Advertisement
ಜಿಲ್ಲಾಡಳಿತ, ಜಿ.ಪಂ., ಶಿಕ್ಷಣ ಇಲಾಖೆ, ಡಾ| ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ಸಹಯೋಗದಲ್ಲಿ ಮಂಗಳವಾರ ಬ್ರಹ್ಮಾವರ ಶ್ಯಾಮಿಲಿ ಶನಾಯ ಸಭಾಂ ಗಣದಲ್ಲಿ ಜರಗಿದ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
Related Articles
Advertisement
ಮಾಹೆ ಸಹ ಕುಲಾಧಿಪತಿ ಡಾ| ಎಚ್.ಎಸ್. ಬಲ್ಲಾಳ್ ಉಪನ್ಯಾಸ ನೀಡಿದರು. 15 ಮಂದಿ ಶಿಕ್ಷಕರಿಗೆ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನಿಸಲಾ ಯಿತು. ಶಿಕ್ಷಕರ ವೈದ್ಯಕೀಯ ತಪಾಸಣೆ, ರಕ್ತದಾನ ಶಿಬಿರ ನಡೆಯಿತು.
ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ಪ್ರವರ್ತಕ ಡಾ| ಜಿ. ಶಂಕರ್, ಜಿ.ಪಂ. ಸಿಇಒ ಪ್ರಸನ್ನ ಎಚ್. ಚಾಂತಾರು ಗ್ರಾ.ಪಂ. ಅಧ್ಯಕ್ಷೆ ಪ್ರೇಮಾ ಶೆಟ್ಟಿ, ಡಯಟ್ ಪ್ರಾಂಶುಪಾಲ ಗೋವಿಂದ ಮಡಿವಾಳ, ಬ್ರಹ್ಮಾವರ ಬಿಇಒ ರಂಗನಾಥ್, ಉಡುಪಿ ಬಿಇಒ ಡಾ| ಅಶೋಕ್ ಕಾಮತ್ ಉಪಸ್ಥಿತರಿದ್ದರು. ಡಿಡಿಪಿಐ ಗಣಪತಿ ಕೆ. ಸ್ವಾಗತಿಸಿ, ಸತೀಶ್ಚಂದ್ರ ಶೆಟ್ಟಿ ಚಿತ್ರಪಾಡಿ, ಸುಭೀಕ್ಷಾ ಶೆಟ್ಟಿ ನಿರ್ವಹಿಸಿ, ಬ್ರಹ್ಮಾವರ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಪ್ರಶಾಂತ್ ಶೆಟ್ಟಿ ವಂದಿಸಿದರು.
ಸಾಧಕನ ಹಿಂದೆ ಶಿಕ್ಷಕನ ಶ್ರಮ: ಭಾಗೀರಥಿಸುಳ್ಯ: ಭಾರತ ಇಂದು ವಿವಿಧ ಕ್ಷೇತ್ರಗಳಲ್ಲಿ ಉನ್ನತ ಸಾಧನೆ ಮಾಡುತ್ತಿದೆ. ಯಾವುದೇ ಸಾಧಕನ ಹಿಂದೆ ಒಬ್ಬ ಶಿಕ್ಷಕನ ಮಾರ್ಗದರ್ಶನ, ಶ್ರಮ ಇರುತ್ತದೆ ಎಂದು ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು. ದ.ಕ. ಜಿಲ್ಲಾಡಳಿತ, ಜಿ.ಪಂ., ಶಾಲಾ ಶಿಕ್ಷಣ ಇಲಾಖೆ ಮಂಗಳೂರು, ಸುಳ್ಯ ತಾಲೂಕು ಶಿಕ್ಷಕರ ದಿನಾಚರಣೆಯ ಸಮಿತಿ ಆಶ್ರಯದಲ್ಲಿ ಸುಳ್ಯದ ಪರಿವಾರಕಾನ ಅಮರಜ್ಯೋತಿ ಕುರುಂಜಿ ಜಾನಕಿ ವೆಂಕಟರಮಣ ಗೌಡ ಸಭಾಭವನದಲ್ಲಿ ಮಂಗಳವಾರ ನಡೆದ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಶಿಕ್ಷಣ ನೀತಿಯಲ್ಲಿ ಬದಲಾವಣೆ ಆಗಬೇಕು ಎಂಬ ಚರ್ಚೆಗಳಾಗುತ್ತಿವೆ. ಅದನ್ನು ಮಾಡುವವರು ಯಾರು ಎಂಬುದಕ್ಕೆ ಪರಿಪೂರ್ಣ ಉತ್ತರ ಸಿಕ್ಕಿಲ್ಲ. ಸರಕಾರಿ ಶಾಲೆಯಲ್ಲಿ ಉತ್ತಮ ಸವಲತ್ತು ಇದ್ದರೂ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸರಕಾರಿ ಶಾಲೆಗಳ ಶಿಕ್ಷಕರ ಕೊರತೆ ನೀಗಿಸುವಂತೆ ಜಿಲ್ಲೆಯ ಶಾಸಕರು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಿದ್ದೇವೆ ಎಂದರು. ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಶಿಕ್ಷಣ ನೀತಿಯ ಬಗ್ಗೆ ಸಾರ್ವತ್ರಿಕ ಚರ್ಚೆಗಳು ನಡೆಯಬೇಕಾಗಿತ್ತು, ಆದರೆ ಚರ್ಚೆಗಳು ಕಡಿಮೆಯಾಗಿವೆ. ಶಿಕ್ಷಣ ನೀತಿಯ ಬಗ್ಗೆ ಶಿಕ್ಷಕ ಮೌನ ಮುರಿಯಬೇಕು ಎಂದರು. ಮಂಗಳೂರು ಸಂತ ಅಲೋಶಿಯಸ್ ಕಾಲೇಜಿನ ಕನ್ನಡ ವಿಭಾಗದ ಪ್ರಾಧ್ಯಾಪಕ ಡಾ| ವಿಶ್ವನಾಥ ಬದಿಕಾನ ಪ್ರಧಾನ ಭಾಷಣ ಮಾಡಿದರು. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮೋಹನ್‌ರಾಂ ಸುಳ್ಳಿ, ಮಂಗಳೂರು ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ| ಸಿಪ್ರಿಯನ್ ಮೊಂತೆರೋ, ಮಂಗಳೂರು ಡಯಟ್ ಪ್ರಾಂಶುಪಾಲೆ ರಾಜಲಕ್ಷ್ಮೀ, ಜಿಲ್ಲಾ ದೈಹಿಕ ಶಿಕ್ಷಣ ಅಧಿಕಾರಿ ಭುವನೇಶ್, ಸುಳ್ಯ ತಹಶೀಲ್ದಾರ್ ಮಂಜುನಾಥ್, ಸುಳ್ಯ ತಾ.ಪಂ. ಇಒ ರಾಜಣ್ಣ ವೇದಿಕೆಯಲ್ಲಿದ್ದರು. ದ.ಕ. ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ದಯಾನಂದ ರಾಮಚಂದ್ರ ನಾಯ್ಕ ಸ್ವಾಗತಿಸಿ, ಬಿಇಒ ರಮೇಶ್ ಬಿ.ಈ. ವಂದಿಸಿದರು. ಶಿಕ್ಷಕರಾದ ಆಶಾ, ಮಮತಾ, ಅಚ್ಯುತ ಅಟೂÉರು ನಿರ್ವಹಿಸಿದರು. ಗೌರವ
ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ, ಸುಳ್ಯ ತಾಲೂಕಿನ ನಿವೃತ್ತ ಶಿಕ್ಷಕರು, ಸಿಬಂದಿಗೆ ಸಮ್ಮಾನ, ತಾಲೂಕಿನ ಸ್ಕೌಟ್/ಗೈಡ್ಸ್ ವಿಭಾಗದ ಉತ್ತಮ ಶಿಕ್ಷಕರಿಗೆ ಅಭಿನಂದನೆ, ಎಸೆಸೆಲ್ಸಿಯಲ್ಲಿ ಗರಿಷ್ಠ ಅಂಕ ಪಡೆದ ವಿದ್ಯಾರ್ಥಿಗಳಿಗೆ, ಎಸೆಸೆಲ್ಸಿಯಲ್ಲಿ ಶೇ. 100 ಫಲಿತಾಂಶ ಪಡೆದ ಶಾಲೆಗಳ ಅಭಿನಂದನೆ ನಡೆಯಿತು.