Advertisement

ಉತ್ತರಪ್ರದೇಶ : ನೇಣು ಬಿಗಿದ ಸ್ಥಿತಿಯಲ್ಲಿ ದಲಿತ ಸಹೋದರಿಯರ ಶವ ಪತ್ತೆ : ನಾಲ್ವರು ವಶಕ್ಕೆ

09:14 AM Sep 15, 2022 | Team Udayavani |

ಉತ್ತರಪ್ರದೇಶ : ಬುಧವಾರ ಸಂಜೆ ಲಖಿಂಪುರ ಖೇರಿ ಜಿಲ್ಲೆಯ ನಿಘಸನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪರಿಶಿಷ್ಟ ಜಾತಿ ಸಮುದಾಯಕ್ಕೆ ಸೇರಿದ ಇಬ್ಬರು ಸಹೋದರಿಯರ ಮೃತದೇಹಗಳು ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿವೆ.

Advertisement

ಮೃತರನ್ನು ಪೂನಂ (15) ಮತ್ತು ಮನಿಶಾ (17) ಎಂದು ಗುರುತಿಸಲಾಗಿದೆ.

ಬೈಕ್ ನಲ್ಲಿ ಬಂದ ಮೂವರು ಯುವಕರು ನನ್ನ ಮಕ್ಕಳನ್ನು ಅಪಹರಿಸಿ ಮರಕ್ಕೆ ನೇಣು ಹಾಕಿದ್ದಾರೆ ಎಂದು ಮೃತಳ ತಾಯಿ ಮಾಯಾದೇವಿ ಆರೋಪಿಸಿದ್ದಾರೆ.

ಮೃತದೇಹಗಳು ಪತ್ತೆಯಾದ ಪ್ರದೇಶದಲ್ಲಿ ಭಾರೀ ಜನ ಜಮಾವಣೆಗೊಂಡಿದ್ದು ಹೆಚ್ಚಿನ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು. ಅಲ್ಲದೆ ಲಖಿಂಪುರ ಖೇರಿ ಜಿಲ್ಲೆಯ ಎಸ್ಪಿ ಸಂಜೀವ್ ಸುಮನ್ ಮತ್ತು ಹೆಚ್ಚುವರಿ ಎಸ್ಪಿ ಅರುಣ್ ಕುಮಾರ್ ಸಿಂಗ್ ಕೂಡ ಸ್ಥಳಕ್ಕೆ ಆಗಮಿಸಿದ್ದಾರೆ.

ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದ್ದು, ಘಟನೆ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Advertisement

ಸಂತ್ರಸ್ತೆಯ ತಾಯಿಯ ದೂರಿನ ಆಧಾರದ ಮೇಲೆ ಪೊಲೀಸರು ಐಪಿಸಿ ಸೆಕ್ಷನ್ 302,323,452,376 ಮತ್ತು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಎಫ್‌ಐಆರ್‌ನ ಪ್ರಕಾರ, ಪ್ರಮುಖ ಆರೋಪಿ ಚೋಟು ತನ್ನ ಸ್ನೇಹಿತರೊಂದಿಗೆ ಸಂತ್ರಸ್ತರ ಮನೆಗೆ ನುಗ್ಗಿ ಬಲವಂತವಾಗಿ ಮೋಟಾರ್ ಬೈಕ್‌ನಲ್ಲಿ ಕರೆದೊಯ್ದಿದ್ದಾನೆ. ಆರೋಪಿಗಳು ಅವರ ತಾಯಿಯನ್ನು ಥಳಿಸಿ, ಇಬ್ಬರು ಸಹೋದರಿಯರ ಮೇಲೆ ಅತ್ಯಾಚಾರವೆಸಗಿದ್ದಾರೆ ಮತ್ತು ಅವರ ದೇಹವನ್ನು ಮರಕ್ಕೆ ನೇತು ಹಾಕಿದ್ದಾರೆ ಎಂದು ಎಫ್‌ಐಆರ್ ತಿಳಿಸಿದೆ.

ಆರೋಪಿಗಳು ಪೊಲೀಸ್ ವಶದಲ್ಲಿದ್ದು, ಮುಂದಿನ ತನಿಖೆ ನಡೆಯುತ್ತಿದೆ. ಪ್ರಕರಣದಲ್ಲಿ ಭಾಗಿಯಾಗಿರುವ ಇತರ ಆರೋಪಿಗಳ ಪತ್ತೆಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಯುತಿಯರ ಅಪಹರಣ, ಅತ್ಯಾಚಾರ, ಕೊಲೆ ಪ್ರಕರಣಗಳು ಹೆಚ್ಚಾಗುತ್ತಿದ್ದು ಜನರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಸರ್ಕಾರದ ವಿರುದ್ಧ ವಿರೋಧ ಪಕ್ಷದ ನಾಯಕರು ಕಿಡಿಕಾರಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next