Advertisement

ದಕ್ಷಿಣ ಕನ್ನಡದಲ್ಲಿ ಸಾವಿನ ಸಂಖ್ಯೆ ಮತ್ತೆ ಏರಿಕೆ, ಉಡುಪಿಯಲ್ಲಿ ಸೋಂಕಿತರ ಸಂಖ್ಯೆ ಇಳಿಕೆ

09:37 PM May 10, 2021 | Team Udayavani |

ಮಂಗಳೂರು/ಉಡುಪಿ : ದ.ಕ. ಜಿಲ್ಲೆಯಲ್ಲಿ ಸೋಮವಾರ ಸೋಂಕಿತರ ಸಂಖ್ಯೆಯಲ್ಲಿ ಸ್ವಲ್ಪಮಟ್ಟಿನ ಇಳಿಮುಖವಾಗಿದ್ದರೂ ಸಾವಿರಕ್ಕಿಂತ ಮೇಲೆ ಇದೆ. ಸಾವಿನ ಸಂಖ್ಯೆಯಲ್ಲೂ ಏರಿಕೆಯಾಗಿದೆ. ಸೋಮವಾರ 1,175 ಮಂದಿಗೆ ಸೋಂಕು ದೃಢಪಟ್ಟರೆ 5 ಮಂದಿ ಮೃತಪಟ್ಟಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಸೋಂಕಿತರ ಮತ್ತು ಮೃತಪಟ್ಟವರ ಸಂಖ್ಯೆಯಲ್ಲಿ ಇಳಿಕೆಯಾಗಿದ್ದರೆ ಹೆಚ್ಚು ಮಂದಿ ಗುಣಮುಖರಾಗಿರುವುದು ಸಮಾಧಾನ ತಂದಿದೆ. 885 ಮಂದಿಗೆ ಸೋಂಕು ದೃಢಪಟ್ಟಿದ್ದರೆ 642 ಮಂದಿ ಗುಣಮುಖರಾಗಿದ್ದಾರೆ. ಮೂವರು ಮೃತಪಟ್ಟಿದ್ದಾರೆ.

Advertisement

ಕಾಸರಗೋಡು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆಯಲ್ಲಿ ಸ್ವಲ್ಪ ಏರಿಕೆಯಾಗಿದೆ. 919 ಮಂದಿಗೆ ಸೋಂಕು ದೃಢಪಟ್ಟಿದ್ದರೆ 825 ಮಂದಿ ಗುಣಮುಖರಾಗಿದ್ದಾರೆ. ಕೊಡಗಿನಲ್ಲಿ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚೇನೂ ಬದಲಾಗದಿದ್ದರೂ ಮೃತಪಟ್ಟವರ ಸಂಖ್ಯೆಯಲ್ಲಿ ಏರಿಕೆಯಾಗಿದೆ. ಸೋಮವಾಗರ 653 ಮಂದಿಗೆ ಸೋಂಕು ದೃಢಪಟ್ಟಿದ್ದರೆ 10 ಮಂದಿ ಮೃತಪಟ್ಟಿದ್ದಾರೆ.

ಇದನ್ನೂ ಓದಿ :3ನೇ ಅಲೆ ಎದುರಿಸಲು ಹಳ್ಳಿ ಹಂತದಲ್ಲೇ 8,105 ಆಕ್ಸಿಜನ್‌ ಬೆಡ್‌ ವ್ಯವಸ್ಥೆಗೆ ಸರಕಾರ ನಿರ್ಧಾರ

31 ಕಡೆ ಕಂಟೈನ್‌ ಮೆಂಟ್‌ ವಲಯ
ದ.ಕ. ಜಿಲ್ಲೆಯಲ್ಲಿ ಸೋಮವಾರ 31 ಕಡೆ ಕಂಟೈನ್‌ಮೆಂಟ್‌ ವಲಯವನ್ನಾಗಿ ಘೋಷಣೆ ಮಾಡಲಾಗಿದೆ. ಮಂಗಳೂರಿನಲ್ಲಿ 11, ಬಂಟ್ವಾಳ ತಾಲೂಕಿನಲ್ಲಿ 9, ಪುತ್ತೂರು ಮತ್ತು ಸುಳ್ಯ ತಾಲೂಕಿನಲ್ಲಿ ತಲಾ 4, ಬೆಳ್ತಂಗಡಿ ತಾಲೂಕಿನ 3 ಕಡೆಗಳನ್ನು ಕಂಟೈನ್‌ಮೆಂಟ್‌ ವಲಯವನ್ನಾಗಿ ಘೋಷಣೆ ಮಾಡಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next