Advertisement

Dandeli: ಅಪರಿಚಿತ ವಾಹನ ಅಪಘಾತಕ್ಕೊಳಗಾಗಿ ಗಂಭೀರ ಗಾಯಗೊಂಡ ನರಿ

02:33 PM Nov 16, 2023 | Team Udayavani |

ದಾಂಡೇಲಿ: ಅಪರಿಚಿತ ವಾಹನವೊಂದು ಡಿಕ್ಕಿಯಾಗಿ ನರಿಯೊಂದು ಗಂಭೀರ ಗಾಯಗೊಂಡ ಘಟನೆ ನಗರದ ಸಮೀಪದಲ್ಲಿರುವ ಕುಳಗಿ ರಸ್ತೆಯಲ್ಲಿ ಬುಧವಾರ ನಡೆದಿದೆ.

Advertisement

ಕುಳಗಿ ರಸ್ತೆಯಲ್ಲಿರುವ ಹಿಂದೂ ರುದ್ರ ಭೂಮಿಯ ಹತ್ತಿರ ನರಿಯೊಂದು ರಸ್ತೆ ದಾಟುತ್ತಿರುವ ಸಂದರ್ಭದಲ್ಲಿ ಅಪರಿಚಿತ ವಾಹನವೊಂದು ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ನರಿಗೆ ಗಂಭೀರ ಗಾಯವಾಗಿದೆ.

ತಕ್ಷಣವೇ ಅರಣ್ಯ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳ ತಂಡ ಸ್ಥಳಕ್ಕೆ ದೌಡಾಯಿಸಿ, ಮುಂದಿನ ಕ್ರಮವನ್ನು ಕೈಗೊಂಡಿದೆ. ಅರಣ್ಯ ಇಲಾಖೆಯ ಉಪ ವಲಯಾರಣ್ಯಾಧಿಕಾರಿಗಳಾದ ರಾಮು ಗೌಡ, ಸಿ.ಆರ್.ನಾಯ್ಕ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿಗಳಾದ ಸಲೀಂ ರೋಣದ್, ನರೇಂದ್ರನಾಥ್ ಕದಂ, ಈರಣ್ಣ, ಸಾಗರ್ ಮೊದಲಾದವರ ತಂಡ ಸ್ಥಳಕ್ಕೆ ಆಗಮಿಸಿ ಗಂಭೀರ ಗಾಯಗೊಂಡಿದ್ದ ನರಿಯನ್ನು ಸುರಕ್ಷಿತವಾಗಿ ಹಿಡಿದು, ವನ್ಯಜೀವಿ ಇಲಾಖೆಯ ಪಶುವೈದ್ಯ ಡಾ.ಪ್ರದೀಪ್ ಅವರನ್ನು ಸ್ಥಳಕ್ಕೆ ಕರೆಸಿ, ಚಿಕಿತ್ಸೆ ನೀಡುತ್ತಿದ್ದಾರೆ. ತೀವ್ರ ಸ್ವರೂಪದ ಗಾಯವಾಗಿರುವುದರಿಂದ ಚಿಕಿತ್ಸೆ ಮುಂದುವರೆದಿದೆ.

Advertisement

Udayavani is now on Telegram. Click here to join our channel and stay updated with the latest news.

Next