Advertisement

ಮೊಯಿಲಿ ವಿರುದ್ಧ ದಲಿತರ ಪ್ರತಿಭಟನೆ

12:22 PM Mar 22, 2018 | |

ಬೆಂಗಳೂರು: ಕಾಂಗ್ರೆಸ್‌ನಲ್ಲಿ ಟಿಕೆಟ್‌ ಹಂಚಿಕೆಗೆ ಹಣ ಹಾಗೂ ಗುತ್ತಿಗೆದಾರರ  ಪ್ರಭಾವ ಬಳಕೆಯಾಗುತ್ತಿದೆ ಎಂದು ಆರೋಪಿಸಿ ಟ್ವೀಟ್‌ ಮಾಡಿ ಪಕ್ಷವನ್ನು ಮುಜುಗರಕ್ಕೀಡು ಮಾಡಿದ್ದ ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯಿಲಿ ಅವರನ್ನು ಚುನಾವಣಾ ಪ್ರಣಾಳಿಕೆ ಸಮಿತಿಯಿಂದ ಕೈ ಬಿಡಬೇಕು ಎಂದು ಮಹದೇವಪುರ್‌ ಕಾಂಗ್ರೆಸ್‌ ದಲಿತ ಮುಖಂಡರು ಹಾಗೂ ಕಾರ್ಯಕರ್ತರು ಆಗ್ರಹಿಸಿದ್ದಾರೆ. 

Advertisement

ಬುಧವಾರ ನಗರದ ಮೌರ್ಯ ಸರ್ಕಲ್‌ ಬಳಿ ಪ್ರತಿಭಟನೆ ನಡೆಸಿದ ಅವರು, ವೀರಪ್ಪ ಮೊಯಿಲಿ ಮಹದೇವಪುರ ಕ್ಷೇತ್ರದಲ್ಲಿ ಭ್ರಷ್ಟರಿಗೆ ಟಿಕೆಟ್‌ ಕೊಡಿಸಲು ಪ್ರಯತ್ನ ನಡೆಸಿದ್ದಾರೆ. ಕ್ಷೇತ್ರದವರಲ್ಲದವ‌ರಿಗೆ ಟಿಕೆಟ್‌ ಕೊಡಿಸಲು ವೀರಪ್ಪ ಮೊಯಿಲಿ ಲಾಬಿ ನಡೆಸಿದ್ದು, ಅವರನ್ನು ಚುನಾವಣಾ ಪ್ರಣಾಳಿಕೆ ಸಮಿತಿಯಿಂದ ಕೈ ಬಿಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ದಲಿತ ಮುಖಂಡ ಎಚ್‌.ಸಿ. ಮಹದೇವಪ್ಪ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿ ವೀರಪ್ಪ ಮೊಯಿಲಿ ದಲಿತರಿಗೆ ಅವಮಾನ ಮಾಡಿದ್ದಾರೆ. ಹೀಗಾಗಿ ಅವರನ್ನು ಚುನಾವಣಾ ಆಯ್ಕೆ ಸಮಿತಿಯಿಂದಲೂ ಕೈ ಬಿಡಬೇಕು ಎಂದು  ಒತ್ತಾಯಿಸಿದರು. 

Advertisement

Udayavani is now on Telegram. Click here to join our channel and stay updated with the latest news.

Next