Advertisement
ನಗರದಲ್ಲಿ ಮಂಗಳವಾರ ಬೆಳಗ್ಗೆ ಪೊಲೀಸರು ಪಥಸಂಚಲನ ನಡೆಸಿದರು. ಸಿಬಂದಿ ಮತ್ತು ಅಧಿಕಾರಿಗಳು ಸೇರಿದಂತೆ ಸುಮಾರು 1,200 ಮಂದಿ ಪೊಲೀಸರು ಬಂದೋಬಸ್ತ್ ನಲ್ಲಿ ತೊಡಗಿಸಿಕೊಂಡಿದ್ದಾರೆ.
ಅಹಿತಕರ ಘಟನೆಗಳು ನಡೆ ಯದಂತೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಲ್ಲಿ ಮಾ. 19ರ ಸಂಜೆ 6ರ ವರೆಗೆ ಸೆ. 144 ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಕಲಿಕೆಯತ್ತ ಗಮನವಿರಲಿ
ವಿದ್ಯಾರ್ಥಿಗಳಲ್ಲಿ ಸಮಾನತೆಯ ಭಾವನೆ ಮೂಡಲು ಸಮವಸ್ತ್ರ ಅಗತ್ಯ. ವಿದ್ಯಾರ್ಥಿಗಳು ಕಲಿಕೆಗೆ ಆದ್ಯತೆ ನೀಡಬೇಕೇ ವಿನಾ ಇತರ ವಿಚಾರಗಳ ಬಗ್ಗೆ ವಿವಾದ, ಹಠಮಾರಿ ಧೋರಣೆ ತಳೆಯುವುದು ತರವಲ್ಲ. ಸಮರ್ಪಕವಾಗಿ ಅಧ್ಯಯನ ನಡೆಸಿ, ಉತ್ತಮ ಜೀವನ ರೂಪಿಸಿಕೊಳ್ಳುವಲ್ಲಿ ಎಲ್ಲ ವಿದ್ಯಾರ್ಥಿಗಳು ಮನಸ್ಸು ಮಾಡಬೇಕು ಎಂದು ಶಾಸಕ ವೇದವ್ಯಾಸ ಕಾಮತ್ ತಿಳಿಸಿದ್ದಾರೆ.
Related Articles
Advertisement
ನ್ಯಾಯಾಲಯದ ತೀರ್ಪು ಐತಿಹಾಸಿಕ ಹಾಗೂ ಸ್ವಾಗತಾರ್ಹ. ಕೆಲವು ಶಕ್ತಿಗಳು ವಿದ್ಯಾರ್ಥಿಗಳ ಮನಸ್ಸಿನಲ್ಲಿ ಅನಗತ್ಯ ಗೊಂದಲ ಸೃಷ್ಟಿಸಿ ಸಾಮರಸ್ಯವನ್ನು ಹಾಳುಗೆಡವಿದ್ದಾರೆ. ಎಲ್ಲರೂ ನ್ಯಾಯಾಲಯದ ತೀರ್ಪನ್ನು ಗೌರವಿಸಿ ಅನುಸರಿಸಬೇಕು, ಸರಕಾರ ಈಗಾಗಲೇ ಶಾಲೆಗಳಲ್ಲಿ ಹಿಜಾಬ್ ಧರಿಸುವಂತಿಲ್ಲ ಎಂದು ಆದೇಶ ಹೊರಡಿಸಿತ್ತು. ನ್ಯಾಯಾಲಯ ಅದನ್ನೇ ಎತ್ತಿ ಹಿಡಿದಿದೆ. ವಿದ್ಯಾರ್ಥಿನಿಯರು ಆದೇಶವನ್ನು ಪಾಲಿಸಿ ಉತ್ತಮ ಶಿಕ್ಷಣ ಪಡೆದು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು. ಸಾಮರಸ್ಯದ ಸಮಾಜ ನಿರ್ಮಾಣಕ್ಕೆ ಪ್ರೇರಣೆಯಾಗಬೇಕು.– ಎಸ್. ಅಂಗಾರ, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ