Advertisement

Dandeli: ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ… ರಸ್ತೆ ಮಧ್ಯೆಯೇ ಸುಟ್ಟು ಕರಕಲು

03:06 PM Apr 08, 2024 | Team Udayavani |

ದಾಂಡೇಲಿ : ಬೆಳಗಾವಿಯಿಂದ ದಾಂಡೇಲಿಗೆ ಬರುತ್ತಿದ್ದ ಬೆಳಗಾವಿ ಮೂಲದ ಮೂವರು ಪ್ರಯಾಣಿಕರನ್ನೊಳಗೊಂಡ ಕಾರೊಂದು ತಾಲೂಕಿನ ನಾನಾಕೇಸರೋಡ ಎಂಬಲ್ಲಿ ಆಕಸ್ಮಿಕ ಅಗ್ನಿ ಅವಘಡಕ್ಕೊಳಗಾಗಿ ಸುಟ್ಟುಹೋದ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ.

Advertisement

ಕಾರಿನಲ್ಲಿದ್ದ ಪ್ರಯಾಣಿಕರು ಕೂಡಲೇ ಕಾರಿನಿಂದ ಹೊರ ಬಂದಿದ್ದರಿಂದ ಹೆಚ್ಚಿನ ಅವಘಡ ತಪ್ಪಿದೆ.

ಬೆಳಗಾವಿಯಿಂದ ಬರುತ್ತಿದ್ದ ಕಾರು ನಾನಾಕೇಸರೋಡ‌ದ ಹತ್ತಿರ ಬರುತ್ತಿದ್ದಂತೆಯೇ ಕಾರಿನಲ್ಲಿ ಅಗ್ನಿ ಕಾಣಿಸಿಕೊಂಡಿದೆ. ಕಾರಿನಲ್ಲಿದ್ದವರು ಹೊರಗೆ ಬಂದ ಕೆಲವೇ ಕ್ಷಣದೊಳಗೆ ಕಾರು ಸಂಪೂರ್ಣ ಸುಟ್ಟು ಹೋಗಿದೆ. ಈ ಬಗ್ಗೆ ದಾಂಡೇಲಿ ಗ್ರಾಮೀಣ ಪೊಲೀಸ್ ಠಾಣೆಗೆ ಮಾಹಿತಿಯನ್ನು ನೀಡಲಾಗಿದೆ.

ಇದನ್ನೂ ಓದಿ: ಪರಸ್ಪರ ಒಪ್ಪಿಗೆಯ ಮೇರೆಗೆ ವಿಚ್ಚೇದನಕ್ಕೆ ಅರ್ಜಿ ಸಲ್ಲಿಸಿದ ನಟ ಧನುಷ್‌ – ಐಶ್ವರ್ಯಾ

Advertisement

Udayavani is now on Telegram. Click here to join our channel and stay updated with the latest news.

Next