ದಾಂಡೇಲಿ : ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಕುಳಗಿ ಗ್ರಾಮದಲ್ಲಿ ವರದಿಯಾಗಿದೆ.
ಕುಳಗಿ ಗ್ರಾಮದ ನಿವಾಸಿ 46 ವರ್ಷ ವಯಸ್ಸಿನ ಮೌಲಾಸಾಬ್ ಪಕ್ರುಸಾಬ್ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.
ಈತ ಮನೆಯಲ್ಲಿ ಏಕಾಂಗಿಯಾಗಿ ವಾಸಿಸುತ್ತಿದ್ದ ಎನ್ನಲಾಗಿದ್ದು, ಯಾವುದೋ ವಿಷಯವನ್ನು ಮನಸ್ಸಿಗೆ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಅಂದಾಜಿಸಲಾಗಿದೆ.
ಈತ ಮನೆಯಲ್ಲಿ ನೇಣಿಗೆ ಶರಣಾಗಿ ಮೂರ್ನಾಲ್ಕು ದಿನಗಳು ಆಗಿರುವ ಸಾಧ್ಯತೆಯಿದ್ದು, ಮೃತದೇಹ ಕೊಳೆತು ವಾಸನೆ ಬರತೊಡಗಿದ್ದ ಹಿನ್ನಲೆಯಲ್ಲಿ ಸ್ಥಳೀಯರು ಅಂಬಿಕಾನಗರ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ.
ತಕ್ಷಣ ಅಂಬಿಕಾನಗರ ಪಿಎಸೈ ಮಂಜುನಾಥ್ ನೇತೃತ್ವದ ಪೊಲೀಸರ ತಂಡ ಕುಳಗಿಗೆ ಭೇಟಿ ನೀಡಿ ಮನೆಬಾಗಿಲು ಒಡೆದು ಮನೆಯೊಳಗೆ ಪರಿಶೀಲನೆ ನಡೆಸಿದ್ದು, ಕೊಳೆತು ನಾರುತ್ತಿದ್ದ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ದಾಂಡೇಲಿಯ ಸಾರ್ವಜನಿಕ ಆಸ್ಪತ್ರೆಗೆ ತರಲಾಗಿದೆ. ಬಗ್ಗೆ ಅಂಬಿಕಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.