Advertisement
8,87,122 ಪುರುಷ ಮತ್ತು 9,30,928 ಮಹಿಳಾ ಮತದಾರರು ಸೇರಿ 18,18,127 ಮಂದಿ ಅರ್ಹ ಮತದಾರರು ಜಿಲ್ಲೆಯ 1876 ಮತಗಟ್ಟೆಗಳಲ್ಲಿ ಮತ ಚಲಾಯಿ ಸಲಿದ್ದಾರೆ ಎಂದು ದ.ಕ. ಜಿಲ್ಲಾ ಚುನಾವ ಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದ್ದಾರೆ.
ಎ. 24ರಂದು ಸಂಜೆ 6 ಗಂಟೆಗೆ ಮುನ್ನ ಎಲ್ಲ ರಾಜಕೀಯ ಪಕ್ಷಗಳು ಬಹಿರಂಗ ಪ್ರಚಾರ ಅಂತ್ಯಗೊಳಿಸಬೇಕು. ಅನಂತರ ಕ್ಷೇತ್ರದ ಮತದಾರರಲ್ಲದ ರಾಜಕೀಯ ಪಕ್ಷಗಳ ಮುಖಂಡರು, ಕಾರ್ಯಕರ್ತರು ಕ್ಷೇತ್ರದಲ್ಲಿ ಇರುವಂತಿಲ್ಲ. ಮತದಾನದ ದಿನದಂದು ಮತದಾನ ಮಾಡಲು ಅನುಕೂಲವಾಗುಂತೆ ಸರಕಾರಿ ಮತ್ತು ಖಾಸಗಿ ವಲಯದಲ್ಲಿ ಕಾರ್ಯನಿರ್ವ ಹಿಸುತ್ತಿರುವ ನೌಕರರಿಗೆ ವೇತನ ಸಹಿತ ಕಡ್ಡಾಯ ರಜೆ ನೀಡಬೇಕು ಎಂದರು.
ಕರ್ತವ್ಯ ನಿರತ 1,052 ಸರಕಾರಿ ನೌಕರರು ಮತ ಚಲಾಯಿಸಿದ್ದಾರೆ. 85 ವರ್ಷ ಮೇಲ್ಪಟ್ಟ 5,878 ಮತ್ತು 1,929 ಮಂದಿ ಅಂಗವಿಕಲ ಮತದಾರರು ಮತ್ತು ಅಗತ್ಯ ಸೇವೆ ಎಂದು ಗುರುತಿಸಲಾದ ಇಲಾಖಾ ಅಧಿಕಾರಿಗಳ ಪೈಕಿ 100 ಮಂದಿ ಈಗಾಗಲೇ ಮತ ಚಲಾವಣೆ ಮಾಡಿದ್ದಾರೆ ಎಂದರು.
Related Articles
ಸ್ಕ್ಯಾನ್ ಮಾಡುವ ಮೂಲಕ ಮತದಾನ ಕೇಂದ್ರದ ಮಾಹಿತಿ ಪಡೆಯಬಹುದಾಗಿದೆ ಎಂದರು.
Advertisement
ಮಾದರಿ ಮತಗಟ್ಟೆಗಳುಜಿಲ್ಲೆಯಲ್ಲಿ ಒಟ್ಟು 72 ಮತಗಟ್ಟೆ ಗಳನ್ನು ಮಾದರಿ ಮತಗಟ್ಟೆಗಳು ಎಂದು ಗುರುತಿಸಲಾಗಿದೆ. ಇದರಲ್ಲಿ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ 5ರಂತೆ ಸಖೀ ಬೂತ್, ಅಂಗವಿಕಲ, ಯುವ ಮತದಾರರ, ಧ್ಯೇಯ ಆಧಾರಿತ ಮತ್ತು ಸಾಂಪ್ರದಾಯಿಕ ತಲಾ 1 ಬೂತ್ ಇರಲಿದೆ. ಸಖೀ ಮತಗಟ್ಟೆಯಲ್ಲಿ ಸಂಪೂರ್ಣ ಮಹಿಳಾ ಸಿಬಂದಿಯೇ ಇರುವರು. 938 ಮತಗಟ್ಟೆಗಳಲ್ಲಿ ವೆಬ್ ಕಾಸ್ಟಿಂಗ್ ನಡೆಯಲಿದೆ ಎಂದರು. ಮತಯಂತ್ರ- ವಿವಿಪ್ಯಾಟ್
ಚುನಾವಣ ಕಾರ್ಯಕ್ಕೆ ಉಪಯೋಗಿ ಸುವ ವಿದ್ಯುನ್ಮಾನ ಮತಯಂತ್ರ ಹಾಗೂ ವಿವಿಪ್ಯಾಟ್‌ಗಳನ್ನು ಸಿದ್ಧಪಡಿಸಲಾಗಿದೆ. ಒಟ್ಟು 2,334 ಬ್ಯಾಲೆಟ್ ಯುನಿಟ್ ಹೆಚ್ಚುವರಿಯಾಗಿ 458 ಮೀಸಲು ಇಟ್ಟು ಕೊಳ್ಳಲಾಗಿದೆ. 2,359 ಕಂಟ್ರೋಲ್ ಯುನಿಟ್ 483 ಹೆಚ್ಚುವರಿ, 2,484 ವಿವಿ ಪ್ಯಾಟ್ ಮತ್ತು 608 ಹೆಚ್ಚುವರಿ ಯಾಗಿ ಇಟ್ಟುಕೊಳ್ಳಲಾಗಿದೆ. ಹೆಚ್ಚುವರಿ ಯಂತ್ರಗಳು ಜಿಪಿಎಸ್ ಹೊಂದಿರುವ ವಾಹನಗಳಲ್ಲಿ ಸಿಎಪಿಎಫ್ ಸಿಬಂದಿ ಯೊಂದಿಗೆ ಸೆಕ್ಟರ್ ಅಧಿಕಾರಿಯ ಸುಪರ್ದಿಯಲ್ಲಿರಲಿದೆ ಎಂದು ವಿವರಿಸಿದರು. ಮಸ್ಟರಿಂಗ್- ಡಿ ಮಸ್ಟರಿಂಗ್
ಬೆಳ್ತಂಗಡಿ-ಎಸ್‌ಡಿಎಂ ಪಪೂ ಕಾಲೇಜು ಉಜಿರೆ, ಮೂಡುಬಿದಿರೆ- ಮಹಾವೀರ ಪ್ರ.ದ. ಕಾಲೇಜು ಮೂಡುಬಿದಿರೆ, ಮಂಗಳೂರು ನಗರ ಉತ್ತರ- ಸಂತ ಅಲೋಶಿಯಸ್ ಪಪೂ ಕಾಲೇಜು ಕೊಡಿಯಾಲಬೈಲು, ಮಂಗಳೂರು ನಗರ ದಕ್ಷಿಣ – ಕೆನರಾ ಹೈಸ್ಕೂಲ್ ಉರ್ವ, ಲಾಲ್‌ಬಾಗ್, ಮಂಗಳೂರು-ಮಂಗಳೂರು ವಿವಿ ಹ್ಯಮಾನಿಟೀಸ್ ವಿಭಾಗ ಕೊಣಾಜೆ, ಬಂಟ್ವಾಳ- ಇನೆ#ಂಟ್ ಜೀಸಸ್ ಆಂಗ್ಲ- ಕನ್ನಡ ಮಾಧ್ಯಮ ಶಾಲೆ ಮೊಡಂಕಾಪು, ಪುತ್ತೂರು- ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ತೆಂಕಿಲ, ಸುಳ್ಯ-ನೆಹರೂ ಮೆಮೋರಿಯಲ್ ಕಾಲೇಜು ಸುಳ್ಯ. ಭದ್ರತಾ ಕೊಠಡಿ, ಮತ ಎಣಿಕೆ ಕೇಂದ್ರ
ವಿಧಾನ ಸಭಾ ಕ್ಷೇತ್ರದಲ್ಲಿ ಡಿ-ಮಸ್ಟರಿಂಗ್ ಕಾರ್ಯ ಮುಕ್ತಾಯ ವಾದ ಬಳಿಕ ಕೇಂದ್ರಗಳಿಂದ ಇವಿಎಂ, ವಿವಿಪ್ಯಾಟ್ ಮತ್ತು ದಾಖಲೆಗಳನ್ನು ಮತ ಎಣಿಕೆ ಕೇಂದ್ರವಾದ ಎನ್‌ಐಟಿಕೆ ಸುರತ್ಕಲ್‌ನಲ್ಲಿರುವ ಭದ್ರತಾ ಕೊಠಡಿಯಲ್ಲಿ ಇರಿಸಲಾಗುತ್ತದೆ. ಜಿ.ಪಂ. ಸಿಇಒ ಡಾ| ಆನಂದ್, ಪೊಲೀಸ್ ಕಮಿಷನರ್ ಅನುಪಮ್ ಅಗರ್‌ವಾಲ್, ದ.ಕ. ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ. ರಿಷ್ಯಂತ್ ಹಾಗೂ ಅಪರ ಜಿಲ್ಲಾಧಿಕಾರಿ ಡಾ| ಸಂತೋಷ್ ಕುಮಾರ್ ಉಪಸ್ಥಿತರಿದ್ದರು. ದಕ್ಷಿಣ ಕನ್ನಡ: ಎ. 24ರಿಂದ ಪ್ರತಿಬಂಧಕಾಜ್ಞೆ ಜಾರಿ
ಮಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಹಾಗೂ ಮುಕ್ತ ಮತ್ತು ನ್ಯಾಯೋಚಿತ ಮತದಾನಕ್ಕೆ ಅವಕಾಶ ಕಲ್ಪಿಸುವ ಹಿನ್ನೆಲೆಯಲ್ಲಿ ಎ. 24ರಂದು ಸಂಜೆ 6ಗಂಟೆಯಿಂದ ಎ. 26ರಂದು ರಾತ್ರಿ 10 ಗಂಟೆಯ ವರೆಗೆ ಪ್ರತಿಬಂಧಕಾಜ್ಞೆ ಜಾರಿಗೊಳಿಸಲಾಗಿದೆ. ಜಿಲ್ಲೆಯಾದ್ಯಂತ 5ಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು ಮೆರವಣಿಗೆ ಅಥವಾ ಸಭೆ, ಸಮಾರಂಭ ಆಯೋಜಿಸುವುದನ್ನು ನಿಷೇ ಧಿಸಿದೆ. ಚುನಾವಣ ಅಭ್ಯರ್ಥಿ/ ಬೆಂಬಲಿಗರು ಸೇರಿ 5ಕ್ಕಿಂತ ಹೆಚ್ಚಿನ ಸಂಖ್ಯೆಯ ಜನರು ಸೇರುವಂತಿಲ್ಲ. ಯಾವುದೇ ಮಾರಕಾಸ್ತ್ರ ತೆಗೆದುಕೊಂಡು ಹೋಗುವುದನ್ನು ನಿರ್ಬಂಧಿ ಸಲಾಗಿದೆ. ಮತದಾನದ ದಿನದಂದು ಮತಗಟ್ಟೆಗಳ 200 ಮೀ. ಒಳಗೆ ಚುನಾವಣೆ ಪ್ರಚಾರ ನಿಷೇಧಿಸಿದೆ. ಸಾರ್ವಜನಿಕ ಗಾಂಭೀರ್ಯ ಹಾಗೂ ನೈತಿಕತೆಗೆ ಭಂಗ ತರುವಂತಹ ಅಥವಾ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ತರುವಂತಹ ಯಾವುದೇ ಕೃತ್ಯಗಳಲ್ಲಿ ತೊಡಗುವುದನ್ನು ನಿಷೇ ಧಿಸಲಾಗಿದೆ. ಶವ ಸಂಸ್ಕಾರಕ್ಕೆ ಅಥವಾ ಮದುವೆ ಮತ್ತು ಧಾರ್ಮಿಕ ಮೆರವಣಿಗೆಗಳಿಗೆ ಹಾಗೂ ಕೋವಿಡ್ -19ರ ಕಾರ್ಯಗಳಿಗೆ ಈ ಆಜ್ಞೆ ಅನ್ವಯಿಸುವುದಿಲ್ಲ. ಮದುವೆ ಮತ್ತು ಇತರೆ ಧಾರ್ಮಿಕ ಮೆರವಣಿಗೆಗಳಲ್ಲಿ ಚುನಾವಣ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ನಿಯಮಗಳನ್ನು ಪಾಲಿಸಬೇಕು. ಕಲ್ಯಾಣ ಮಂಟಪಗಳು, ಸಮುದಾಯ ಭವನಗಳು, ಹೊಟೇಲ್‌ಗಳು ಮತ್ತು ಅತಿಥಿ ಗೃಹಗಳಲ್ಲಿ ವಾಸ್ತವ್ಯ ಮಾಡಿರುವವರ ಪಟ್ಟಿಗಳ ಪರಿಶೀಲನೆ ಮಾಡಿ ಕ್ಷೇತ್ರದ ಮತದಾರರಲ್ಲದ ರಾಜಕೀಯ ಪಕ್ಷಗಳ ವ್ಯಕ್ತಿಗಳನ್ನು ಕ್ಷೇತ್ರದ ವ್ಯಾಪ್ತಿಯಿಂದ ಹೊರಗೆ ಕಳುಹಿಸಲು ಕ್ರಮ ವಹಿಸಲಾಗುತ್ತದೆ ಎಂದು ಜಿಲ್ಲಾ ದಂಡಾ ಕಾರಿಗಳೂ ಹಾಗೂ ಜಿಲ್ಲಾಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.