Advertisement

ದಕ್ಷಿಣ ಕನ್ನಡ ಜಿಲ್ಲೆ : 567 ಮಂದಿ ಗುಣಮುಖ, 375 ಹೊಸ ಪ್ರಕರಣ ದೃಢ; 14 ಮಂದಿ ಸಾವು

07:21 PM Jun 26, 2021 | Team Udayavani |

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ದೈನಂದಿನ ಪ್ರಕರಣ ಕಳೆದ ಎರಡು ದಿನಗಳಿಂದ ತುಸು ಇಳಿಕೆ ಕಾಣುತ್ತಿದೆ. ಆದರೆ ಸಾವಿನ ಸಂಖ್ಯೆ ಏರಿಕೆ ಕಾಣುತ್ತಿದೆ.

Advertisement

ಶನಿವಾರದಂದು ಜಿಲ್ಲೆಯಲ್ಲಿ 375 ಮಂದಿಗೆ ಕೊರೊನಾ ದೃಢಪಟ್ಟಿದ್ದು, 14 ಮಂದಿ ಮೃತಪಟ್ಟಿದ್ದಾರೆ. ಮೃತ ಪಟ್ಟವರಲ್ಲಿ 9 ಮಂದಿ ದ.ಕ. ಜಿಲ್ಲೆಯವರು, 5 ಮಂದಿ ಹೊರ ಜಿಲ್ಲೆಯವರು. ಜಿಲ್ಲೆಯಲ್ಲಿ ಶುಕ್ರವಾರವೂ 14 ಮಂದಿ ಮೃತಪಟ್ಟಿದ್ದರು. ಶನಿವಾರದಂದು 567 ಮಂದಿ ಕೊರೊನಾದಿಂದ ಗುಣಮುಖರಾಗಿದ್ದಾರೆ.

ಜಿಲ್ಲೆಯಲ್ಲಿ ಈವರೆಗೆ ಒಟ್ಟು 1,121 ಮಂದಿ ಕೊರೊನಾದಿಂದ ಮೃತಪಟ್ಟಿದ್ದಾರೆ. ಈವರೆಗೆ ಒಟ್ಟು 91,411 ಮಂದಿ ಕೊರೊನಾ ಸೋಂಕಿಗೊಳಗಾಗಿದ್ದು, ಈ ಪೈಕಿ 84,097 ಮಂದಿ ಗುಣಮುಖರಾಗಿದ್ದಾರೆ. ಸದ್ಯ 6,208 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ ಸದ್ಯ ಶೇ.4.60 ರಷ್ಟು ಪಾಸಿಟಿವಿಟಿ ದರ ಇದೆ.

ಇದನ್ನೂ ಓದಿ :ಮಳೆ ನಿರೀಕ್ಷೆ : ಜೂನ್‌ 29ರಿಂದ ಜುಲೈ 1ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರದಿಂದ 18 ವರ್ಷ ಮೇಲ್ಪಟ್ಟ ಕಾಲೇಜು ವಿದ್ಯಾರ್ಥಿಗಳಿಗೆ ಲಸಿಕಾ ಅಭಿಯಾನ ಆರಂಭವಾಗಲಿದೆ.

Advertisement

6 ಕಡೆ ಕಂಟೈನ್‌ಮೆಂಟ್‌ ವಲಯ
ದಕ್ಷಿಣ ಕನ್ನಡ ಜಿಲ್ಲೆಯ 6 ಕಡೆಗಳಲ್ಲಿ ಶನಿವಾರ ಕಂಟೈನ್‌ಮೆಂಟ್‌ ವಲಯವನ್ನಾಗಿ ಘೋಷಣೆ ಮಾಡಲಾಗಿದೆ. ಮಂಗಳೂರು ಮತ್ತು ಪುತ್ತೂರು ತಾಲೂಕಿನ 2, ಸುಳ್ತ ಮತ್ತು ಬೆಳ್ತಂಗಡಿ ತಾಲೂಕಿನ ತಲಾ 2 ಕಡೆಗಳಲ್ಲಿ ಕಂಟೈನ್‌ಮೆಂಟ್‌ ವಲಯವನ್ನಾಗಿ ಘೋಷಣೆ ಮಾಡಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next