ಹುಳಿಯಾರು: ಕಾಮಗಾರಿ ನಡೆಯುವ ಸಂದರ್ಭದಲ್ಲೇ ಸಾರ್ವಜನಿಕರು ಕಳಪೆ ಕಾಮಗಾರಿ ನಡೆಯುತ್ತಿದೆ ಎಂದು ಎಚ್ಚರಿಸಿದರೂ ಅಧಿಕಾರಿಗಳು ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯಿಸಿದ್ದ ಪರಿಣಾಮ ಕಾಮಗಾರಿ ಮುಗಿದ ಕೇವಲ ನಾಲ್ಕೇ ತಿಂಗಳಲ್ಲಿ ರಸ್ತೆ ಹದಗೆಟ್ಟಿದೆ.
19 ಕೋಟಿ ರೂ. ವೆಚ್ಚದಲ್ಲಿ ಹುಳಿಯಾರು ಅಣೇಕಟ್ಟೆ ರಸ್ತೆ ಕಾಮಗಾರಿಯು ಇತ್ತೀಚೆಗೆ ನಡೆದಿತು. ಕಾಮಗಾರಿ ನಡೆಯುತ್ತಿದ್ದ ಸಂದರ್ಭದಲ್ಲೇ ಸ್ಥಳೀಯರು ಕಾಮಗಾರಿ ತೀರ ಕಳಪೆಯಿಂದ ಕೂಡಿದ್ದು ಅತ್ತ ಡಾಂಬರ್ ಹಾಕಿಕೊಂಡು ಹೋಗುತ್ತಿದ್ದರೆ ಇತ್ತ ಕಿತ್ತೋಗುತ್ತಿದೆ ಎಂದು ಆರೋಪಿಸಿ ಗುತ್ತಿಗೆದಾರನಿಗೆ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡು ಎರಡ್ಮೂರು ತಿಂಗಳು ಗಳ ಹಿಂದೆ ಕಾಮಗಾರಿ ಸ್ಥಗಿತಗೊಳಿಸಿ ಪ್ರತಿಭಟನೆ ಮಾಡಿದ್ದರು.
ಈ ರಸ್ತೆಯ ಡಾಂಬರೀಕರಣಕ್ಕೆ 19 ಕೋಟಿ ರೂ. ಬಿಡುಗಡೆಯಾಗಿದ್ದರೂ ಸಹ ಹಳೆಯ ಡಾಂಬರ್ ಕೀಳದೆ ಅದರ ಮೇಲೆಯೇ ಹೊಸ ಡಾಂಬರ್ ಹಾಕಲಾಗುತ್ತಿದೆ. ಪರಿಣಾಮ ಡಾಂ ಬರ್ ಹಾಕಿದ ಮರುಕ್ಷಣವೇ ಜಲ್ಲಿ ಕಲ್ಲುಗಳುಮೇಲೇ ಳುತ್ತಿದೆಯಲ್ಲದೆ ರಸ್ತೆಯ ಅಂಚಿನಲ್ಲಿ ಕಿತ್ತೋ ಗುತ್ತಿದೆ ಎಂಬುದು ಸಾರ್ವಜನಿಕರ ಆರೋಪವಾಗಿತ್ತು. ಅಲ್ಲದೆ ಸ್ಥಳಕ್ಕೆ ಆಗಮಿಸಿದ್ದ ಪಿಡಬ್ಲೂಡಿಎಂಜಿನಿಯರ್ ಸೋಮಶೇಖರ್ ಹಾಗೂಚಂದ್ರಶೇಖರ್ ಅವರಿಗೆ ಕೆರೆದು ಕಾಮಗಾರಿಯಗುಣಮಟ್ಟದ ಅನಾವರಣ ಮಾಡಿಸಿದ್ದರು.
ಇದಕ್ಕೆ ಎಂಜಿನಿಯರ್ ಸೋಮಶೇಖರ್ ಅವರು ಈ ಕಾಮಗಾರಿಯು ಹಳೆಯ ರಸ್ತೆಯ ಮೇಲೆಯೇ ಹೊಸ ಡಾಂಬರ್ ಹಾಕುವುದಾಗಿದೆ. ಅಲ್ಲದೆ ರಸ್ತೆಯ ಡಾಂಬರ್ ಪರ್ಸೆಂಟೇಜ್‌ಪರಿಶೀಲಿಸಿದರೆ ಎಸ್ಟಿಮೆಂಟ್ ಪ್ರಕಾರನೇ ಇದೆ. ಅಲ್ಲದೆ ಡಾಂಬರ್ ಸೆಟ್ ಆಗುವ ಮೊದಲೇ ವಾಹನಗಳು ಓಡಾಡಿದ ಪರಿಣಾಮ ಕಿತ್ತೋಗಿದೆ.ಅಷ್ಟೇ ಹಾಕಿರುವ ಡಾಂಬರ್ ಸೆಟ್ ಆಗಲು ಬಿಡಿ ಎಂದು ಗುತ್ತಿಗೆದಾರರ ಪರ ಮಾತನಾಡಿದರು. ಅಲ್ಲದೆ ಕಿತ್ತೋಗಿದೆಯ ಹೋಗಲಿ ಬಿಡುಅದಕ್ಯಾಕೆ ತಲೆ ಕೆಡಿಸಿಕೊಳ್ತಿರಿ ಮತ್ತೆ ಮಾಡಿಕೊಡಿ ಎಂದಿದ್ದರು.
ಎಂಜಿನಿಯರ್ ಅವರ ಬೇಜವಾಬ್ದಾರಿ ಮತ್ತು ನಿರ್ಲಕ್ಷ್ಯ ತನದಿಂದ ಕಾಮಗಾರಿ ಮುಗಿದು ನಾಲ್ಕು ತಿಂಗಳುಗಳಲ್ಲಾಗಲೇ ರಸ್ತೆಯ ಡಾಂಬರ್‌ಕಿತ್ತೋಗಿ ಜಲ್ಲಿಕಲ್ಲುಗಳು ಮೇಲೇಳುತ್ತಿದೆ. ಪರಿಣಾಮ ವಾಹನಗಳು ಸುಗಮ ಸಂಚಾರಕ್ಕೆ ತೊಡಕಾಗಿದೆ. ಮಳೆ ಹಾಗೂ ಕಿತ್ತೋಗಿರುವ ರಸ್ತೆಯ ಮೇಲೆ ವಾಹನಗಳು ಓಡಾಡಿ ಇಡೀ ರಸ್ತೆ ಕಿತ್ತು ಹಾಳಾಗುವ ಮೊದಲು ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಎಚ್ಚೆತ್ತುಕೊಳ್ಳಬೇಕಿದೆ. ತಕ್ಷಣ ಕಿತ್ತೋಗಿರುವ ಕಡೆಯಲ್ಲಾದರೂ ಮರು ಡಾಂಬರೀ ಕರಣ ಮಾಡಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ವಾಹನ ಸಾವರರು ಆಗ್ರಹಿಸಿದ್ದಾರೆ