Advertisement
ದ.ಕ. ಜಿ.ಪಂ.ನಲ್ಲಿ ಸೋಮವಾರ ನಡೆದ ತ್ತೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ಮಾತನಾಡಿ, ನಗರ ಪ್ರದೇಶದಲ್ಲಿ ಸುಮಾರು 9,000 ಹಾಗೂ ಗ್ರಾಮಾಂತರ ದಲ್ಲಿ 20,000 ಮಂದಿ ನಿವೇಶನ ಕ್ಕಾಗಿ ಅರ್ಜಿ ಸಲ್ಲಿಸಿದ್ದು, 120 ಎಕರೆ ಜಮೀನು ಮೀಸಲಿದೆ. ಕುಮ್ಕಿ, ಡೀಮ್ಡ್ ಫಾರೆಸ್ಟ್ ಸೇರಿದಂತೆ ಯಾವುದೇ ಸಮಸ್ಯೆ ಇಲ್ಲದ ಜಮೀನು ಲಭ್ಯವಿದ್ದರೆ ಅದರ ಬಗ್ಗೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು.
ಸಚಿವ ಕೋಟ ಮಾತನಾಡಿ, ದ.ಕ. ಜಿಲ್ಲೆ ಯಲ್ಲಿ ಈ ಹಿಂದೆ ಸರಕಾರಿ, ವೈದ್ಯ ಕೀಯ ಕಾಲೇಜು ಸೇರಿದಂತೆ ಒಟ್ಟು 13 ಆಸ್ಪತ್ರೆಯಲ್ಲಿ ಕೊರೊನಾಕ್ಕೆ ಆಯುಷ್ಮಾನ್‌ನಡಿ ಉಚಿತ ಚಿಕಿತ್ಸೆ ನೀಡಲಾಗುತ್ತಿತ್ತು.ಇದೀಗ ಮತ್ತೆ 60 ಖಾಸಗಿ ಆಸ್ಪತ್ರೆಗಳು ಆಯುಷ್ಮಾನ್ ಯೋಜನೆಯಡಿ ನೋಂದಾಯಿಸಿ ಕೊಂಡಿದ್ದು ಈ ಎಲ್ಲ ಆಸ್ಪತ್ರೆ ಗಳಲ್ಲಿ ಆಯುಷ್ಮಾನ್‌ನಡಿ ಚಿಕಿತ್ಸೆ ಸಂಪೂರ್ಣ ಉಚಿತವಾಗಿರಲಿದೆ ಎಂದರು.
Related Articles
Advertisement
ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು, ಶಾಸಕರಾದ ಯು.ಟಿ. ಖಾದರ್, ಡಾ| ವೈ. ಭರತ್ ಶೆಟ್ಟಿ, ಹರೀಶ್ ಪೂಂಜ, ರಾಜೇಶ್ ನಾಯ್ಕ, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಉಪಾಧ್ಯಕ್ಷೆ ಕಸ್ತೂರಿ ಪಂಜ, ಸ್ಥಾಯೀ ಸಮಿತಿ ಅಧ್ಯಕ್ಷರಾದ ರವೀಂದ್ರ ಕಂಬಳಿ, ಮಮತಾ, ಧನಲಕ್ಷ್ಮೀ, ಜಿ.ಪಂ. ಸಿಇಒ ಡಾ| ಸೆಲ್ವಮಣಿ, ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀಪ್ರಸಾದ್, ಮನಪಾ ಆಯುಕ್ತ ಅಕ್ಷಯ್ ಶ್ರೀಧರ್, ಡಿಸಿಪಿ ಅರುಣಾಂಶುಗಿರಿ ಉಪಸ್ಥಿತರಿದ್ದರು.
ಶಾಸಕರ ಬೇಡಿಕೆಗಳುಹಲವಾರು ಪಿಂಚಣಿದಾರರಿಗೆ ಪಿಂಚಣಿ ವಿಳಂಬವಾಗುತ್ತಿರುವ ಕುರಿತಂತೆ ಶಾಸಕ ಯು.ಟಿ. ಖಾದರ್ ತಿಳಿಸಿ ತಾಲೂಕು ಮಟ್ಟದಲ್ಲಿ ಪಿಂಚಣಿ ಅದಾಲತ್ ನಡೆಸುವಂತೆ ಕೋರಿದರು. ವಿದ್ಯುತ್ ಮೀಟರ್ ರೀಡಿಂಗ್ ಕೆಲವೆಡೆ ನಡೆಯುತ್ತಿಲ್ಲ, ಅದನ್ನು ಸರಿಪಡಿಸಬೇಕು ಹಾಗೂ ಗೋಮಾಳದ ಜಾಗವನ್ನು ಹಾಲು ಉತ್ಪಾದಕರ ಸಂಘಗಳಿಗೆ ಹುಲ್ಲು ಬೆಳೆಯಲು ನೀಡಬೇಕು ಎಂದು ಶಾಸಕ ಹರೀಶ್ ಪೂಂಜ ಆಗ್ರಹಿಸಿದರು. ಮಂದಾರದ ತ್ಯಾಜ್ಯ ಸಮಸ್ಯೆಗೆ ಮುಕ್ತಿ ನೀಡಲು ಕ್ರಮ ಕೈಗೊಳ್ಳುವಂತೆ ಶಾಸಕ ಡಾ| ವೈ. ಭರತ್ ಶೆಟ್ಟಿ ಆಗ್ರಹಿಸಿದರು. ಸಾರ್ವಜನಿಕ ರಸ್ತೆ ನಿರ್ಮಿಸುವ ಸಂದರ್ಭ ಎದುರಾಗುವ ಕೆಲವೊಂದು ಅಡ್ಡಿ ಸಮಸ್ಯೆಗಳನ್ನು ಅಧಿಕಾರಿಗಳು ಪ್ರಾಮಾಣಿಕವಾಗಿ ನಿವಾರಿಸಬೇಕು ಎಂದು ಶಾಸಕ ರಾಜೇಶ್ ನಾೖಕ್ ಹೇಳಿದರು. ಮರಳು ನಿರ್ದಿಷ್ಟ ಸಮಯದೊಳಗೆ ಸಿಗುವಂತೆ ಕ್ರಮ ಕೈಗೊಳ್ಳಬೇಕು ಎಂದು ಪ್ರತಾಪ್‌ಸಿಂಹ ನಾಯಕ್ ಆಗ್ರಹಿಸಿದರು. ಬಿ.ಸಿ.ರೋಡ್- ಅಡ್ಡಹೊಳೆ ರಸ್ತೆ; ಕ್ರಿಮಿನಲ್ ಪ್ರಕರಣದ ಎಚ್ಚರಿಕೆ
ಬಿ.ಸಿ.ರೋಡ್-ಅಡ್ಡಹೊಳೆ ರಸ್ತೆ ತೀರಾ ಹದಗೆಟ್ಟಿದ್ದು, ವಾಹನ ಸವಾರರು ಅನಿವಾರ್ಯವಾಗಿ ಬದಲಿ ಮಾರ್ಗಗಳನ್ನು ಹಿಡಿಯುತ್ತಿರುವುದು ಕಂಡುಬಂದಿದೆ. ಈವರೆಗೆ ಕಾಮಗಾರಿಗೆ ಮಳೆ ಅಡ್ಡಿಯಾಗಿತ್ತು. ಇನ್ನು ಆ ಕಾರಣ ಬೇಡ. 15 ದಿನಗಳಲ್ಲಿ ಗುಂಡಿ ಮುಚ್ಚುವ ಕೆಲಸ ಮಾಡಬೇಕು. ಕೆಲಸ ಆಗದೆ ಒಂದು ವೇಳೆ ಯಾವುದೇ ರೀತಿಯ ಅವಘಡ ಸಂಭವಿಸಿದರೆ ರಾ.ಹೆ. ಪ್ರಾಧಿಕಾರದ ಅಧಿಕಾರಿಗಳ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು.
– ಡಾ| ರಾಜೇಂದ್ರ, ದ.ಕ. ಜಿಲ್ಲಾಧಿಕಾರಿ