Advertisement

ದಕ್ಷಿಣ ಕನ್ನಡ ಜಿಲ್ಲೆ ಕೋವಿಡ್‌ ಏರಿಕೆ: 21 ಮಂದಿಗೆ ಸೋಂಕು

01:16 AM Jul 10, 2022 | Team Udayavani |

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್‌ ಪ್ರಕರಣ ಮತ್ತೆ ಏರಿಕೆ ಕಂಡಿದೆ. ಕಳೆದ ಕೆಲ ದಿನಗಳಿಗೆ ಹೋಲಿಸಿದರೆ ಶನಿವಾರ ಗರಿಷ್ಠ 21 ಮಂದಿಗೆ ಕೋವಿಡ್‌ ದೃಢಪಟ್ಟಿದೆ. ಯಾವುದೇ ಸಾವಿನ ವರದಿಯಾಗಿಲ್ಲ.

Advertisement

17 ಮಂದಿ ಗುಣಮುಖರಾಗಿದ್ದಾರೆ. 86 ಸಕ್ರಿಯ ಪ್ರಕರಣಗಳಿವೆ. ಶೇ. 2.29 ಪಾಸಿಟಿವಿಟಿ ದರ ದಾಖಲಾಗಿದೆ.

ಉಡುಪಿಯಲ್ಲಿ ಶೂನ್ಯ ಪ್ರಕರಣ
ಉಡುಪಿ: ಜಿಲ್ಲೆಯಲ್ಲಿ ಶನಿವಾರ ಯಾವುದೇ ಕೋವಿಡ್‌ ಪ್ರಕರಣ ವರದಿಯಾಗಿಲ್ಲ. 140 ಮಂದಿಯನ್ನು ಪರೀಕ್ಷೆಗೊಳಪಡಿಸಿದ್ದು, ಇಬ್ಬರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಮೂವರು ಮೊದಲ ಡೋಸ್‌, 7 ಮಂದಿ ಎರಡನೇ ಡೋಸ್‌, 348 ಮಂದಿ ಮುನ್ನೆಚ್ಚರಿಕೆ ಲಸಿಕೆ ಪಡೆದುಕೊಂಡಿದ್ದಾರೆ ಎಂದು ಪ್ರಕಟನೆ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next