ಮಂಗಳೂರು: ಕರಾವಳಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬಿಸಿ ಗಾಳಿಯ ಎಚ್ಚರಿಕೆಯ ಬೆನ್ನಲ್ಲೇ ಮಾ. 8ರಂದು ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (ಕೆಎಸ್‌ಎನ್‌ಡಿಎಂಸಿ) ಮುನ್ಸೂಚನೆ ನೀಡಿದೆ.
Advertisement
ಬಿಸಿ ಗಾಳಿ ಹಿನ್ನೆಲೆಯಲ್ಲಿ ಮಾ. 8ರಂದು ರಾತ್ರಿಯವರೆಗೆ ಸಮುದ್ರ ತೀರದಲ್ಲಿ 1.5 ಮೀ.ನಿಂದ 2.3 ಮೀ.ವರೆಗೆ ಅಲೆಗಳ ಅಬ್ಬರ ಇರುವ ನಿರೀಕ್ಷೆ ಇದೆ.
ಕರಾವಳಿ ಭಾಗದಲ್ಲಿ ಮಂಗಳವಾರ ಗರಿಷ್ಠ ಉಷ್ಣಾಂಶ ವಾಡಿಕೆಗಿಂತ ಹೆಚ್ಚು ದಾಖಲಾಗಿತ್ತು. ಜಿಲ್ಲೆಯಲ್ಲಿ ದಿನವಿಡೀ ಸೆಕೆ ಮತ್ತು ಬಿಸಿಲಿನಿಂದ ಕೂಡಿದ ವಾತಾವರಣ ಇತ್ತು.