Advertisement

Dandeli; ವಾಕಿಂಗ್ ಮಾಡುತ್ತಿದ್ದ ಮಹಿಳೆಯ ಮೇಲೆ ಹಲ್ಲೆ, ಜೀವ ಬೆದರಿಕೆ : ಪ್ರಕರಣ ದಾಖಲು

10:53 AM Jul 05, 2023 | Team Udayavani |

ದಾಂಡೇಲಿ : ವಾಕಿಂಗ್ ಮಾಡುತ್ತಿದ್ದ ಮಹಿಳೆಯೋರ್ವರನ್ನು ಅಡ್ಡಗಟ್ಟಿ, ತಡೆದು ನಿಲ್ಲಿಸಿ, ಅವಾಚ್ಯ ಶಬ್ದಗಳಿಂದ ಬೈಯ್ದು, ಹಲ್ಲೆ ಮಾಡಿ, ಜೀವ ಬೆದರಿಕೆಯೊಡ್ಡಿದ ಘಟನೆ ದಾಂಡೇಲಿ ನಗರದ ಹಳೆ ಟಿ.ಆರ್.ಟಿ ಪ್ರದೇಶ ವ್ಯಾಪ್ತಿಯಲ್ಲಿ ನಡೆದಿರುವುದರ ಬಗ್ಗೆ ದಾಂಡೇಲಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

ಈ ಘಟನೆಗೆ ಸಂಬಂಧಿಸಿದಂತೆ ಹಳೆ ಟಿ.ಆರ್.ಟಿಯ ನಿವಾಸಿ ಸರಸ್ವತಿ ಚೌವ್ಹಾಣ್ ಅವರು ತನಗೆ ಅವಾಚ್ಯ ಶಬ್ದಗಳಿಂದ ಬೈಯ್ದು, ಹಲ್ಲೆ ಮಾಡಿ ಜೀವ ಬೆದರಿಕೆಯೊಡ್ಡಿದ್ದಾನೆಂದು ತಾನಾಜಿ ಕಾಂಬಳೆಯ ವಿರುದ್ಧ ದಾಂಡೇಲಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ದೂರಿನಲ್ಲಿ ತನ್ನ ಹೆಸರನ್ನು ಹಾಳು ಮಾಡುತ್ತಿದ್ದಿ ಎಂದು ನನ್ನ ಮೇಲೆ ಆರೋಪವನ್ನು ಹೊರಿಸಿ, ನನ್ನ ಮೇಲೆ ಹಲ್ಲೆ ಮಾಡುತ್ತಿರುವಾಗ ಜೋರಾಗಿ ಕೂಗಿದಾಗ ಅಲ್ಲಿಯೇ ಹತ್ತಿರದಲ್ಲಿದ್ದ ಪತಿ ಮತ್ತು ಅಕ್ಕಪಕ್ಕದವರು ಬಂದರೂ ತಾನಾಜಿ ಕಾಂಬಳೆ ಗಂಡ ಸತೀಶ್ ಚೌವ್ಹಾಣ್ ಅವರ ಮೇಲೆಯೂ ಹಲ್ಲೆ ನಡೆಸಿ, ಜೀವ ಬೆದರಿಕೆಯನ್ನು ಒಡ್ಡಿದ್ದಾನೆಂದು ಸರಸ್ವತಿ ಚೌವ್ಹಾಣ್ ಅವರು ನೀಡಿದ ದೂರಿನಲ್ಲಿ ವಿವರಿಸಿದ್ದಾರೆ. ಇನ್ನೂ ಈ ಘಟನೆಗೆ ಸಂಬಂಧಪಟ್ಟಂತೆ ಸರಸ್ವತಿ ಚೌವ್ಹಾಣ್ ಅವರು ಮಾಧ್ಯಮಕ್ಕೆ ವಿವರಣೆಯನ್ನು ನೀಡಿದ್ದಾರೆ.

ದಾಂಡೇಲಿ ನಗರ ಪೊಲೀಸ್ ಠಾಣೆಯಲ್ಲಿ ಕಲಂ 323, 324, 341, 354(ಬಿ), 504, 506 ಐಪಿಸಿಯಡಿ ಪ್ರಕರಣ ದಾಖಲಿಸಿಕೊಂಡು ನಗರ ಪೊಲೀಸರು ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next