Advertisement
ಜ. 6ರಂದು ಘಟನೆ ಬೆಳಕಿಗೆ ಬಂದಿದೆ. ಜ. 5ರಂದು ರಾತ್ರಿ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ. ಕಳೆದ ಮೂರು ದಿನಗಳ ಹಿಂದೆ ಬ್ಯಾನರ್ ಅಳವಡಿಸಲಾಗಿತ್ತು. ಘಟನಾ ಸ್ಥಳಕ್ಕೆ ಸುಳ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ರಿಕ್ಷಾ ಚಾಲಕರು, ಸಂಘಟನೆಯ ಪ್ರಮುಖರು ಜಮಾಯಿಸಿದ್ದರು. ಕೃತ್ಯ ಎಸಗಿದ ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಲಾಯಿತು.
ಸುಳ್ಯದಲ್ಲಿ ಬ್ಯಾನರ್ ಹರಿದಿರುವ ಘಟನೆಯನ್ನು ಸಂಸದ ನಳಿನ್ ಕುಮಾರ್ ಕಟೀಲು ಮತ್ತು ಶಾಸಕಿ ಭಾಗೀರಥಿ ಮುರುಳ್ಯ ಅವರು ಖಂಡಿಸಿದ್ದಾರೆ. ನಳಿನ್ ಅವರು ಈ ಬಗ್ಗೆ ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರ ಜತೆ ಮಾತನಾಡಿ ಆರೋಪಿಗಳನ್ನು ತಕ್ಷಣ ಬಂಧಿಸುವಂತೆ ಆಗ್ರಹಿಸಿದ್ದಾರೆ. ಸುಳ್ಯ ವೃತ್ತ ನಿರೀಕ್ಷಕರ ಜತೆ ಮುರುಳ್ಯ ಅವರು ಮಾತನಾಡಿ ಸಮಾಜದಲ್ಲಿ ಶಾಂತಿ ಕದಡಲು ಯತ್ನಿಸುತ್ತಿರುವ ಶಕ್ತಿಗಳನ್ನು ನಿಗ್ರಹಿಸಿ ಆರೋಪಿಗಳನ್ನು ತಕ್ಷಣ ಪತ್ತೆ ಹಚ್ಚಿ ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ.