Advertisement
ಮೊದಲ ಡೋಸ್ ಕೋವಿಶೀಲ್ಡ್ ಲಸಿಕೆ ಪಡೆದ ಮಂದಿ, ಎರಡನೇ ಡೋಸ್ ಮತ್ತು ಬೂಸ್ಟರ್ ಡೋಸ್ ಲಸಿಕೆಯನ್ನು ಕೋವಿಶೀಲ್ಡ್ ಪಡೆಯಬೇಕಾಗುತ್ತದೆ. ಆದರೆ ಸದ್ಯ ಜಿಲ್ಲೆಯಲ್ಲಿ ಕೋವಿಶೀಲ್ಡ್ ಲಸಿಕೆ ಸಂಗ್ರಹ ಇಲ್ಲ. ಪರಿಣಾಮ, ಈಗಾಗಲೇ ಎರಡನೇ ಮತ್ತು ಬೂಸ್ಟರ್ ಡೋಸ್ ಲಸಿಕೆ ಪಡೆಯುವ ಅವಧಿ ಕಳೆದರೂ, ಲಸಿಕೆ ಸಿಗುತ್ತಿಲ್ಲ ಎನ್ನುತ್ತಾರೆ ಸಾರ್ವಜನಿಕರು.ಆರೋಗ್ಯ ಇಲಾಖೆ ಅಧಿಕಾರಿಗಳು ಈ ಕುರಿತು ಪ್ರತಿಕ್ರಿಯಿಸಿದ್ದು, ರಾಜ್ಯಾದ್ಯಂತ ಕೋವಿ
ಶೀಲ್ಡ್ ಲಸಿಕೆಗಳ ಕೊರತೆ ಎದುರಾಗಿದೆ, ಸದ್ಯವೇ ಹೊಸ ಸಂಗ್ರಹ ಬರಲಿದೆ ಎಂದು ತಿಳಿಸಿದ್ದಾರೆ.
ಉಡುಪಿ ಜಿಲ್ಲೆಯಲ್ಲೂ ಕೋವಿಶೀಲ್ಡ್ ಲಸಿಕೆ ಲಭ್ಯವಿಲ್ಲ. ಲಸಿಕೆ ಬಂದ ತತ್‌ಕ್ಷಣ ಮಾಹಿತಿ ನೀಡಲಾಗುವುದು ಎಂದು ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಪ್ರಕಟನೆ ತಿಳಿಸಿದೆ.
ಮತ್ತೆ ಲಸಿಕಾ ಅಭಿಯಾನ; ಇಂದು ಸಭೆ
ಹೈರಿಸ್ಕ್ ದೇಶಗಳಲ್ಲಿ ಕೋವಿಡ್ ಏರಿಕೆಯಾಗುತ್ತಿದ್ದು, ದ.ಕ. ಜಿಲ್ಲೆಯಲ್ಲಿಯೂ ಭೀತಿ ಎದುರಾಗಿದೆ. ಇದೇ ಕಾರಣಕ್ಕೆ ಈಗಾಗಲೇ ಲಸಿಕೆ ಪಡೆದುಕೊಳ್ಳಲು ಬಾಕಿ ಇರುವ ಮಂದಿಗೆ ಲಸಿಕಾ ಅಭಿಯಾನ ಮತ್ತೆ ಆರಂಭಿಸಲು ಆರೋಗ್ಯ ಇಲಾಖೆ ನಿರ್ಧರಿಸಿದೆ. ಈ ನಿಟ್ಟಿನಲ್ಲಿ ಮಂಗಳವಾರ ದ.ಕ. ಜಿ.ಪಂ. ಸಿಇಒ ಡಾ| ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳ ವಿಶೇಷ ಸಭೆ ನಡೆಯಲಿದೆ. ಜಿಲ್ಲೆಯಲ್ಲಿ ಲಸಿಕಾಕರಣಕ್ಕೆ ವೇಗ ನೀಡುವ ನಿಟ್ಟಿನಲ್ಲಿ ಚರ್ಚೆ ನಡೆಯುವ ಸಾಧ್ಯತೆ ಇದೆ.