Advertisement

Dakshina Kannada: ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಭರ್ಜರಿ ಗೆಲುವು… ಸಂಭ್ರಮಾಚರಣೆ

03:14 PM Jun 04, 2024 | Team Udayavani |

ಮಂಗಳೂರು: ಬಿಜೆಪಿಯ ಭದ್ರಕೋಟೆಯಾಗಿರುವ ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಈ ಬಾರಿ ಮತ್ತೆ ಕಮಲ ಅರಳುವ ಮೂಲಕ ಬಿಜೆಪಿ ಗೆಲುವಿನ ನಗೆ ಬೀರಿದೆ ಈ ಕುರಿತು ಅಧಿಕೃತ ಘೋಷಣೆ ಮಾತ್ರ ಬಾಕಿಯಿದೆ.

Advertisement

ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್‌ ಬ್ರಿಜೇಶ್ ಚೌಟ ಅವರು ಕಾಂಗ್ರೆಸ್ ಅಭ್ಯರ್ಥಿ ಆರ್‌ ಪದ್ಮರಾಜ್‌ ಅವರನ್ನು ಪರಾಭವಗೊಳಿಸಿದ್ದಾರೆ.

ಬಿಜೆಪಿ‌ ಅಭ್ಯರ್ಥಿ ಬೃಜೇಶ್ ಚೌಟ ಸಾಧಿಸುತ್ತಿದ್ದಂತೆ ಮಂಗಳೂರಿನಲ್ಲಿ‌ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು.

ಈ ಕುರಿತು ಮಾತನಾಡಿದ ಚೌಟ ‘ಇದು ಕಾರ್ಯಕರ್ತರು, ಹಿಂದುತ್ವ, ಪಕ್ಷದ ಜಯವಾಗಿದ್ದು. ನರೇಂದ್ರ ಮೋದಿಯವರ ಮಾರ್ಗದರ್ಶನದಲ್ಲಿ ಕಾರ್ಯಕರ್ತರ ಸಹಕಾರದೊಂದಿಗೆ ಹಿಂದುತ್ವಕ್ಕೆ ಬದ್ದತೆ, ಅಭಿವೃದ್ದಿಗೆ ಆದ್ಯತೆ ನೀಡಿ ಕೆಲಸ ಮಾಡುತ್ತೇನೆ ಹೇಳಿದರು.

ಫಲಿತಾಂಶದ ಆರಂಭದಿಂದಲೂ ಬಿಜೆಪಿ‌ ಅಭ್ಯರ್ಥಿ ಬೃಜೇಶ್ ಚೌಟ ಅವರು ಮುನ್ನಡೆಯನ್ನು ಸಾಧಿಸಿಕೊಂಡು ಬಂದಿದ್ದು ಕೊನೆಯ ಹಂತದಲ್ಲಿ ಕಾಂಗ್ರೆಸ್ ನ ಪದ್ಮರಾಜ ಆರ್. ಪೂಜಾರಿ ಅವರನ್ನು ಲಕ್ಷಕ್ಕೂ ಅಧಿಕ ಮತಗಳಿಗಿಂತ ಮುನ್ಮಡೆ ಸಾಧಿಸಿ ಗೆಲುವು ಸಾಧಿಸಿದ್ದಾರೆ ಇದರ ಬೆನ್ನಲ್ಲೇ ಬಿಜೆಪಿ ಕಾರ್ಯಕರ್ತರು ಸಿಹಿ ತಿಂಡಿ ಹಂಚುವ ಮೂಲಕ ಸಂಭ್ರಮಾಚರಣೆ ನಡೆಸಿದರು.

Advertisement

ಶಾಸಕಿ ಭಾಗೀರಥಿ ಮುರುಳ್ಯ ಸೇರಿದಂತೆ ಪಕ್ಷದ ಮುಖಂಡರು , ಕಾರ್ಯಕರ್ತರು ನೂರಾರು ಸಂಖ್ಯೆಯಲ್ಲಿ ಆಗಮಿಸಿ ಮತ ಎಣಿಕ ಕೇಂದ್ರದ ಎದುರು ಘೋಷಣೆಗಳನ್ನು ಕೂಗಿ ಸಂಭ್ರಮಿಸಿದರು.

ಇದನ್ನೂ ಓದಿ: Bengaluru Rural; ಜನರ ತೀರ್ಮಾನವೇ ಅಂತಿಮ… : ಸೋಲಿನ ಬಳಿಕ ಡಿ.ಕೆ.ಸುರೇಶ್ ಪ್ರತಿಕ್ರಿಯೆ

Advertisement

Udayavani is now on Telegram. Click here to join our channel and stay updated with the latest news.

Next