Advertisement
ಧರ್ಮಸ್ಥಳದಲ್ಲಿ ಈ ಬಾರಿ ನೇತ್ರಾವತಿ ನೀರು ಬತ್ತಿ ಹೋಗಿರುವುದರಿಂದ ಉಂಟಾಗಿರುವ ಸಮಸ್ಯೆ ಕುರಿತು ಮುಖ್ಯಮಂತ್ರಿಗಳ ಸೂಚನೆಯಂತೆ ಭೇಟಿ ನೀಡಿದ್ದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆರ್. ಸೆಲ್ವಮಣಿ ಅವರು ಸಮಸ್ಯೆ ಕುರಿತು ಮಾಹಿತಿ ನೀಡಿದರು. ಅಲ್ಲದೆ ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರು ಎರಡು ಕಿಂಡಿ ಅಣಿಕಟ್ಟು ನಿರ್ಮಿಸಲು ಸರ್ಕಾರಕ್ಕೆ ಮನವಿ ಮಾಡಿರುವ ಹಿನ್ನೆಲೆಯಲ್ಲಿ ಏಳು ಕೋಟಿ ರೂ. ವೆಚ್ಚದಲ್ಲಿ ನೆರಿಯ ಹೊಳೆಗೆ ಹಾಗೂ ನೇತ್ರಾವತಿ ನದಿಗೆ ಕಿಂಡಿ ಅಣೆಕಟ್ಟು ನಿರ್ಮಿಸಲು ಸರ್ಕಾರಕ್ಕೆ ಸಣ್ಣ ನೀರಾವರಿ ಇಲಾಖೆಯು ಪ್ರಸ್ತಾವನೆ ಸಲ್ಲಿಸಿದೆ ಎಂದು ತಿಳಿಸಿದರು. ಈ ಪ್ರಸ್ತಾವನೆಯನ್ನು ಅನುಮೋದಿಸಿ, ಕೂಡಲೇ ಕಿಂಡಿ ಅಣೆಕಟ್ಟು ನಿರ್ಮಿಸಲು ಕ್ರಮ ವಹಿಸಲು ಮುಖ್ಯಮಂತ್ರಿಗಳು ಸೂಚಿಸಿದರು.
ಇದಲ್ಲದೆ ಎಂಆರ್‍ಪಿಎಲ್‍ನಲ್ಲಿ ಸ್ಥಾಪಿಸಲಾಗುತ್ತಿರುವ ಉಪ್ಪುನೀರನ್ನು ಶುದ್ಧೀಕರಿಸುವ ಘಟಕದ ಸಾಧಕ ಬಾಧಕಗಳನ್ನು ಅಧ್ಯಯನ ನಡೆಸಿ ವರದಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರಿಗೆ ಸೂಚಿಸಿದರು. ಕಡಲ್ಕೊರೆತ:
ಉಳ್ಳಾಲ ಭಾಗದಲ್ಲಿ ಕಡಲ್ಕೊರೆತದಿಂದ ಬಾಧಿತರಾಗುವ 150 ಮನೆಗಳನ್ನು ಗುರುತಿಸಲಾಗಿದ್ದು, ಇವರಿಗೆ ಕೊಡಗು ಮಾದರಿಯಲ್ಲಿ ಪುನರ್ವಸತಿ ಕಲ್ಪಿಸಲು ಮುಖ್ಯಮಂತ್ರಿಗಳು ಸೂಚಿಸಿದರು.
ಉಳ್ಳಾಲದಲ್ಲಿ ಪ್ರತಿವರ್ಷ ಕಡಲ್ಕೊರೆತ ತಡೆಯಲು ಸಮುದ್ರ ತೀರದಲ್ಲಿ ಕಲ್ಲು ಹಾಕಲು ಕೋಟ್ಯಂತರ ರೂಪಾಯಿ ವ್ಯಯಿಸಲಾಗುತ್ತಿದ್ದು, ಕಲ್ಲುಗಳು ಸಮುದ್ರದ ಅಲೆಯಲ್ಲಿ ಕೊಚ್ಚಿ ಹೋಗುತ್ತವೆ. ಇದಕ್ಕೆ ಶಾಶ್ವತ ಪರಿಹಾರ ಒದಗಿಸುವ ಅಗತ್ಯವಿದೆ ಎಂದು ಸಚಿವ ಯು.ಟಿ. ಖಾದರ್ ಅವರು ಮುಖ್ಯಮಂತ್ರಿಗಳ ಗಮನಕ್ಕೆ ತಂದರು. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಈ ಕುಟುಂಬಗಳಿಗೆ ಪುನರ್ವಸತಿ ಕಲ್ಪಿಸುವಂತೆ ಕ್ರಮ ಕೈಗೊಳ್ಳಲು ಸೂಚಿಸಿದರು.
Related Articles
Advertisement