Advertisement
ಜಿಲ್ಲೆಯಲ್ಲಿ 83 ಮಂದಿಗೆ ಹೊಸದಾಗಿ ಕೋವಿಡ್ 19 ಸೋಂಕು ದೃಢಪಟ್ಟಿದೆ.
Related Articles
Advertisement
ಕೋಟೆಬಾಗಿಲಿನಲ್ಲಿ ದಫನಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟ ಸೋಂಕಿತ ವ್ಯಕ್ತಿಯ ಮೃತದೇಹವನ್ನು ಕೋವಿಡ್- 19ರ ಮಾರ್ಗಸೂಚಿಯಂತೆ ಕೋಟೆ ಬಾಗಿಲಿನಲ್ಲಿ ದಫನ ಮಾಡಲಾಯಿತು. ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಮೃತರ ಮನೆ ಮತ್ತು ಅವರ ಹತ್ತಿರದಲ್ಲಿರುವ ಸಂಬಂಧಿಕರೊಬ್ಬರ ಮನೆಯನ್ನು ಸೀಲ್ ಡೌನ್ ಮಾಡಲಾಯಿತು. 83 ಮಂದಿಗೆ ಸೋಂಕು
ಜಿಲ್ಲೆಯಲ್ಲಿ ಮಂಗಳವಾರ 83 ಮಂದಿಗೆ ಕೊರೊನಾ ದೃಢಪಟ್ಟಿದೆ. ಈ ಪೈಕಿ 48 ಮಂದಿಗೆ ಸೋಂಕಿತರ ಪ್ರಾಥಮಿಕ ಸಂಪರ್ಕದಿಂದ, ಇಬ್ಬರಿಗೆ ದ್ವಿತೀಯ ಸಂಪರ್ಕದಿಂದ, 21 ಮಂದಿಗೆ ತೀವ್ರ ಉಸಿರಾಟದ ಸಮಸ್ಯೆಯಿಂದ, ಇಬ್ಬರಿಗೆ ಚಿಕ್ಕಮಗಳೂರಿಗೆ ಪ್ರಯಾಣ ಮಾಡಿದ ಹಿನ್ನೆಲೆಯಲ್ಲಿ ಕೋವಿಡ್ 19 ಸೋಂಕು ಬಾಧಿಸಿದೆ. 3 ಮಂದಿಗೆ ರ್‍ಯಾಂಡಮ್ ಪರೀಕ್ಷೆ ವೇಳೆ, 3 ಮಂದಿಗೆ ಶಸ್ತ್ರಚಿಕಿತ್ಸೆಗೂ ಮುನ್ನ ಮತ್ತು ಓರ್ವರಿಗೆ ಹೆರಿಗೆಗೂ ಮುನ್ನ ಪರೀಕ್ಷಿಸಿದಾಗ ಕೋವಿಡ್ 19 ಸೋಂಕು ದೃಢಪಟ್ಟಿದೆ. 3 ಮಂದಿಯ ಸಂಪರ್ಕವನ್ನು ಪತ್ತೆಹಚ್ಚಲಾಗುತ್ತಿದೆ. ಪ್ರಾಥಮಿಕ ಸಂಪರ್ಕದಿಂದ 11 ತಿಂಗಳ ಗಂಡು ಮಗುವಿಗೂ ಕೊರೊನಾ ಬಾಧಿಸಿದೆ. 99 ಮಂದಿ ಬಿಡುಗಡೆ
ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 99 ಮಂದಿ ಕೊರೊನಾ ಮುಕ್ತರಾಗಿ ಮಂಗಳವಾರ ಬಿಡುಗಡೆಗೊಂಡಿದ್ದಾರೆ. ಇಲ್ಲಿಯವರೆಗೆ 683 ಮಂದಿ ಬಿಡುಗಡೆಗೊಂಡಿದ್ದು, 650 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ 3 ಮಂದಿ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಡುಪಿ ಜಿಲ್ಲೆ : 28 ಕೋವಿಡ್ 19 ಪಾಸಿಟಿವ್
ಜಿಲ್ಲೆಯಲ್ಲಿ ಮಂಗಳವಾರ 28 ಪಾಸಿಟಿವ್ ಪ್ರಕರಣ ದಾಖಲಾಗಿದೆ. 19 ಮಂದಿ ಪುರುಷರು ಹಾಗೂ 9 ಮಂದಿ ಮಹಿಳೆಯರಿಗೆ ಸೋಂಕು ಲಕ್ಷಣ ಕಾಣಿಸಿಕೊಂಡಿದೆ. ವಿದೇಶದಿಂದ ಆಗಮಿಸಿದ ಓರ್ವ, ಅಂತರ್ ಜಿಲ್ಲೆ ಪ್ರಯಾಣದ 6 ಮಂದಿ, ಮಹಾರಾಷ್ಟ್ರದಿಂದ ಹಿಂದಿರುಗಿದ ಇಬ್ಬರು, ಉಳಿದ 19 ಪ್ರಕರಣಗಳ ಮೂಲ ಪತ್ತೆ ಹಚ್ಚಲಾಗುತ್ತಿದೆ. 216 ವರದಿಗಳು ನೆಗೆಟಿವ್ ಬಂದಿದ್ದು, 2,627 ವರದಿ ಬರಲು ಬಾಕಿಯಿವೆ. ಮಂಗಳವಾರ ಒಟ್ಟು 44 ಮಂದಿ ನೋಂದಣಿ ಮಾಡಿಸಿಕೊಂಡಿದ್ದಾರೆ. ತೀವ್ರ ಉಸಿರಾಟದ ಸಮಸ್ಯೆಯುಳ್ಳ 11 ಪುರುಷರು, ಇಬ್ಬರು ಮಹಿಳೆಯರು, ಸೋಂಕಿಂತರ ಸಂಪರ್ಕವುಳ್ಳ ಮೂವರು ಮಹಿಳೆಯರು, ಫ್ಲ್ಯೂ ಜ್ವರ ಲಕ್ಷಣವುಳ್ಳ 11 ಪುರುಷರು, 10 ಮಂದಿ ಮಹಿಳೆಯರು ಸಹಿತ ಒಟ್ಟು 37 ಮಂದಿ ಐಸೊಲೇಶನ್ ವಾರ್ಡ್‌ಗೆ ದಾಖಲಾಗಿದ್ದಾರೆ. ತೀವ್ರ ಉಸಿರಾಟದ ಸಮಸ್ಯೆಯುಳ್ಳ ಇಬ್ಬರು, ಸೋಂಕಿತರ ಸಂಪರ್ಕವುಳ್ಳ 23, ಹಾಟ್‌ಸ್ಪಾಟ್ ಸಂಪರ್ಕದ 1,194 ಸಹಿತ ಒಟ್ಟು 1,231 ಮಂದಿಯ ಮಾದರಿ ಸಂಗ್ರಹಿಸಲಾಗಿದೆ. ಕೋಟದ ಹೊಟೇಲ್ ಮಾಲಕರ ಕುಟುಂಬ ಸದಸ್ಯರಿಗೆ ಪಾಸಿಟಿವ್ ಇಲ್ಲ ಎಂದು ತಿಳಿದುಬಂದಿದೆ. ಕಾಸರಗೋಡು: 13 ಮಂದಿಗೆ ಸೋಂಕು
ಜಿಲ್ಲೆಯಲ್ಲಿ ಮಂಗಳವಾರ 13 ಮಂದಿಗೆ ಕೊವಿಡ್ 19 ಸೋಂಕು ದೃಢಗೊಂಡಿದೆ. ವಿದೇಶದಿಂದ ಬಂದ 8 ಮಂದಿ, ಬೆಂಗಳೂರಿನಿಂದ ಬಂದ ಇಬ್ಬರಿಗೆ, ಮಂಗಳೂರಿಗೆ ಪ್ರಯಾಣಿಸಿದ್ದ ಇಬ್ಬರಿಗೆ, ಮಂಗಳೂರಿನಲ್ಲಿ ವಾಸ್ತವ್ಯವಿದ್ದ ಗರ್ಭಿಣಿ ಮಹಿಳೆಗೆ ರೋಗ ಬಾಧಿಸಿದೆ. 272 ಮಂದಿಗೆ ಸೋಂಕು
ರಾಜ್ಯದಲ್ಲಿ ಮಂಗಳವಾರ 272 ಮಂದಿಗೆ ಸೋಂಕು ದೃಢೀಕರಿಸಲಾಗಿದೆ. ಇದೇ ಸಂದರ್ಭದಲ್ಲಿ 111 ಮಂದಿ ರೋಗ ಮುಕ್ತರಾಗಿದ್ದಾರೆಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತಿಳಿಸಿದ್ದಾರೆ. 184 ಮಂದಿ ವಿರುದ್ಧ ಕೇಸ್
ಮಾಸ್ಕ್ ಧರಿಸದೇ ಇದ್ದ ಆರೋಪದಲ್ಲಿ ಜಿಲ್ಲೆಯಲ್ಲಿ 184 ಮಂದಿ ವಿರುದ್ಧ ಕೇಸು ದಾಖಲಿಸಲಾಗಿದೆ. ಕೊಡಗಿನಲ್ಲಿ ಹೆಚ್ಚಿದ ಆತಂಕ ಮತ್ತೆ¤ 14 ಮಂದಿಗೆ ಸೋಂಕು
ಜಿಲ್ಲೆಯಲ್ಲಿ ಕೋವಿಡ್ 19 ಆತಂಕ ಹೆಚ್ಚುತ್ತಿದ್ದು, ಮಂಗಳವಾರ 14 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ 92ಕ್ಕೆ ಏರಿಕೆಯಾಗಿದ್ದು, 10 ಮಂದಿ ಗುಣಮುಖರಾಗಿದ್ದಾರೆ. ಒಬ್ಬರು ಮೃತಪಟ್ಟಿದ್ದಾರೆ. 81 ಮಂದಿ ಆಸ್ಪತ್ರೆಯಲ್ಲಿದ್ದಾರೆ. ಜಿಲ್ಲೆಯ ಗಡಿ ಭಾಗಗಳಾದ ಕರಿಕೆ, ಪೆರುಂಬಾಡಿ, ತಿತಿಮತಿ ಗ್ರಾಮಗಳಲ್ಲೂ ಕೋವಿಡ್-19ರ ಸೋಂಕು ಆವರಿಸಿದೆ.