Advertisement

ಡ್ಯಾಂ ಕಾಮಗಾರಿ ಪರಿಶೀಲನೆ

04:05 PM May 09, 2020 | Suhan S |

ಕೊಪ್ಪಳ: ತಾಲೂಕಿನ ಕಿನ್ನಾಳ ಗ್ರಾಪಂ ವ್ಯಾಪ್ತಿಯಲ್ಲಿ ನಡೆದ ನರೇಗಾ ಚೆಕ್‌ ಡ್ಯಾಂ ಹೂಳೆತ್ತುವ ಕಾಮಗಾರಿ ಸ್ಥಳಕ್ಕೆ ಶುಕ್ರವಾರ ಸಂಸದ ಸಂಗಣ್ಣ ಕರಡಿ ಭೇಟಿ ನೀಡಿ, ಕಾಮಗಾರಿ ಪರಿಶೀಲನೆ ಮಾಡಿದರು.

Advertisement

ಕೂಲಿಕಾರರನ್ನು ಉದ್ದೇಶಿಸಿ ಮಾತನಾಡಿದ ಅವರು, ಬಡವರಿಗೆ, ಆರ್ಥಿಕವಾಗಿ ಹಿಂದುಳಿದವರಿಗೆ, ಕೂಲಿಕಾರರಿಗೆ ಇದೊಂದು ಒಳ್ಳೆಯ ಯೋಜನೆಯಾಗಿದೆ. ವೈಯಕ್ತಿಕ ಕಾಮಗಾರಿ ಹಾಗೂ ಸಾಮೂಹಿಕ ಕಾಮಗಾರಿಗಳಲ್ಲಿ ತೊಡಗಿಸಿಕೊಂಡು ಯೋಜನೆಯ ಲಾಭವನ್ನು ಪಡೆಯಬೇಕು. ಕೋವಿಡ್ 19 ಹಿನ್ನೆಲೆಯಲ್ಲಿ ಎಲ್ಲರೂ ಕೇಂದ್ರ ಹಾಗೂ ರಾಜ್ಯ ಸರ್ಕಾರ ನೀಡಿದ ನಿರ್ದೇಶನಗಳನ್ನು ಪಾಲನೆ ಮಾಡಿ ನಮ್ಮ ಹಾಗೂ ಕುಟುಂಬದ ಜೀವವನ್ನು ಕಾಪಾಡಿಕೊಳ್ಳಬೇಕೆಂದು ತಿಳಿಸಿದರು.

ನಂತರ ಕೂಲಿಕಾರರಿಗೆ ಹ್ಯಾಂಡ್‌ ಸ್ಯಾನಿಟೈಸರ್‌ ಮತ್ತು ಮಾಸ್ಕ್ಗಳನ್ನು ವಿತರಿಸಿದರು. ತಾಪಂ ಇಒ ಟಿ. ವೆಂಕೋಬಪ್ಪ ಮಾತನಾಡಿ, ತಾಲೂಕಿನಲ್ಲಿ ಒಟ್ಟು 52,919 ಜಾಬ್‌ ಕಾರ್ಡ್‌ ನೀಡಲಾಗಿದ್ದು ಇದರಲ್ಲಿ ತಾಲೂಕಿನಲ್ಲಿ ವೈಯಕ್ತಿಕ ಕಾಮಗಾರಿಗಳಾದ ಬದು ನಿರ್ಮಾಣ, ಕೃಷಿ ಹೊಂಡ, ನಾಲಾ ಹೂಳೆತ್ತುವುದು, ಚೆಕ್‌ ಡ್ಯಾಂ ಹೂಳೆತ್ತುವುದು ಹೀಗೆ ಒಟ್ಟು 458 ಕಾಮಗಾರಿ ಪ್ರಾರಂಭವಾಗಿವೆ. 3,847 ಕೂಲಿಕಾರರು ಕೆಲಸವನ್ನು ನಿರ್ವಹಿಸುತ್ತಿದ್ದಾರೆ. ಇಲ್ಲಿಯವರೆಗೆ ಒಟ್ಟು 24,856 ಮಾನವ ದಿನಗಳನ್ನು ಸೃಜನೆ ಮಾಡಲಾಗಿದೆ. ರೈತರು ಗಮನಹರಿಸಿ ವೈಯಕ್ತಿಕ ಕಾಮಗಾರಿಗಳಾದ ಬದು ನಿರ್ಮಾಣ, ಕೃಷಿಹೊಂಡ ಮಾಡಿಕೊಳ್ಳುವಂತೆ ತಿಳಿಸಿದರು.

ಜಿಪಂ ಸದಸ್ಯ ಗವಿಸಿದ್ದಪ್ಪ ಕರಡಿ, ರಾಮಣ್ಣ ಚೌಡ್ಯಿ, ಗ್ರಾಪಂ ಅಧ್ಯಕ್ಷೆ ಚೆನ್ನಮ್ಮ ವಾಲ್ಮೀಕಿ, ಉಪಾಧ್ಯಕ್ಷೆ ಗೀತಾ ಬಿದರೂರ, ಶರಣಯ್ಯ ಸಸಿಮಠ, ಕಿನ್ನಾಳ ಪಿಡಿಒ ವೀರನಗೌಡ ಪಾಲ್ಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next