Advertisement

Dakshina Kannada: ವೈದ್ಯಕೀಯ ಸೇವೆ ಅಭಾದಿತ

11:59 PM Aug 12, 2024 | Team Udayavani |

ಮಂಗಳೂರು: ಶಿಷ್ಯ ವೇತನ ಹೆಚ್ಚಳಕ್ಕೆ ಆಗ್ರಹಿಸಿದ ರಾಜ್ಯ ಸರಕಾರದ ವಿರುದ್ಧ ಕರ್ನಾಟಕ ನಿವಾಸಿ ವೈದ್ಯರ ಸಂಘದ ವೈದ್ಯಕೀಯ ಸ್ನಾತಕೋತ್ತರ ವಿದ್ಯಾರ್ಥಿಗಳು ಹಮ್ಮಿಕೊಂಡಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಮೊದಲ ದಿನವಾದ ಸೋಮವಾರ ಮಂಗಳೂರಿನಲ್ಲಿ ಯಾವುದೇ ಸ್ಪಂದನೆ ಸಿಕ್ಕಿಲ್ಲ.

Advertisement

ಎಲ್ಲ ವೈದ್ಯಕೀಯ ಸೇವೆಗಳೂ ಅಬಾಧಿತವಾಗಿತ್ತು. ಮಂಗಳೂರಿನ ಜಿಲ್ಲಾ ವೆನ್ಲಾಕ್‌ ಆಸ್ಪತ್ರೆ ಮತ್ತು ಲೇಡಿಗೋಷನ್‌ ಆಸ್ಪತ್ರೆಗಳು ವೈದ್ಯಕೀಯ ಸೇವೆಗಾಗಿ ಕೆಎಂಸಿ ಆಸ್ಪತ್ರೆಯೊಂದಿಗೆ ಸಂಯೋಜನೆಗೊಂಡಿರುವುದರಿಂದ ಆರೋಗ್ಯ ಸೇವೆಗಳನ್ನು ಎಂದಿನಂತೆ ನೀಡಲಾಗಿದೆ. ಆದರೆ ಕೋಲ್ಕತಾದಲ್ಲಿ ವೈದ್ಯಕೀಯ ವಿದ್ಯಾರ್ಥಿನಿಯ ಹತ್ಯೆ ಖಂಡಿಸಿ ವೈದ್ಯರು ಕಪ್ಪು ಪಟ್ಟಿ ಧರಿಸಿ ಕರ್ತವ್ಯಕ್ಕೆ ಹಾಜರಾಗಿದ್ದರು.

ಜಿಲ್ಲೆಯ ಇತರೆಡೆಗಳಲ್ಲಿಯೂ ಯಾವುದೇ ಸಮಸ್ಯೆ ಉಂಟಾಗಿಲ್ಲ ಎಂದು ಜಿಲ್ಲಾ ಆರೋಗ್ಯಾಧಿಕಾರಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next