Advertisement
ಮಾಗಡಿ ತಾಲೂಕಿನ ಕುದೂರು, ತಿಪ್ಪಸಂದ್ರ, ಸೋಲೂರು, ಮಾಡಬಾಳ್, ಕಸಬಾ ಹೋಬಳಿ ವ್ಯಾಪ್ತಿಯಲ್ಲಿ ಜಿಟಿಜಿಟಿ ಮಳೆಯಾಗುತ್ತಿದ್ದು, ರೈತರು ಬಿತ್ತನೆ ಮಾಡಿದ್ದ ರಾಗಿ, ಭತ್ತ, ತೊಗರಿ, ಅಲಸಂದೆ, ,ಅವರೆ ಕಾಯಿ ಗಿಡಗಳು ಹಸಿರಿನಿಂದ ಕೂಡಿದ್ದು, ನಳನಳಿಸುತ್ತಿವೆ. ಉತ್ತರಾ ಮಳೆಗೆ ರಾಗಿ ಹೊಲದ ಪೈರು ಮುಸುಕು ಹೊಡೆಯಲು ಸಕಾಲವಾಗಿದೆ. ಇದರಿಂದಾಗಿ ಉತ್ತಮವಾಗಿ ಮುಸುಕು ಬರಲಿದೆ.
Related Articles
Advertisement
ಬೆಳೆಗೆ ಕೀಟನಾಶಕ ಸಿಂಪಡಣೆ: ರಾಗಿ ಹೊಲದಲ್ಲಿ ಸೊಂಪಾಗಿ ಬೆಳೆ ಬಂದಿದ್ದು, ಜೊತೆಗೆ ಹಸಿರು ಹುಲ್ಲು ಸಹ ಚೆನ್ನಾಗಿ ಬೆಳೆದು ನಿಂತಿರುವುದರಿಂದ ಕೀಟಬಾಧೆ ಹೆಚ್ಚಾಗುವ ಸಾಧ್ಯತೆಯಿದೆ ಎಂಬ ಆತಂಕ ರೈತರನ್ನು ಕಾಡುತ್ತಿದೆ. ಇದರಿಂದಾಗಿ ಕೃಷಿ ಇಲಾಖೆ ಸೂಚಿಸುವ ಕೀಟನಾಶಕಗಳನ್ನು ಸಿಂಪಡಿಸಲು ರೈತರು ಮುಂದಾಗಿದ್ದಾರೆ.
ಉತ್ತಮ ಫಸಲು ಬಂದಿದೆ. ಈಗ ಮಳೆಯಿಂದಾಗಿ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಲಿದೆ ಎಂಬ ಆತಂಕದಲ್ಲಿ ರೈತರಿದ್ದಾರೆ. ಈಗಾಗಲೇ ಮೂರು ಹಂತದಲ್ಲಿ ರಾಗಿ ಬೆಳೆ ಬಂದಿದೆ. ಮುಂಚಿತವಾಗಿ ಬಿತ್ತನೆಯಾಗಿರುವ ರಾಗಿ ಬೆಳೆ ಈಗಾಗಲೇ ತೆನೆ ಒಣಗಿ ಕೊಯ್ಲಿಗೆ ಬಂದಿದೆ. ಬಹುತೇಕ ರೈತರು ರಾಗಿ ಬೆಳೆಯನ್ನು ಕೊಯ್ದಿದ್ದಾರೆ.
ಬಹುತೇಕ ರೈತರು ತಡವಾಗಿ ಬಿತ್ತನೆ ಮಾಡಿರುವುದರಿಂದ 15ರಿಂದ 25 ದಿನದವರೆಗೆ ಕೊಯ್ಲಿಗೆ ಕಾಯಬಹುದು. ಈಗಾಗಲೆ ಕೊಯ್ದಿರುವ ರಾಗಿ ಬೆಳೆ ನೀರಿನಿಂದ ಒದ್ದೆಯಾಗಿ ಕೊಳೆಯುತ್ತಿದೆ. ಜಮೀನಿನಲ್ಲಿಯೇ ಬೆಳೆಗಳು ಹಾಳಾಗುತ್ತಿದೆ ಎಂದು ರೈತರು ಆತಂಕ ವ್ಯಕ್ತಪಡಿಸಿದ್ದಾರೆ.
ರೈತರಿಗೆ ಯಂತ್ರೋಪಕರಣ ಸೇರಿದಂತೆ ಕಾಲಕಾಲಕ್ಕೆ ಸರ್ಕಾರ ಸಹಾಯಧನದಲ್ಲಿ ಬಿತ್ತನೆ ಬೀಜ, ಔಷಧ, ರಸಗೊಬ್ಬರವನ್ನು ಪೂರೈಕೆ ಮಾಡುತ್ತಿದ್ದೇವೆ. ಆರ್‌ಎಸ್‌ಕೆ ಕೃಷಿ ಅಧಿಕಾರಿಗಳು ಸಹ ರೈತರಿಗೆ ಸರ್ಕಾರದ ವಿವಿಧ ಯೋಜನೆ ಹಾಗೂ ಕೃಷಿ ಸಂಬಂಧಿಸಿದಂತೆ ಸಮಗ್ರ ಮಾಹಿತಿ ನೀಡುತ್ತಾ ರೈತರನ್ನು ಪ್ರೋತ್ಸಾಹಿಸುತ್ತಿದ್ದೇವೆ. ಈಗಾಗಲೇ ಕೃಷಿ ಪ್ರಶಸ್ತಿ ಪಡೆಯಲು ಬಹುತೇಕ ರೈತರು ಸ್ಪರ್ಧೆಗೆ ಇಳಿದಿದ್ದಾರೆ. ಪೈಪೋಟಿ ಇರುವೆಡೆ ರೈತರಲ್ಲಿ ಆತ್ಮಸ್ಥೈರ್ಯ ಹೆಚ್ಚಿಸುತ್ತದೆ. ಆದರೆ, ಅಕಾಲಿಕ ಮಳೆಗೆ ರೈತರು ಬೆಳೆದ ರಾಗಿ ಬೆಳೆಗೆ ಒಡೆತ ಬಿದ್ದಿದೆ.● ಎನ್.ನರಸಿಂಹಯ್ಯ, ಸಹಾಯಕ ಕೃಷಿ ನಿರ್ದೇಶಕ, ಮಾಗಡಿ ಮಾಗಡಿ ತಾಲೂಕಿನಲ್ಲಿ ರಾಗಿ ಪ್ರಮುಖ ಬೆಳೆಯಾಗಿದೆ. ಅದರಲ್ಲೂ, ಎಲ್ಲಿ ಬೆಳೆಯಾಗದಿದ್ದರೂ ಮಾಗಡಿಯಲ್ಲಿ ಕನಿಷ್ಠ ಪಕ್ಷ ಶೇ.40ರಿಂದ 50ರಷ್ಟು ರಾಗಿ ಬೆಳೆ ರೈತರ ಕೈ ಸೇರಿದೆ ಎಂಬ ನಂಬಿಕೆಯಿದೆ. ಮಾಗಡಿ ರಂಗನ ಮಹಿಮೆಯಿಂದ ಎಂದೂ ರಾಗಿ ಬೆಳೆ ಸಂಪೂರ್ಣವಾಗಿ ನಷ್ಟವಾದ ದಿನಗಳನ್ನು ನಾವು ಕಂಡಿಲ್ಲ. ಅಕಾಲಿಕ ಮಳೆಯಾಗುತ್ತಿದೆ. ರೈತರು ಕಷ್ಟಪಟ್ಟು ಬೆಳೆದ ಬೆಳೆ ನಷ್ಟವಾಗದಂತೆ ಮಾಗಡಿ ರಂಗನಾಥ ಸ್ವಾಮಿ ದೇವರನ್ನು ಪ್ರಾರ್ಥಿಸುತ್ತೇವೆ.
● ಶ್ಯಾನಭೋಗನಹಳ್ಳಿ ರಾಜಣ್ಣ, ಪ್ರಗತಿ ಪರ ರೈತ, ಮಾಗಡಿ ತಿರುಮಲೆ ಶ್ರೀನಿವಾಸ್