Advertisement

ದಲಿತ ಮುಖ್ಯಮಂತ್ರಿ ಅಗತ್ಯವಿದೆ: ದಿನೇಶ್‌ ಅಭಿಮತ

06:00 AM Dec 28, 2018 | |

ಬೆಂಗಳೂರು: “ರಾಜ್ಯದಲ್ಲಿ ದಲಿತ ವ್ಯಕ್ತಿಯೊಬ್ಬರು ಮುಖ್ಯಮಂತ್ರಿಯಾಗುವ ಅವಶ್ಯಕತೆ ಇದೆ’ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ. ಮಾಜಿ ಸಚಿವ ದಿವಂಗತ ಬಿ. ಬಸಲಿಂಗಪ್ಪ ಸ್ಮರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿಯಾಗುವ ಅರ್ಹತೆ ಇರುವ ದಲಿತ ಮುಖಂಡರಿದ್ದಾರೆ, ಮಲ್ಲಿಕಾರ್ಜುನ ಖರ್ಗೆ 2004ರಲ್ಲಿಯೇ ಮುಖ್ಯಮಂತ್ರಿಯಾಗಬೇಕಿತ್ತು. ಅವರಿಗೆ ಅವಕಾಶ ಕೈ ತಪ್ಪಿತು. ಈಗ ಉಪ ಮುಖ್ಯಮಂತ್ರಿ ಸ್ಥಾನದವರೆಗೂ ದಲಿತರು ಅಧಿಕಾರಕ್ಕೆ ಏರುವಂತಾಗಿದೆ. ಮುಂದಿನ ದಿನಗಳಲ್ಲಿ ದಲಿತ ನಾಯಕರೊಬ್ಬರು ಮುಖ್ಯಮಂತ್ರಿಯಾಗುವ ಅಗತ್ಯತೆ ಇದೆ
ಎಂದು ಹೇಳಿದರು.

Advertisement

ಕಾಂಗ್ರೆಸ್‌ ಪಕ್ಷದಲ್ಲಿ ಮಲ್ಲಿಕಾರ್ಜುನ ಖರ್ಗೆ ರಾಷ್ಟ್ರ ಮಟ್ಟದಲ್ಲಿ ಪಕ್ಷದ ನಾಯಕರಾಗಿದ್ದಾರೆ. ಅವರು ಇನ್ನೂ ಉನ್ನತ ಹುದ್ದೆಗೇರುವ ಸಾಧ್ಯತೆಗಳಿವೆ. ರಾಜ್ಯದಲ್ಲಿ ಕೆ.ಎಚ್‌. ಮುನಿಯಪ್ಪ, ಪರಮೇಶ್ವರ್‌ ಅವರೂ ಕೂಡ ಮುಖ್ಯಮಂತ್ರಿಯಾಗುವ ಅರ್ಹತೆ ಹೊಂದಿದ್ದಾರೆ
ಎಂದು ಹೇಳಿದರು. ಕೆಲವು ದಲಿತ ಮುಖಂಡರು ಹೊರಗಡೆ ಮಾತನಾಡುವುದೊಂದು ಒಳಗಡೆ ಇರುವುದೇ ಒಂದು. ರಾಜಕೀಯವಾಗಿ ತೊಂದರೆಯಾಗುತ್ತದೆ ಎನ್ನುವ ಕಾರಣಕ್ಕೆ ಆ ರೀತಿಯಲ್ಲಿ ನಡೆದುಕೊಳ್ಳುತ್ತಾರೆ. ಬಸಲಿಂಗಪ್ಪ ಅವರು ನೇರ ನುಡಿಯ ನಾಯಕರಾಗಿದ್ದರು. ಅವರಿಗೆ ಮುಖ್ಯಮಂತ್ರಿಯಾಗುವ ಎಲ್ಲ ಅರ್ಹತೆ ಇತ್ತು. ಆದರೆ, ಅವಕಾಶ ದೊರೆಯಲಿಲ್ಲ. ದಲಿತರ ವಿರುದ್ಧಇರುವ ಕೆಟ್ಟ ಪದಟಛಿತಿಗಳನ್ನು ತೆಗೆದು ಹಾಕಲು ಅವರು ನಿರಂತರ ಹೋರಾಟ ಮಾಡಿದ್ದರು ಎಂದು ಹೇಳಿದರು.

ಈ ಬಾರಿ ಕಾಂಗ್ರೆಸ್‌ ಪೂರ್ಣ ಪ್ರಮಾಣದಲ್ಲಿ ಅಧಿಕಾರಕ್ಕೆ ಬಂದಿದ್ದರೆ, ಬಡ್ತಿ ಮೀಸಲಾತಿ ಕಾಯ್ದೆಯನ್ನು ಜಾರಿಗೊಳಿಸುತ್ತಿದ್ದೆವು. ಈಗ ಸಮ್ಮಿಶ್ರ ಸರ್ಕಾರ ಇರುವುದರಿಂದ ಸ್ವಲ್ಪ ವಿಳಂಬವಾಗುತ್ತಿದೆ. ಆದರೆ, ಕಾಂಗ್ರೆಸ್‌ ಬಡ್ತಿ ಮೀಸಲಾತಿ ಕಾಯ್ದೆ ಜಾರಿಗೆ ಬದ್ಧವಾಗಿದೆ ಎಂದು ಹೇಳಿದರು.  ಜಕ್ಕಪ್ಪನವರ್‌ಗೆ ಎಂಎಲ್‌ಸಿ ಮಾಡುವಂತೆ ಆಗ್ರಹ: ಕೆಪಿಸಿಸಿ ಎಸ್ಸಿ ಘಟಕದ ಅಧ್ಯಕ್ಷ್ಯ ಎಫ್.ಎಸ್‌. ಜಕ್ಕಪ್ಪನವರ್‌ ಅವರಿಗೆ ವಿಧಾನ ಪರಿಷತ್‌ ಸದಸ್ಯರನ್ನಾಗಿ ನೇಮಕ ಮಾಡುವಂತೆ ದಲಿತ ಮುಖಂಡರು ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಅವರನ್ನು ಇದೇ ಸಂದರ್ಭದಲ್ಲಿ ಆಗ್ರಹಿಸಿದರು. 

Advertisement

Udayavani is now on Telegram. Click here to join our channel and stay updated with the latest news.

Next