Advertisement

ದಕ್ಷಿಣ ಕನ್ನಡ ಮುಂದುವರಿದ ಮಳೆ ಆಗಸ್ಟ್ 9ರವರೆಗೆ ರೆಡ್ ಅಲರ್ಟ್

06:18 PM Aug 08, 2020 | Team Udayavani |

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು ಆಗಸ್ಟ್ 9 ರವರೆಗೆ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಸೋಸಲಾಗಿದೆ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಆದೇಶ ಹೊರಡಿಸಿದೆ.

Advertisement

ಜಿಲ್ಲೆಯಲ್ಲಿ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಗೆ ನದಿಗಳಲ್ಲಿ ಪ್ರವಾಹದ ಸ್ಥಿತಿ ನಿರ್ಮಾಣವಾಗಿದ್ದು ತಗ್ಗು ಪ್ರದೇಶಗಳು ಪ್ರವಾಹಕ್ಕೆ ತುತ್ತಾಗಿವೆ. ಇದರ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯಲ್ಲಿ ಆಗಸ್ಟ್ 8 ರಿಂದ 9 ರವರೆಗೆ ರೆಡ್ ಅಲರ್ಟ್ ಘೋಷಿಸಿದ್ದು, 9ರಿಂದ 11ರವರೆಗೆ ಆರೆಂಜ್ ಅಲರ್ಟ್ ಘೋಷಿಸಿ ಹವಾಮಾನ ಇಲಾಖೆ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುವ ಮುನ್ಸೂಚನೆಯನ್ನು ನೀಡಿದೆ.

ವ್ಯಾಪಕ ಮಳೆಯಾಗುವ ನಿಟ್ಟಿನಲ್ಲಿ ಜಿಲ್ಲಾಡಳಿತ ಕೆಲವೊಂದು ಸಾರ್ವಜನಿಕರಿಗೆ ಮುನ್ಸೂಚನೆಯನ್ನು ನೀಡಿದ್ದು
– ಸಾರ್ವಜನಿಕರು ನದಿ ಹಾಗೂ ಸಮುದ್ರಗಳಿಗೆ ಇಳಿಯದಂತೆ ಎಚ್ಚರದಿಂದಿರಬೇಕು
– ಮಕ್ಕಳು ಹಾಗೂ ಸಾರ್ವಜನಿಕರು ಅಪಾಯಕಾರಿ ವಿದ್ಯುತ್ ಕಂಬ, ಕಟ್ಟಡ, ಮರಗಳಿಂದ ದೂರವಿರಬೇಕು.
– ಎಲ್ಲಾ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ತಮ್ಮ ತಮ್ಮ ಕೇಂದ್ರ ಸ್ಥಾನಗಳಲ್ಲಿ ಇರುವಂತೆ ಸೂಚಿಸಿದೆ.

ಪ್ರಾಕೃತಿಕ ವಿಕೋಪಕ್ಕೆ ಸಂಬಂಧಿಸಿದಂತೆ ಯಾವುದೇ ಸಮಸ್ಯೆಗಳಿಗೆ ಸಹಾಯವಾಣಿ 1077 ಅಥವಾ 9483908000

ಸಂಪರ್ಕಿಸಬಹುದಾಗಿದೆ

Advertisement
Advertisement

Udayavani is now on Telegram. Click here to join our channel and stay updated with the latest news.

Next