ದಾಂಡೇಲಿ: ವಾಹನಗಳಿಗೆ ಬೇಕಾಬಿಟ್ಟಿ ಎಕ್ಸ್ಟ್ರಾ ಲೈಟ್ ಅಳವಡಿಸಿಕೊಂಡು ಚಲಾಯಿಸುವ ಚಾಲಕರು ಇನ್ನು ಮುಂದೆ ಎಚ್ಚರವನ್ನು ವಹಿಸಬೇಕಾಗಿದೆ. ವಾಹನ ಸವಾರರ ವಿರುದ್ಧ ದಾಂಡೇಲಿ ನಗರ ಠಾಣೆಯ ಪಿಎಸ್ಐ ಐ.ಆರ್.ಗಡ್ಡೇಕರ್ ಅವರ ನೇತೃತ್ವದಲ್ಲಿ ನಗರ ಠಾಣೆಯ ಪೊಲೀಸರು ಕಾರ್ಯಾಚರಣೆಗೆ ಚಾಲನೆಯನ್ನು ನೀಡಿ, ಎಚ್ಚರಿಕೆಯ ಸಂದೇಶವನ್ನು ರವಾನಿಸಿದ್ದಾರೆ.
ವಾಹನಗಳಿಗೆ ಬೇಕಾಬಿಟ್ಟಿ ಎಕ್ಸ್ಟ್ರಾ ಲೈಟ್ ಅಳವಡಿಸಿಕೊಂಡು ಚಲಾಯಿಸುವ ಚಾಲಕರು ಇನ್ನು ಮುಂದೆ ಎಚ್ಚರ ವಹಿಸಬೇಕಾಗಿದೆ. ಹೈ ಬೀಮ್ ಲೈಟ್ ಉಪಯೋಗಿಸುತ್ತಿರುವ ವಾಹನ ಸವಾರರ ವಿರುದ್ಧ ಕ್ರಮಕ್ಕೆ ದಾಂಡೇಲಿಯ ಪೊಲೀಸರು ಶುರುಹಚ್ಚಿಕೊಂಡಿದ್ದಾರೆ.
ರಾತ್ರಿ ವೇಳೆ ಹೈ ಬೀಮ್ ಲೈಟ್ ಉಪಯೋಗದಿಂದ ಅಪಘಾತ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ನಿಯಮ ಬಾಹಿರವಾಗಿ ವಾಹನಗಳಿಗೆ ಎಲ್ಇಡಿ ದೀಪಗಳನ್ನು ಅಳವಡಿಸಿರುವವರ ವಿರುದ್ಧ ಕ್ರಮ ಜರುಗಿಸಲಾಗುತ್ತದೆ ಎಂದು ಪಿಎಸ್ಐ ಐ.ಆರ್.ಗಡ್ಡೇಕರ್ ಅವರು ಎಚ್ಚರಿಕೆಯನ್ನು ನೀಡಿದ್ದಾರೆ.
ಎಲ್ಇಇಡಿ ಲೈಟ್ ಗಳು ವಿಪರೀತ ಪ್ರಕಾಶಮಾನವಾಗಿರುವುದರಿಂದ ಎದುರಿನಿಂದ ಬರುವ ವಾಹನ ಸವಾರರಿಗೆ ಸಮಸ್ಯೆಯಾಗಿ ರಸ್ತೆ ಅಪಘಾತಕ್ಕೆ ಕಾರಣವಾಗುತ್ತಿದೆ. ಈ ಹಿನ್ನಲೆಯಲ್ಲಿ ಈ ಕಾರ್ಯಾಚರಣೆ ಆರಂಭವಾಗಿದೆ. ತಪಾಸಣೆಯ ಸಂದರ್ಭದಲ್ಲಿ ಎರಡು ವಾಹನಗಳು ಎಲ್ಇಡಿ ಲೈಟ್ ಗಳನ್ನು ಅಳವಡಿಸಿರುವುದು ಪತ್ತೆಯಾಗಿದೆ. ಈ ಬಗ್ಗೆ ಅಗತ್ಯ ಕ್ರಮವನ್ನು ಕೈಗೊಂಡು ಮುನ್ನೆಚ್ಚರಿಕೆಯನ್ನು ನೀಡಲಾಗಿದೆ.