ಬೆಂಗಳೂರು: ಚಿತ್ರದುರ್ಗದಲ್ಲಿ ಜ. 8 ರಂದು ದಲಿತ ಸಮುದಾಯದ ಐಕ್ಯತಾ ಸಮಾವೇಶ ಹಮ್ಮಿಕೊಳ್ಳಲಾಗುವುದು ಎಂದು ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ದಲಿತ ಮುಖಂಡರು ಸುದ್ದಿಗೋಷ್ಟಿ ನಡೆಸಿ ಹೇಳಿದರು.
ಕೆಪಿಸಿಸಿ ಮಾಜಿ ಅಧ್ಯಕ್ಷ ಜಿ.ಪರಮೇಶ್ವರ್, ಮಾಜಿ ಕೇಂದ್ರ ಸಚಿವ ಮುನಿಯಪ್ಪ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ, ಪರಮೇಶ್ವರ ನಾಯ್ಕ್, ವಿ.ಎಸ್.ಉಗ್ರಪ್ಪ, ಎಚ್.ಸಿ.ಮಹಾದೇವ ಪ್ರಸಾದ್ ಭಾಗಿಯಾಗಿದ್ದರು.
ಸುದ್ದಿಗೋಷ್ಟಿಯಲ್ಲಿ ಸಮಾವೇಶದಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸನ್ಮಾನಿಸಲಾಗುವುದು. ಜತೆಗೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕ ಗಾಂಧಿ ಅವರ ದಿನಾಂಕ ಕೇಳಿದ್ದೇವೆ ಈ ಮೂವರಲ್ಲಿ ಯಾರು ಬರುತ್ತಾರೆ ಎಂಬುದನ್ನು ಮಲ್ಲಿಕಾರ್ಜುನ ಖರ್ಗೆ ತಿಳಿಸಲಿದ್ದಾರೆ ಎಂದರು.
ಮೀಸಲಾತಿ ಹೆಸರಿನಲ್ಲಿ ದಲಿತ ಸಮುದಾಯವನ್ನು ಬಿಜೆಪಿ ಒದೆದಾಳಲು ಹೊರಟಿದೆ.ಇದಕ್ಕೆ ಅವಕಾಶ ನೀಡುವುದಿಲ್ಲ. ಸ್ವಾತಂತ್ರ್ಯ ಪೂರ್ವದಲ್ಲಿ ಮತ್ತು ಸ್ವಾತಂತ್ರ್ಯ ನಂತರವು ಕಾಂಗ್ರೆಸ್ ದಲಿತರೊಂದಿಗೆ ಇದೆ. ಹೀಗಾಗಿ ಮತ್ತೆ ದಲಿತರಿಗೆ ಭರವಸೆ ನೀಡುವ ನಿಟ್ಟಿನಲ್ಲಿ ಸಮಾವೇಶ ಆಯೋಜಿಸಲಾಗಿದೆ ಎಂದು ತಿಳಿಸಿದರು.
ಮೀಸಲಾತಿ ಬಿಕ್ಷೆ ಅಲ್ಲ,ಅದು ನಮ್ಮ ಹಕ್ಕು ಇದನ್ನು ರಾಜಕೀಯ ಲಾಭಪಡೆಯಲು ಹೊರಟಿದ್ದಾರೆ. ಮೀಸಲಾತಿಗೆ ಕೇಂದ್ರ ಸರ್ಕಾರ ಕಾನೂನಿನ ಚೌಕಟ್ಟು ನೀಡಲಿ ಎಂದರು. ಸಮಾವೇಶದಲ್ಲಿ ದಲಿತರ ಹಲವು ಸಮಸ್ಯೆಗಳನ್ನು ಚರ್ಚಿಸಲಾಗುವುದು ಎಂದು ಹೇಳಿದರು.