Advertisement
ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ವಿವರಿಸಿದ ಅವರು ಇಂಥ ಲಕ್ಷಣಗಳಿರುವ ಮಕ್ಕಳು ಶಾಲೆಗೆ ಬರದಂತೆ ನೋಡಿಕೊಳ್ಳಬೇಕು. ನಿರ್ದಿಷ್ಟ ಚಿಕಿತ್ಸೆ ಇಲ್ಲವಾದರೂ ಕೆಲವು ದಿನಗಳಲ್ಲಿ ಇದು ಗುಣವಾಗುತ್ತದೆ. ಅದುದರಿಂದ ಗಾಬರಿಪಡುವ ಆವಶ್ಯಕತೆ ಇಲ್ಲ ಎಂದರು.
ಜಿಲ್ಲೆಯಲ್ಲಿ ಜುಲೈ ಅಂತ್ಯದವರೆಗೆ ಒಟ್ಟು 203 ಡೆಂಘಿ ಪ್ರಕರಣಗಳು ವರದಿಯಾಗಿವೆ. ಬೆಳ್ತಂಗಡಿಯಲ್ಲಿ ಅತಿ ಹೆಚ್ಚು 71 ಪ್ರಕರಣಗಳು ಕಂಡುಬಂದಿದ್ದು ನೆರಿಯ ಮತ್ತು ನಾರಾವಿಯಲ್ಲಿ ಹೆಚ್ಚು ಪ್ರಕರಣಗಳು ವರದಿಯಾಗಿದೆ. 93 ಮಲೇರಿಯಾ ಪ್ರಕರಣ
ದ.ಕ. ಜಿಲ್ಲೆಯಲ್ಲಿ ಜುಲೈ ಅಂತ್ಯದವರೆಗೆ 93 ಮಲೇರಿಯಾ ಪ್ರಕರಣಗಳು ವರದಿಯಾಗಿದ್ದು, ಮಂಗಳೂರು ನಗರದಲ್ಲೇ ಅತಿ ಹೆಚ್ಚು 79 ಪ್ರಕರಣಗಳು ದಾಖಲಾಗಿವೆ. ಸುಳ್ಯದಲ್ಲಿ ಈ ವರ್ಷ ಮಲೇರಿಯಾ ಪ್ರಕರಣ ವರದಿಯಾಗಿಲ್ಲ. ಕೆಲವು ವರ್ಷಗಳಿಂದ ಸುಳ್ಯ ತಾಲೂಕು ಮಲೇರಿಯಾ ಮುಕ್ತವಾಗಿದೆ ಎಂದರು.
Related Articles
Advertisement
ಮಂಕಿಪಾಕ್ಸ್ ತಪಾಸಣೆಮಂಕಿಪಾಕ್ಸ್ ಕುರಿತು ಮುನ್ನೆಚ್ಚರಿಕೆ ಕ್ರಮವಾಗಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ತಪಾಸಣೆ ನಡೆಸಲಾಗುತ್ತಿದೆ. ಮಂಕಿಪಾಕ್ಸ್ ಲಕ್ಷಣ ಯಾರಲ್ಲಾದರೂ ಕಂಡುಬಂದರೆ ಅವರ ಮಾದರಿ ಸಂಗ್ರಹಿಸಿ, ಪರೀಕ್ಷೆಗಾಗಿ ಬೆಂಗಳೂರಿಗೆ ಕಳುಹಿಸಲಾಗುವುದು. ಸದ್ಯಕ್ಕೆ ಮಂಕಿ ಪಾಕ್ಸ್ ಪರೀಕ್ಷೆ ರಾಜ್ಯದಲ್ಲಿ ಬೆಂಗಳೂರಿನಲ್ಲಿ ಮಾತ್ರವೇ ಇದೆ ಎಂದರು. ಬೂಸ್ಟರ್ ಡೋಸ್ ಪಡೆಯಲು ಮನವಿ
ಜಿಲ್ಲೆಯ ಎಲ್ಲ ಆರೋಗ್ಯ ಕೇಂದ್ರಗಳು, ಸರಕಾರಿ ಆಸ್ಪತ್ರೆಗಳಲ್ಲಿ ಬೂಸ್ಟರ್ ಡೋಸ್ ಉಚಿತವಾಗಿ ಲಭ್ಯವಿದ್ದು, ಸಾರ್ವಜನಿಕರು ಇದರ ಉಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಆರೋಗ್ಯಾಧಿಕಾರಿಯವರು ಮನವಿ ಮಾಡಿದರು. 18ರಿಂದ 59 ವರ್ಷ ವ¿ೋಮಾನದಲ್ಲಿ ಕೇವಲ ಶೇ. 9.5 ಮಂದಿ ಮಾತ್ರ ಬೂಸ್ಟರ್ ಡೋಸ್ ಪಡೆದುಕೊಂಡಿದ್ದಾರೆ ಎಂದವರು ತಿಳಿಸಿದರು.