ಮಂಗಳೂರು: ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಫೆ. 20ರಂದು ಬೆಳಗ್ಗೆ 10 ಗಂಟೆಯಿಂದ ಕಡಬ ತಾಲೂಕಿನ ದೋಳ್ಪಾಡಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗ್ರಾಮ ವಾಸ್ತವ್ಯ ಮಾಡಲಿದ್ದಾರೆ.
Advertisement
ಈ ಸಂದರ್ಭ ಅಲ್ಲಿನ ಗ್ರಾಮಸ್ಥರಿಂದ ಅಹವಾಲು ಸ್ವೀಕರಿಸಿ, ಕೆಲವು ಸಮಸ್ಯೆಗಳನ್ನು ಸ್ಥಳದಲ್ಲಿಯೇ ಬಗೆಹರಿಸಲಿದ್ದಾರೆ. ಜಿಲ್ಲಾ ಮಟ್ಟದ ಎಲ್ಲ ಅಧಿಕಾರಿಗಳು ಕಡ್ಡಾಯವಾಗಿ ಹಾಜರಾಗುವಂತೆ ಅಪರ ಜಿಲ್ಲಾಧಿಕಾರಿಯವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.