Advertisement
ಮಂಗಳೂರಿನಲ್ಲಿ 119, ಬಂಟ್ವಾಳದಲ್ಲಿ 11, ಬೆಳ್ತಂಗಡಿಯಲ್ಲಿ 6, ಪುತ್ತೂರಿನಲ್ಲಿ 4, ಸುಳ್ಯದಲ್ಲಿ ಓರ್ವರಿಗೆ ಕೋವಿಡ್ ದೃಢಪಟ್ಟಿದೆ. ಪರವೂರಿನ 12 ಮಂದಿಗೆ ಕೋವಿಡ್ ಪಾಸಿಟಿವ್ ಬಂದಿದೆ. ಮೃತಪಟ್ಟ ಏಳು ಮಂದಿ ಮಂಗಳೂರು ತಾಲೂಕಿನವರಾಗಿದ್ದಾರೆ.ಕೋವಿಡ್ ನಿಂದ ಮುಕ್ತರಾಗಿ 124 ಮಂದಿ ಸೋಮವಾರ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಈವರೆಗೆ 6168 ಮಂದಿಗೆ ಕೋವಿಡ್ ದೃಢಪಟ್ಟಿದ್ದು, 2854 ಮಂದಿ ಗುಣಮುಖರಾಗಿದ್ದಾರೆ. ಸದ್ಯ 3138 ಮಂದಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸಿಎಂ ಯಡಿಯೂರಪ್ಪ ಅವರಿಗೆ ಕೋವಿಡ್ ದೃಢಪಟ್ಟ ಹಿನ್ನೆಲೆಯಲ್ಲಿ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೋಂ ಕ್ವಾರಂಟೈನ್‌ಗೊಳಪಟ್ಟಿದ್ದಾರೆ. ಸಚಿವರು ಮುಖ್ಯಮಂತ್ರಿಯವರೊಂದಿಗೆ ಜು. 30ರಂದು ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದರು. ಸಿಎಂಗೆ ಕೋವಿಡ್ ದೃಢಪಡುತ್ತಿದ್ದಂತೆ, ತನ್ನೊಂದಿಗೆ ಪ್ರಾಥಮಿಕ ಸಂಪರ್ಕಕ್ಕೆ ಬಂದವರು ಕ್ವಾರಂಟೈನ್‌ನಲ್ಲಿರುವಂತೆ ಸಿಎಂ ಸಲಹೆ ನೀಡಿದ ಹಿನ್ನೆಲೆಯಲ್ಲಿ ಶ್ರೀನಿವಾಸ ಪೂಜಾರಿ ಅವರು ಸ್ವಯಂ ಆಗಿಯೇ ಕ್ವಾರಂಟೈನ್‌ಗೊಳಪಟ್ಟಿದ್ದಾರೆ. ಅಲ್ಲದೆ, ಮಂಗಳವಾರ ಗಂಟಲು ದ್ರವ ಮಾದರಿಯನ್ನು ಪರೀಕ್ಷೆಗೆ ನೀಡಲಿದ್ದಾರೆ.