ದಾಂಡೇಲಿ: ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆಗೆ ಶರಣಾದ ಘಟನೆ ಆ.4ರ ಶುಕ್ರವಾರ ನಡೆದಿದೆ.
ನಗರದ ಮಾರುತಿ ನಗರದ ಸ್ಯಾಮುವೆಲ್ ಡೊಕ್ಕ ಎಂಬವರ ಪುತ್ರಿ, ಜನತಾ ವಿದ್ಯಾಲಯ ಪ್ರೌಢಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿನಿ ಅನ್ನಮ್ಮ (15) ಸ್ಯಾಮುವೆಲ್ ಡೊಕ್ಕ ಆತ್ಮಹತ್ಯೆಗೆ ಶರಣಾದ ಬಾಲಕಿ.
ಬಾಲಕಿ ಅನ್ನಮ್ಮ ಮಾರುತಿನಗರದಲ್ಲಿರುವ ತನ್ನ ನಿವಾಸದಲ್ಲಿ ನೇಣಿಗೆ ಶರಣಾಗಿದ್ದಾಳೆ. ಆತ್ಮಹತ್ಯೆಗೆ ಕಾರಣ ಏನೆಂದು ಇನ್ನೂ ತಿಳಿದು ಬಂದಿಲ್ಲ.
ಘಟನಾ ಸ್ಥಳಕ್ಕೆ ದಾಂಡೇಲಿ ನಗರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದೀಗ ಮೃತದೇಹವನ್ನು ನಗರದ ಸಾರ್ವಜನಿಕ ಆಸ್ಪತ್ರೆಗೆ ಕರೆ ತರಲಾಗಿದ್ದು, ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಶವಗಾರದಲ್ಲಿ ಇರಿಸಲಾಗಿದೆ.
ನಗರದ ಜನತಾ ವಿದ್ಯಾಲಯ ಪ್ರೌಢಶಾಲೆಯ ಕನ್ನಡ ಮಾಧ್ಯಮದ 10ನೇ ತರಗತಿ ಓದುತ್ತಿದ್ದ ಅನ್ನಮ್ಮ ಸ್ಯಾಮುವೆಲ್ ಡೊಕ್ಕ ಪ್ರತಿಭಾವಂತ ವಿದ್ಯಾರ್ಥಿನಿಯಾಗಿದ್ದು, ಅತ್ಯುತ್ತಮ ಕ್ರೀಡಾಪಟುವಾಗಿ, ಕರಾಟೆ ಪಟುವಾಗಿ ಗಮನ ಸೆಳೆದಿದ್ದಳು.
ಕಲಿಕೆಯಲ್ಲಿಯೂ ಮುಂದಿದ್ದ ಈಕೆ ಸದಾ ಕ್ರೀಯಾಶೀಲ ವಿದ್ಯಾರ್ಥಿನಿಯಾಗಿದ್ದಳು. ಈ ಘಟನೆಗೆ ಸಂಬಂಧಿಸಿದಂತೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.