Advertisement

Belagavi: ದಂಡು ಮಂಡಳಿಯ ಸಿ.ಇ.ಓ. ಕೆ. ಆನಂದ ನಿಗೂಢ ಆತ್ಮಹತ್ಯೆ

12:44 PM Nov 25, 2023 | Team Udayavani |

ಬೆಳಗಾವಿ: ಇಲ್ಲಿಯ ದಂಡು ಮಂಡಳಿಯ ಸಿ.ಇ.ಓ. ಕೆ. ಆನಂದ ಅವರು ನಿಗೂಢ ರೀತಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಅವರ ಸಾವು ಹಲವಾರು ಅನುಮಾನಗಳನ್ನು ಹುಟ್ಟುಹಾಕಿದೆ.

Advertisement

ಕ್ಯಾಂಪ್ ಪ್ರದೇಶದಲ್ಲಿರುವ ತಮ್ಮ ನಿವಾಸದಲ್ಲಿ ಅವರು ಆತ್ಮಹತ್ಯೆ ಮಾಡಿಕೊಂಡ ಘಟನೆ ನ.25ರ ಶನಿವಾರ ಬೆಳಗ್ಗೆ ಬೆಳಕಿಗೆ ಬಂದಿದೆ.

ಬೆಳಗಾವಿ ದಂಡು ಮಂಡಳಿಯಲ್ಲಿ ಕಳೆದ ಒಂದುವರೆ ವರ್ಷಗಳಿಂದ ಸಿಇಒ ಆಗಿ ಸೇವೆ ಸಲ್ಲಿಸುತ್ತಿದ್ದ ಕೆ.ಆನಂದ್ ಮೂಲತಃ ತಮಿಳುನಾಡಿನವರು. ಶನಿವಾರ ಬೆಳಿಗ್ಗೆ ಅವರ ಮನೆ ಬಾಗಿಲು ತೆಗೆಯದೇ ಇದ್ದಾಗ ಅನುಮಾನಗೊಂಡ ಅಲ್ಲಿನ  ಸಿಬ್ಬಂದಿಗಳು ಕ್ಯಾಂಪ್ ಪೊಲೀಸರಿಗೆ ಮಾಹಿತಿ ನೀಡಿದರು. ತಕ್ಷಣ ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಶೀಲನೆ ನಡೆಸಿದಾಗ ಆನಂದ್ ಶವವಾಗಿ ಪತ್ತೆಯಾಗಿದ್ದಾರೆ.

ದಂಡು ಮಂಡಳಿಯ ನೇಮಕಾತಿಯಲ್ಲಿ ಸಾಕಷ್ಟು ಅಕ್ರಮ ನಡೆದಿದೆ ಎಂಬ ಆರೋಪ ಹಾಗೂ ದೂರುಗಳ ಹಿನ್ನೆಲೆಯಲ್ಲಿ ಕೆಲ ದಿನಗಳ ಹಿಂದೆ  ಸಿಬಿಐ ಅಧಿಕಾರಿಗಳು ದಂಡು ಮಂಡಳಿ ಕಚೇರಿ ಮೇಲೆ ದಾಳಿ ನಡೆಸಿದ್ದರು. ಈ ದಾಳಿಯ ಬೆನ್ನಲ್ಲೇ ಈಗ ಸಿಇಒ ಆನಂದ್ ಆತ್ಮಹತ್ಯೆ  ಮಾಡಿಕೊಂಡಿರುವುದು ಚರ್ಚೆಗೆ ಗ್ರಾಸವಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next