Advertisement

ದ.ಕ: 614 ಮಂದಿಯ ತಪಾಸಣೆ

01:35 AM Mar 13, 2020 | mahesh |

ಮಂಗಳೂರು: ಕೊರೊನಾ ವೈರಸ್‌ ಹರಡದಂತೆ ಮುಂಜಾಗ್ರತಾ ಕ್ರಮವಾಗಿ ಮಂಗಳೂರು ಅಂ. ವಿಮಾನ ನಿಲ್ದಾಣ ಮತ್ತು ಎನ್‌ಎಂಪಿಟಿಯಲ್ಲಿ ತಪಾಸಣೆ ಮುಂದುವರಿದಿದ್ದು, ಗುರುವಾರ 614 ಮಂದಿಯನ್ನು ತಪಾಸಣೆಗೊಳ ಪಡಿಸಲಾಗಿದೆ.

Advertisement

ತಪಾಸಣೆ ವೇಳೆ ಜ್ವರ, ಶೀತ, ಕೆಮ್ಮು, ತಲೆನೋವಿನಂತಹ ಲಕ್ಷಣ ಕಂಡು ಬಂದವರನ್ನು 14 ದಿನಗಳ ನಿಗಾದಲ್ಲಿರಿಸಲಾಗುತ್ತದೆ. ಈಗಾಗಲೇ 50 ಮಂದಿಯನ್ನು ವೈದ್ಯಕೀಯ ನಿಗಾದಲ್ಲಿರಿಸಿದ್ದು, ಈ ಪೈಕಿ 11 ಮಂದಿಯಲ್ಲಿ ಯಾವುದೇ ಸೋಂಕು ಕಂಡು ಬಂದಿಲ್ಲ. 5 ಮಂದಿಯ ಗಂಟಲು ದ್ರವ ತಪಾಸಣೆಗೆ ಕಳುಹಿಸಲಾಗಿದೆ. ಮೂರು ವರದಿ ಸ್ವೀಕೃತವಾಗಿದ್ದು ಕೋವಿಡ್‌-19 ಸೋಂಕು ಪತ್ತೆಯಾಗಿಲ್ಲ. ಉಳಿದ ಎರಡು ವರದಿ ಇನ್ನಷ್ಟೇ ಬರಬೇಕಿದೆ ಎಂದು ದ.ಕ. ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್‌ ತಿಳಿಸಿದ್ದಾರೆ.

ಖಾಸಗಿ ವೈದ್ಯರಿಗೆ ಸೂಚನೆ
ದ.ಕ. ಜಿಲ್ಲೆಯ ಎಲ್ಲ ಖಾಸಗಿ ವೈದ್ಯರು ತಮ್ಮ ಚಿಕಿತ್ಸಾಲಯಗಳಿಗೆ ಬರುವ ರೋಗಿಯ ಪ್ರಯಾಣದ ವಿವರಗಳನ್ನು ಪಡೆದು ಮತ್ತು ಸೋಂಕಿರುವ ಪ್ರದೇಶದಿಂದ ಬರುವ ರೋಗಿಯ ಆರೋಗ್ಯ ವಿವರಗಳನ್ನು ಕಡ್ಡಾಯವಾಗಿ ಜಿಲ್ಲಾ ಆರೋಗ್ಯ ಇಲಾಖೆಗೆ ವರದಿ ಮಾಡಲು ಸೂಚಿಸಲಾಗಿದೆ. ವಿದೇಶದಿಂದ ಆಗಮಿಸಿದ ವ್ಯಕ್ತಿಗಳನ್ನು ಗುರುತಿಸಿ ಆರೋಗ್ಯ ತಪಾಸಣೆ ಕೈಗೊಳ್ಳುವ ನಿಟ್ಟಿನಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಹಂತದಲ್ಲಿ ವಿವಿಧ ತಂಡಗಳನ್ನು ರಚಿಸಲಾಗಿದೆ. ಲಕ್ಷದ್ವೀಪದಿಂದ ಹಡಗಿನಲ್ಲಿ ಮಂಗಳೂರಿಗೆ ಬರುವ ಸ್ಥಳೀಯ ಪ್ರಯಾಣಿಕರನ್ನು ವೈದ್ಯಕೀಯ ತಪಾಸಣೆ ಮಾಡಲಾಗುತ್ತದೆ ಎಂದು ಮಾಹಿತಿ ತಿಳಿಸಿದ್ದಾರೆ

ಯಾವುದೇ ರೀತಿಯ ಜ್ವರ, ಶೀತ, ಕೆಮ್ಮು ಇರುವ ವ್ಯಕ್ತಿಗಳನ್ನು ಸಂಪೂರ್ಣ ಗುಣಮುಖ ರಾಗು ವವರೆಗೆ ಜನಸಂದಣಿ ಇರುವ ಜಾಗಗಳಿಗೆ ಹೋಗದಿರುವಂತೆ ಡಿಸಿ ಮನವಿ ಮಾಡಿದ್ದಾರೆ. ಬಯೋಮೆಟ್ರಿಕ್‌ ನಿಲುಗಡೆ ಕೊರೊನಾ ಭೀತಿ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಇನ್ಫೋಸಿಸ್‌ ಸಹಿತ ವಿವಿಧ ಕಂಪೆನಿಗಳಲ್ಲಿ ಬಯೋಮೆಟ್ರಿಕ್‌ ವ್ಯವಸ್ಥೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಬಯೋ ಮೆಟ್ರಿಕ್‌ ಬದಲಾಗಿ ದೈನಂದಿನ ಹಾಜರಾತಿಯನ್ನು ಪುಸ್ತಕದಲ್ಲಿ ಬರೆಯುವ ಕೆಲಸ ಕೆಲವು ಸಂಸ್ಥೆಗಳಲ್ಲಿ ನಡೆಯುತ್ತಿದೆ.

ಜಾಗೃತಿ ಫಲಕ
ಮಂಗಳೂರಿನ ಕೆಲವು ದಿನಸಿ ಅಂಗಡಿಗಳಲ್ಲಿ ಕೊರೊನಾ ಹರಡದಂತೆ ಮುಂಜಾಗ್ರತೆ ವಹಿಸುವ ಜಾಗೃತಿ ಫಲಕ ಅಳವಡಿಸಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next