Advertisement
ಟಿಪ್ಪು ಸುಲ್ತಾನ್ ಭಾವಚಿತ್ರವನ್ನು ಹರಿದು ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿದ ಅವರು, ಪೊಲೀಸ್ ಅಧಿಕಾರಿಗಳು ಇದ್ದರೂ ಅದನ್ನು ಹರಿದಿದ್ದಾರೆ. ಈ ವಿಚಾರವಾಗಿ ಪೊಲೀಸ್ ಅಧಿಕಾರಿಗಳ ಜತೆ ಮಾತನಾಡಿದ್ದೇನೆ. ಅವರು ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ಈ ಕೃತ್ಯ ಯಾರು ಎಸಗಿದ್ದಾರೆ ಎನ್ನುವುದು ನಮಗೆ ಗೊತ್ತಿದೆ. ಕೂಡಲೇ ಕಾನೂನು ರೀತಿಯ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
Related Articles
Advertisement
ಈ ವಿಚಾರವಾಗಿ ದೂರು ದಾಖಲಿಸಿದ್ದೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಡಿಕೆಶಿ, ನಾವು ದೂರು ನೀಡುವ ಅಗತ್ಯವಿಲ್ಲ. ಪೊಲೀಸರು ಸ್ಥಳದಲ್ಲೇ ಇದ್ದರು. ಅವರು ಕ್ರಮ ಕೈಗೊಳ್ಳಬೇಕು ಎಂದರು.
ಆ.15 ರ ಮಧ್ಯಾಹ್ನ ನಡೆಯಲಿರುವ ಸ್ವಾತಂತ್ರ್ಯ ನಡಿಗೆ ಕಾರ್ಯಕ್ರಮಕ್ಕೆ ಮೆಟ್ರೋ ಸಂಸ್ಥೆ ಎಲ್ಲಾ ಸಹಕಾರ ನೀಡಿದೆ. ನಾವು ಪಕ್ಷದ ವತಿಯಿಂದ ಹಣ ಪಾವತಿಸಿ ಟಿಕೆಟ್ ಖರೀದಿ ಮಾಡಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸುವವರಿಗೆ ಉಚಿತವಾಗಿ ನೀಡುತ್ತಿದ್ದೇವೆ. ಬೆಂಗಳೂರಿಗೆ ವಿವಿಧ ಭಾಗಗಳಿಂದ ಬರುವವರು ಸಂಗೊಳ್ಳಿ ರಾಯಣ್ಣ ವೃತ್ತಕ್ಕೆ ಆಗಮಿಸಲು ಹಾಗೂ ರಾತ್ರಿ ಸಾಂಸ್ಕೃತಿಕ ಕಾರ್ಯಕ್ರಮ ಮುಕ್ತಾಯದ ನಂತರ ಹಿಂದಿರುಗಲು ಮೆಟ್ರೋ ಟಿಕೆಟ್ ವ್ಯವಸ್ಥೆ ಮಾಡಲಾಗಿದೆ. ಇದನ್ನು ಎಲ್ಲಾ ಸಾರ್ವಜನಿಕರು ಬಳಸಿಕೊಳ್ಳಬೇಕು ಎಂದು ಡಿಕೆ ಶಿವಕುಮಾರ್ ಮನವಿ ಮಾಡಿದರು.