ದಾಂಡೇಲಿ: ಅಂಬಿಕಾ ನಗರ ರಸ್ತೆಯಲ್ಲಿ ಬರುವ ಬಡಕಾನಶಿರಡಾದಲ್ಲಿ ದ್ವಿಚಕ್ರ ವಾಹನವೊಂದು ಸ್ಕಿಡ್ ಆಗಿ ಬಿದ್ದು, ಸವಾರರೋರ್ವರು ಗಾಯಗೊಂಡ ಘಟನೆ ಸೋಮವಾರ ನಡೆದಿದೆ.
ಗಾಯಗೊಂಡ ವ್ಯಕ್ತಿ ಹಾರ್ನೋಡಾ ಗ್ರಾಮದ ನಿವಾಸಿ ರಾಮಚಂದ್ರ ಎಂಬವರಾಗಿದ್ದಾರೆ.
ಇವರು ದಾಂಡೇಲಿ ನಗರದಿಂದ ಬಡಕಾನಶಿರಡಾಕ್ಕೆ ಹೋಗುತ್ತಿರುವಾಗ ದ್ವಿಚಕ್ರ ವಾಹನ ಸ್ಕಿಡ್ ಆಗಿ ಬಿದ್ದಿದೆ. ಈ ಸಂದರ್ಭದಲ್ಲಿ ಕೆಳಗೆ ಬಿದ್ದ ರಾಮಚಂದ್ರ ಅವರಿಗೆ ಗಂಭೀರ ಗಾಯವಾಗಿದೆ. ಗಾಯಗೊಂಡ ರಾಮಚಂದ್ರ ಅವರನ್ನು ತಕ್ಷಣವೇ ಸ್ಥಳೀಯರು 108 ಆಂಬುಲೆನ್ಸ್ ಮೂಲಕ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದ್ದಾರೆ.
ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆಯನ್ನು ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಧಾರವಾಡಕ್ಕೆ ಕಳುಹಿಸಿಕೊಡಲಾಗಿದೆ.
ಘಟನಾ ಸ್ಥಳಕ್ಕೆ ದಾಂಡೇಲಿ ಗ್ರಾಮೀಣ ಪೊಲೀಸರು ಭೇಟಿ ನೀಡಿ, ಪರಿಶೀಲನೆಯನ್ನು ನಡೆಸಿ ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.