Advertisement
ಈ ಬಗ್ಗೆ ಸಾಂಕ್ರಾಮಿಕ ರೋಗ ನಿಯಂತ್ರಣ ಕಾಯ್ದೆ 2020ಕ್ಕೆ ತಿದ್ದುಪಡಿ ಮಾಡಿ ಆ. 31ರ ಕರ್ನಾಟಕ ಗೆಜೆಟ್ನಲ್ಲಿ ಅಧಿಸೂಚನೆ ಹೊರಡಿಸಿದ್ದು, ಇನ್ನು ಮುಂದೆ ನೈರ್ಮಲ್ಯ (ಸ್ವಚ್ಛತೆ) ಕಾಪಾಡದವರಿಗೆ ದಂಡ ಬೀಳಲಿದೆ ಎಂದು ತಿಳಿಸಿದೆ. ಮನೆ, ಖಾಲಿ ಜಾಗ, ಕಟ್ಟಡದ ಬಳಿ ಸ್ವಚ್ಛತೆ ಕಾಪಾಡಬೇಕು. ಸೊಳ್ಳೆ ಸಂತಾನೋತ್ಪತ್ತಿ ಹರಡಲು ಅವಕಾಶ ನೀಡದಂತೆ ಕ್ರಮ ವಹಿಸಬೇಕು. ಒಂದು ವೇಳೆ ನಿಯಮ ಉಲ್ಲಂಘಿಸಿದರೆ ಮಾಲೀಕರಿಗೆ ದಂಡ ವಿಧಿಸಬಹುದಾಗಿದೆ.
* ಸೊಳ್ಳೆಗಳ ಸಂತಾನೋತ್ಪತ್ತಿ ಹರಡಲು ಅವಕಾಶ ನೀಡದಂತೆ ಕ್ರಮ ಕೈಗೊಳ್ಳಬೇಕು.
* ಆಯಾ ಜಾಗದ ಮಾಲೀಕರು ಸೊಳ್ಳೆ ಬಾರದಂತೆ ಕ್ರಮ ವಹಿಸಬೇಕು, ನಿಯಮ ಉಲ್ಲಂಘಿಸಿದವರಿಗೆ ದಂಡ ವಿಧಿಸಲಾಗುವುದು.
* ನಿವೇಶನ ಅಥವಾ ಖಾಲಿ ಜಾಗದಲ್ಲಿ ನೀರು ನಿಲ್ಲದಂತೆ ಕ್ರಮ ವಹಿಸಬೇಕು. ಆ ರೀತಿ ಕಂಡು ಬಂದರೆ ನೋಟಿಸ್ ನೀಡಬೇಕು.
24 ಗಂಟೆಯಲ್ಲಿ ಕ್ರಮ ಕೈಗೊಳ್ಳುವಂತೆ ಸೂಚನೆ.
* ಸ್ವತ್ತಿನ ಮಾಲೀಕರು ನಿಗಾ ವಹಿಸಿದಿದ್ದರೆ, ಸಂಬಂಧ ಪಟ್ಟ ಅಧಿಕಾರಿ ಸೊಳ್ಳೆ ಉತ್ಪತ್ತಿಯಾಗದಂತೆ ಕ್ರಮ ವಹಿಸಬೇಕು.
ರಾಸಾಯನಿಕ ಸಿಂಪಡಿಸಬೇಕು. ಇದಕ್ಕೆ ಖರ್ಚಾದ ವೆಚ್ಚವನ್ನು ಸಂಬಂಧ ಪಟ್ಟವರು ನೀಡುವಂತೆ ಕ್ರಮ ವಹಿಸಬೇಕು.
* ಬಿಬಿಎಂಪಿ ಹಾಗೂ ಮಂಗಳೂರಿನಲ್ಲಿ ತೆರೆದ ಸ್ಥಳದಲ್ಲಿ ನಿಂತ ನೀರು ತೆರವುಗೊಳಿಸಲು ಆಯಾ ಮಾಲೀಕರೇ ಹೊಣೆ.
ಸ್ವಚ್ಛತೆ ಕಾಪಾಡದವರಿಗೆ ದಂಡದ ಬರೆ:
ಮನೆಗಳಿಗೆ ಹೊರಾಂಗಣ ಹಾಗೂ ಒಳಾಂಗಣದಲ್ಲಿ ನಿಯಮ ಉಲ್ಲಂಘಿಸಿದರೆ – 400 ರೂ. ದಂಡ – ನಗರ ಪ್ರದೇಶ ಗ್ರಾಮಾಂತರದಲ್ಲಿ ಓಳಾಂಗಣ ಹಾಗೂ ಹೊರಾಂಗಣಕ್ಕೆ 200 ರೂಪಾಯಿ ದಂಡ.
Related Articles
Advertisement
ಗ್ರಾಮಾಂತರ ಭಾಗದಲ್ಲಿ 500 ರೂಪಾಯಿ ದಂಡ. ತೆರೆದ ಸ್ಥಳಗಳಲ್ಲಿ ನಿಯಮ ಉಲ್ಲಂಘಿಸಿದರೆ – ನಗರದ ಪ್ರದೇಶದಲ್ಲಿ 2 ಸಾವಿರ ರೂಪಾಯಿ ದಂಡ, ಗ್ರಾಮಾಂತರದಲ್ಲಿ 1 ಸಾವಿರ ರೂಪಾಯಿ ದಂಡ ವಿಧಿಸಲಾಗುತ್ತದೆ.
ಡೆಂಗ್ಯೂ ಹತೋಟಿಗೆ ತರಲು ಕಾನೂನು ಅಸ್ತ್ರ : ಸಚಿವ ದಿನೇಶ್ಡೆಂಗ್ಯೂ ಜ್ವರವನ್ನು ಸಾಂಕ್ರಾಮಿಕ ರೋಗ ಎಂದು ಘೋಷಿಸಿರುವ ವಿಚಾರವಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದು, ಡೆಂಗ್ಯೂ ಸಾಂಕ್ರಾ ಮಿಕ ರೋಗವನ್ನಾಗಿ ಘೋಷಿಸುವುದರ ಜತೆಗೆ ನಿಯಂತ್ರಣ ಮಾರ್ಗಸೂಚಿ ಪಾಲಿಸದವರಿಗೆ ದಂಡ ವಿಧಿಸಲಾಗುವುದು. ಇದರಿಂದ ಆರೋಗ್ಯ ಇಲಾಖೆಗೆ ಡೆಂಗ್ಯೂ ಸೊಳ್ಳೆ ಉತ್ಪತ್ತಿ ತಾಣಗಳನ್ನು ಹತೋಟಿಗೆ ತರುವ ನಿಟ್ಟಿನಲ್ಲಿ ಕಾನೂ ನಿನ ಅಸ್ತ್ರ ಬಳಸಬಹುದಾಗಿದೆ. ದಂಡ ವಿಧಿಸುವುದಕ್ಕಿಂತ ಜನರು ಡೆಂಗ್ಯೂ ವಿಚಾರದಲ್ಲಿ ಜವಾ ಬ್ದಾರಿಯುತವಾಗಿ ಮುನ್ನೆಚ್ಚರಿಕೆ ವಹಿ ಸಲಿ ಎಂಬ ಉದ್ದೇಶದಿಂದ ರಾಜ್ಯ ಸರಕಾರ ಈ ಗೆಜೆಟ್ ಅಧಿಸೂಚನೆ ಹೊರಡಿಸಿದೆ. ಜಿಲ್ಲಾಧಿಕಾರಿಗಳಿಗೆ ನಿಯಮ ಜಾರಿಗೊಳಿಸುವ ಅಧಿಕಾರ ನೀಡಲಾಗಿದೆ ಎಂದು ತಿಳಿಸಿದರು. “ಈ ಹಿಂದೆ ಬೆಂಗಳೂರು, ಮಂಗಳೂರು ಬಿಟ್ಟರೆ ರಾಜ್ಯದ ಬೇರೆ ಪ್ರದೇಶಗಳಲ್ಲಿ ಕಾನೂನು ಕ್ರಮ ಕೈಗೊಳ್ಳಲು ಅವಕಾಶ ಇರಲಿಲ್ಲ. ಆದ್ದರಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಜನರು ಡೆಂಗ್ಯೂ ವಿಚಾರದಲ್ಲಿ ಜವಾಬ್ದಾರಿಯುತವಾಗಿ ಮುನ್ನೆಚ್ಚರಿಕೆ ವಹಿಸಲಿ ಎಂಬ ಉದ್ದೇಶ ನಮ್ಮದು.” -ದಿನೇಶ್ ಗುಂಡೂರಾವ್, ಆರೋಗ್ಯ ಸಚಿವ