ಮಂಗಳೂರು: ದಕ್ಷಿಣ ಕನ್ನಡದಲ್ಲಿ ರವಿವಾರ ದಿನವಿಡೀ ಹಗಲಿನಲ್ಲಿ ಬಿಟ್ಟು ಬಿಟ್ಟು ಮಳೆಯಾಗಿದೆ. ಸಂಜೆಯ ಬಳಿಕ ಕೆಲವು ಕಡೆ ಗಾಳಿ ಸಹಿತ ಧಾರಾಕಾರ ಮಳೆ ಸುರಿದಿದೆ.
ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟದಲ್ಲಿ ನೀರಿನ ಪ್ರಮಾಣ ತುಸು ತಗ್ಗಿದೆ. ಮಂಗಳೂರಿನಲ್ಲಿ ಬಿಟ್ಟು ಬಿಟ್ಟು ದಿನವಿಡೀ ಗಾಳಿ-ಮಳೆಯಾಗಿದೆ.
ಬಂಟ್ವಾಳ, ಬೆಳ್ತಂಗಡಿ ಸಹಿತ ಜಿಲ್ಲೆಯ ನದಿಗಳಲ್ಲಿನ ನೆರೆ ಪ್ರಮಾಣ ಕಡಿಮೆಯಾಗಿದೆ. ಹಲವು ದಿನಗಳ ಬಳಿಕ ಭತ್ತದ ಗದ್ದೆಯಲ್ಲಿ ನೀರು ಇಳಿಕೆಯಾಗಿದ್ದರಿಂದ ಕೃಷಿಕರ ಆತಂಕ ಸ್ವಲ್ಪ ಮಟ್ಟಿಗೆ ದೂರವಾಗಿದೆ.
ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ ಕರಾವಳಿಯಲ್ಲಿ ಉತ್ತಮ ಮಳೆ ಮುಂದುವರಿಯುವ ಸಾಧ್ಯತೆ ಇದ್ದು, ಜು.22ರಂದು ಬೆಳಗ್ಗೆ 8.30ರ ವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಬಳಿಕ ಜು. 25ರ ವರೆಗೆ ಎಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ಅವಧಿಯಲ್ಲಿ ಮಳೆ ಮತ್ತಷ್ಟು ಕಡಿಮೆಯಾಗುವ ಸಂಭವ ಇದೆ.