ಮಂಗಳೂರು: ಚುನಾವಣ ಕಾರ್ಯಕ್ಕೆ ನಿಯೋಜಿತರಾಗಿರುವ ವಿವಿಧ ಸಮಿತಿಗಳ ನೋಡಲ್ ಅಧಿಕಾರಿಗಳು ಪೂರ್ವ ಸಿದ್ಧತೆ ಕೈಗೊಳ್ಳುವಂತೆ ಜಿಲ್ಲಾ ಚುನಾ ವಣ ಅಧಿಕಾರಿ ಹಾಗೂ ಡಿಸಿ ರವಿಕುಮಾರ್ ಎಂ.ಆರ್. ಸೂಚಿಸಿದ್ದಾರೆ.
ಬುಧವಾರ ತಮ್ಮ ಕಚೇರಿಯ ಸಭಾಂ ಗಣದಲ್ಲಿ ನೋಡಲ್ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ, ಅಧಿಕಾರಿಗಳು ತಮ್ಮ ಕರ್ತವ್ಯದ ಬಗ್ಗೆ ಚೆನ್ನಾಗಿ ತಿಳಿದು ಕೊಂಡಿರಬೇಕು. ನಾಮಪತ್ರ ಸಲ್ಲಿಕೆ ಆರಂಭವಾಗುತ್ತಿದ್ದಂತೆ ಸಾಮಾಜಿಕ ಮಾಧ್ಯಮಗಳಲ್ಲೂ ಪ್ರಚಾರ ಕಾರ್ಯಗಳು ಬಿರುಸು ಪಡೆಯುತ್ತವೆ. ಇದಕ್ಕೆ ಸಂಬಂಧಪಟ್ಟ ಅಧಿ ಕಾರಿಗಳು ಅಗತ್ಯ ಮಾಹಿತಿ ಸಂಗ್ರಹಿಸಿ ಸಿದ್ಧರಾಗಿರಬೇಕು ಎಂದರು.
ಸಿ-ವಿಜಿಲ್, ಸುವಿಧಾ ಸೇರಿದಂತೆ ಎಲ್ಲದರ ಬಗ್ಗೆ ಮಾಹಿತಿ ಹೊಂದಿದ್ದು, ಯಾವುದೇ ದೂರು ದಾಖಲಾದ ಕೂಡಲೇ ಅದಕ್ಕೆ ಪ್ರತಿ ಕ್ರಿಯಿಸಬೇಕು. ಮಂಗಳೂರು ವಾಯು ಹಾಗೂ ಜಲ ಮಾರ್ಗ ಹೊಂದಿರುವ ಕಾರಣ ಹೊರಗಿನಿಂದ ಬರಬಹುದಾದ ವಸ್ತುಗಳ ಬಗ್ಗೆ ನಿಗಾ ವಹಿಸಬೇಕು ಎಂದು ಸೂಚಿಸಿದರು.
ಜಿ.ಪಂ. ಸಿಇಒ ಡಾ| ಕುಮಾರ್, ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಅನುÏ ಕುಮಾರ್, ಜಿಲ್ಲಾ ಎಸ್‌ಪಿ ವಿಕ್ರಂ ಅಮಟೆ, ಪಾಲಿಕೆ ಆಯುಕ್ತ ಚೆನ್ನಬಸಪ್ಪ, ಅಪರ ಜಿಲ್ಲಾಧಿಕಾರಿ ಕೃಷ್ಣ ಮೂರ್ತಿಎಚ್.ಕೆ. ಉಪಸ್ಥಿತರಿದ್ದರು.
ಸಾರ್ವ ಜನಿಕರಿಂದ ನೀತಿ ಸಂಹಿತೆ ಕುರಿತ ದೂರು ದಾಖ ಲಾದ ಕೂಡಲೇ ಅದನ್ನು ಪರಿಶೀಲಿಸಿ ಪ್ರತಿಕ್ರಿಯಿಸಬೇಕು. ಯಾವುದೇ ಕಾರಣಕ್ಕೂ ವಿಳಂಬ ಸಲ್ಲದು.
-ರವಿಕುಮಾರ್ ಎಂ.ಆರ್., ಜಿಲ್ಲಾಧಿಕಾರಿ, ದಕ್ಷಿಣ ಕನ್ನಡ