Team Udayavani |

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ 10 ಮಂದಿಗೆ ಕೊರೊನಾ ದೃಢಪಟ್ಟಿದ್ದು, ಯಾವುದೇ ಸಾವಿನ ವರದಿಯಾಗಿಲ್ಲ. 10 ಮಂದಿ ಗುಣಮುಖರಾಗಿದ್ದಾರೆ. 141 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ ಶೇ. 0.13ರಷ್ಟು ಪಾಸಿಟಿವಿಟಿ ದರ ದಾಖಲಾಗಿದೆ.

Advertisement

ಉಡುಪಿ: 19 ಮಂದಿಗೆ ಪಾಸಿಟಿವ್‌
ಉಡುಪಿ: ಜಿಲ್ಲೆಯಲ್ಲಿ ಶುಕ್ರವಾರ 19 ಮಂದಿಗೆ ಸೋಂಕು ದೃಢಪಟ್ಟಿದೆ. 4,327 ಮಂದಿಯನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. 7 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 82 ಪ್ರಕರಣಗಳು ಸಕ್ರಿಯವಾಗಿವೆ.

ಕಾಸರಗೋಡು: 79 ಮಂದಿಗೆ ಸೋಂಕು
ಕಾಸರಗೋಡು: ಜಿಲ್ಲೆಯಲ್ಲಿ ಶುಕ್ರವಾರ 79 ಮಂದಿಗೆ ಸೋಂಕು ದೃಢಪಟ್ಟಿದ್ದು 63 ಮಂದಿ ಗುಣಮುಖರಾಗಿದ್ದಾರೆ. ಪ್ರಸ್ತುತ 666 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಾವು ಸಂಭವಿಸಿಲ್ಲ.

ಕೇರಳದಲ್ಲಿ 4,995 ಮಂದಿಗೆ ಸೋಂಕು
ರಾಜ್ಯದಲ್ಲಿ ಶುಕ್ರವಾರ 4,995 ಮಂದಿಗೆ ಸೋಂಕು ದೃಢಪಟ್ಟಿದ್ದು 4,463 ಮಂದಿ ಗುಣಮುಖರಾಗಿದ್ದಾರೆ. 44 ಮಂದಿ ಮೃತಪಟ್ಟಿದ್ದು ಒಟ್ಟು ಸತ್ತವರ ಸಂಖ್ಯೆ 41,124 ಕ್ಕೇರಿದೆ. 44,637 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕೊಡಗು: 16 ಮಂದಿಗೆ ಸೋಂಕು
ಮಡಿಕೇರಿ: ಜಿಲ್ಲೆಯಲ್ಲಿ ಶುಕ್ರವಾರ 16 ಮಂದಿಗೆ ಸೋಂಕು ದೃಢಪಟ್ಟಿದ್ದು ಇಬ್ಬರು ಗುಣಮುಖರಾಗಿದ್ದಾರೆ. 79 ಸಕ್ರಿಯ ಪ್ರಕರಣಗಳಿವೆ. ಜಿಲ್ಲೆಯಲ್ಲಿ ಪಾಸಿಟಿವಿಟಿ ದರ ಶೇ. 0.63 ಆಗಿದೆ ಎಂದು ಜಿಲ್ಲಾಧಿಕಾರಿ ಡಾ| ಬಿ.ಸಿ.ಸತೀಶ ತಿಳಿಸಿದ್ದಾರೆ.

Advertisement

9 ವಿದ್ಯಾರ್ಥಿಗಳಲ್ಲಿ ಸೋಂಕು
ಕಳೆದ ಎರಡು ತಿಂಗಳಿನಿಂದ ನಿಯಂತ್ರಣದಲ್ಲಿದ್ದ ಕೋವಿಡ್‌ ಸೋಂಕು ಇದೀಗ ವಿದ್ಯಾರ್ಥಿಗಳನ್ನು ಕಾಡಲು ಆರಂಭಿಸಿದೆ. ಮಡಿಕೇರಿ ನಗರದ ಭಾರತೀಯ ವಿದ್ಯಾಭವನ ಕೊಡಗು ವಿದ್ಯಾಲಯದ 9 ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾಗಿದೆ.

ಕಳೆದ ವಾರ ಎಂಟನೇ ತರಗತಿಯ ಇಬ್ಬರು ವಿದ್ಯಾರ್ಥಿಗಳಲ್ಲಿ ಸೋಂಕು ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಎಲ್ಲ ವಿದ್ಯಾರ್ಥಿಗಳ ಆರೋಗ್ಯ ಪರೀಕ್ಷೆ ಮಾಡಲಾಗಿತ್ತು. ಶುಕ್ರವಾರ ಫ‌ಲಿತಾಂಶ ಲಭಿಸಿದ್ದು, ಅದೇ ತರಗತಿಯ 9 ವಿದ್ಯಾರ್ಥಿಗಳಲ್ಲಿ ಸೋಂಕು ಕಂಡು ಬಂದಿದೆ.

ಈ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಆರೋಗ್ಯಾಧಿಕಾರಿ 6ರಿಂದ 10ನೇ ತರಗತಿವರೆಗಿನ ಎಲ್ಲ ವಿದ್ಯಾರ್ಥಿಗಳಿಗೆ ಆರೋಗ್ಯ ಪರೀಕ್ಷೆ ನಡೆಸುವಂತೆ ಶಾಲಾ ಆಡಳಿತ ಮಂಡಳಿಗೆ ತಿಳಿಸಲಾಗಿದ್ದು, ಪರೀಕ್ಷೆಗಳು ಮುಂದುವರಿದಿದೆ. ಸೋಂಕಿಗೆ ತುತ್ತಾದ ವಿದ್ಯಾರ್ಥಿಗಳು ಲಕ್ಷಣ ರಹಿತರಾಗಿದ್ದಾರೆ ಮತ್ತು ಅವರ ಮನೆಗಳಲ್ಲಿ ಅವರನ್ನು ಪ್ರತ್ಯೇಕಿಸಲಾಗಿದೆ ಎಂದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next