Advertisement

ಮಂಗಳೂರು : ಶಾಲೆಗಳಲ್ಲಿ 5ಕ್ಕಿಂತ ಹೆಚ್ಚು ಪ್ರಕರಣ ಪತ್ತೆಯಾದರೆ ಭೌತಿಕ ತರಗತಿ ರದ್ದು ; ಡಿ.ಸಿ

07:27 PM Jan 19, 2022 | Team Udayavani |

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಶಾಲೆ, ಕಾಲೇಜುಗಳಲ್ಲಿ ದೈನಂದಿನ ತರಗತಿಗಳನ್ನು ಹೊರತುಪಡಿಸಿ ಯಾವುದೇ ಪಠ್ಯೇತರ ಚಟುವಟಿಕೆಗಳಿಗೆ ಸದ್ಯ ಅವಕಾಶವಿಲ್ಲ. 5 ಮತ್ತು ಅದಕ್ಕಿಂತ ಹೆಚ್ಚಿನ ಕೋವಿಡ್‌ ಪಾಸಿಟಿವ್‌ ಪ್ರಕರಣಗಳು ಬಂದರೆ ಅಂತಹ ಸಂಸ್ಥೆಗಳಲ್ಲಿ ಭೌತಿಕ ತರಗತಿ ರದ್ದುಪಡಿಸಿ ಆನ್‌ಲೈನ್‌ ತರಗತಿ ನಡೆಸಬೇಕು ಎಂದು ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ.

Advertisement

ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಮಂಗಳವಾರ ನಡೆದ ಜಿಲ್ಲೆಯ ಶಿಕ್ಷಣ ಸಂಸ್ಥೆಗಳಲ್ಲಿ ಕೊರೊನಾ ಸೋಂಕಿನ ಸ್ಥಿತಿ-ಗತಿ ಕುರಿತ ಶಿಕ್ಷಣ, ಆರೋಗ್ಯ ಇಲಾಖೆ ಹಾಗೂ ವಿವಿಧ ಶಿಕ್ಷಣ ಸಂಸ್ಥೆಗಳ ಪ್ರಾಂಶುಪಾಲರ ಹಾಗೂ ಪ್ರತಿನಿಧಿಗಳ ಸಭೆಯಲ್ಲಿ ಅವರು ಮಾತನಾಡಿದರು.

ಮಕ್ಕಳ ಲಸಿಕೆ: ಗುರಿ ಸಾಧಿಸಿ
ಪಾಸಿಟಿವ್‌ ಬಂದ ವಿದ್ಯಾರ್ಥಿಗಳನ್ನು ಕಡ್ಡಾಯವಾಗಿ ಹಾಸ್ಟೆಲುಗಳಲ್ಲಿ ಅಥವಾ ಮನೆಗಳಲ್ಲಿ ಐಸೊಲೇಶನ್‌ಗೆ ಒಳಪಡಿಸಬೇಕು. 15ರಿಂದ 18 ವಯೋಮಿತಿಯ ವಿದ್ಯಾರ್ಥಿಗಳಿಗೆ ಶೇ. 100 ಲಸಿಕೆ ಗುರಿ ತಲುಪಲು ಯತ್ನಿಸಬೇಕು. ಶಾಲೆಗಳಲ್ಲಿ ಕಡ್ಡಾಯವಾಗಿ ಹೆತ್ತವರ ಮತ್ತು ಶಿಕ್ಷಕರ ಸಭೆಯನ್ನು ಕರೆದು ಭೌತಿಕ ಅಥವಾ ಆನ್‌ಲೈನ್‌ ತರಗತಿಗಳ ಬಗ್ಗೆ ಅಭಿಪ್ರಾಯ ಸಂಗ್ರಹಿಸಿ ನಿರ್ಧಾರ ತೆಗೆದುಕೊಳ್ಳಬೇಕು ಎಂದರು.

ಇದನ್ನೂ ಓದಿ : ರಾಜ್ಯದಲ್ಲಿ ಇಂದೂ 40 ಸಾವಿರ ದಾಟಿದ ಕೋವಿಡ್ ಕೇಸ್ : 21 ಸಾವು

ಭೌತಿಕ ತರಗತಿಗೆ ಹಾಜರಾಗಲು ಸಿದ್ಧರಿಲ್ಲದ ವಿದ್ಯಾರ್ಥಿಗಳಿಗೆ ಆನ್‌ಲೈನ್‌ ತರಗತಿಗಳಿಗೆ ಕಡ್ಡಾಯವಾಗಿ ವ್ಯವಸ್ಥೆ ಮಾಡಬೇಕು ಮತ್ತು ಅವಕಾಶ ಕಲ್ಪಿಸಿಕೊಡಬೇಕು. ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿಯಿಂದ ಆನ್‌ಲೈನ್‌ ತರಗತಿ ಬಗ್ಗೆ ದೂರು ಸಲ್ಲಿಸಲು ಪೋಷಕರಿಗೆ ಅನುಕೂಲವಾಗುವಂತೆ ಸಹಾಯವಾಣಿಯನ್ನು ಪ್ರಾರಂಭಿಸಬೇಕು. ಅಂತಾರಾಜ್ಯ ವಿದ್ಯಾರ್ಥಿಗಳು ಹೆಚ್ಚಿರುವ ಕಾಲೇಜುಗಳಲ್ಲಿ ಮತ್ತು ಪಕ್ಕದ ರಾಜ್ಯದಿಂದ ದಿನನಿತ್ಯ ಪ್ರಯಾಣಿಸುವ ವಿದ್ಯಾರ್ಥಿಗಳು ಹೆಚ್ಚಿರುವ ಶಾಲೆ, ಕಾಲೇಜುಗಳಲ್ಲಿ ಕೊರೊನಾ ಪರಿಸ್ಥಿತಿಯ ಬಗ್ಗೆ ಹೆಚ್ಚಿನ ನಿಗಾ ವಹಿಸಬೇಕು ಎಂದು ತಿಳಿಸಿದರು.

Advertisement

ಜ. 24ರಂದು ಸಭೆ
ಕೆಲವು ಸ್ವಾಯತ್ತ ವಿದ್ಯಾಸಂಸ್ಥೆಗಳು ತಮ್ಮ ಸ್ಥಳೀಯ ಪರಿಸ್ಥಿತಿಯನ್ನು ಗಮನಿಸಿ ಭೌತಿಕ ತರಗತಿಗಳನ್ನು ರದ್ದುಪಡಿಸಿ ಆನ್‌ಲೈನ್‌ ತರಗತಿಗಳನ್ನು ನಡೆಸುತ್ತಿರುವುದನ್ನು ಗಮನಿಸಲಾಗಿದ್ದು, ಅದನ್ನು ಅಗತ್ಯವಿರುವಷ್ಟು ದಿನ ಮುಂದುವರಿಸಬಹುದು. ಜ. 24ರಂದು ಮತ್ತೂಮ್ಮೆ ಸಭೆ ಸೇರಿ ಪರಿಸ್ಥಿತಿಯ ಅವಲೋಕನ ನಡೆಸಿ ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಕಿಶೋರ್‌ ಕುಮಾರ್‌, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸುಧಾಕರ್‌, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಜಯಣ್ಣ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next