Advertisement
ಇಲ್ಲಿನ ಉಪವಿಭಾಗೀಯ ಆಸ್ಪತ್ರೆಗೆ ಸೋಮವಾರ ಭೇಟಿ ನೀಡಿ ರೋಗಿಗಳ ಆರೋಗ್ಯ ವಿಚಾರಿಸಿ, ಉಪವಿಭಾಗಾಧಿಕಾರಿಗಳ ಕಚೇರಿಯಲ್ಲಿ ಡೆಂಗ್ಯೂ ವಿರುದ್ಧ ಸಮರೋಪಾದಿಯ ಪರಿಹಾರ ಕ್ರಮ ಕೈಗೊಳ್ಳುವಂತೆ ಉಪವಿಭಾಗಾಧಿಕಾರಿಗೆ ಮನವಿ ಮಾಡಿ ಮಾತನಾಡಿ ರಾಜ್ಯದಲ್ಲಿ 12 ಸಾವಿರಕ್ಕೂ ಅಧಿಕ ಡೆಂಗ್ಯೂ ಪ್ರಕರಣ ದಾಖಲಾಗಿದ್ದು, ದಿನದಿಂದ ದಿನಕ್ಕೆ ಪ್ರಕರಣ ಹೆಚ್ಚುತ್ತಿದ್ದರೂ ಸರ್ಕಾರ ಡೆಂಗ್ಯೂ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸದಿರುವುದು ದುರದೃಷ್ಟಕರ. ವೈದ್ಯಕೀಯ ವ್ಯವಸ್ಥೆ ಜೊತೆಗೆ ಅಗತ್ಯವಾದ ಔಷಧಿ ಮಾತ್ರೆಗಳ ಸರ್ಕಾರ ಪೂರೈಸಬೇಕು. ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯ್ತಿಗಳಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ಕಾರ್ಯಕ್ರಮ ರೂಪಿಸಬೇಕು ಎಂದರು.
ಸಾಗರ ಉಪವಿಭಾಗೀಯ ಆಸ್ಪತ್ರೆಯಲ್ಲಿ ಡೆಂಗ್ಯೂ ಪೀಡಿತರು ಹೆಚ್ಚು ಬರುತ್ತಿದ್ದು ಅವರಿಗೆ ಸೂಕ್ತ ವೈದ್ಯಕೀಯ ಸೌಲಭ್ಯ ಸಿಗುತ್ತಿಲ್ಲ. ಮುಖ್ಯವಾಗಿ ಬೆಡ್ ವ್ಯವಸ್ಥೆ ಇಲ್ಲವಾಗಿದೆ. ಹಿಂದೆ ಕೊರೋನಾ ಸಂದರ್ಭದಲ್ಲಿ ಖಾಸಗಿ ನರ್ಸಿಂಗ್ ಹೋಂ, ಲಾಡ್ಜ್‌ಗಳ ವಶಕ್ಕೆ ಪಡೆದು ರೋಗಿಗಳಿಗೆ ತೊಂದರೆಯಾಗದಂತೆ ನೋಡಿಕೊಂಡಿದ್ದೆವು. ಡೆಂಗ್ಯೂ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ವ್ಯವಸ್ಥೆ ಮಾಡಬೇಕಿದೆ ಎಂದು ಉಪವಿಭಾಗಾಧಿಕಾರಿಗಳ ಭೇಟಿಯಾಗಿ ಮನವಿ ಮಾಡಲಾಗಿದೆ ಎಂದರು. ಸಾಗರ ನಗರ ವ್ಯಾಪ್ತಿಯಲ್ಲಿ ಡೆಂಘೀ ಸಂಬಂಧ ನಗರಸಭೆ ಪರಿಹಾರ ಕ್ರಮ ಕೈಗೊಳ್ಳುವಲ್ಲಿ ಹಿಂದೆ ಬಿದ್ದಿದೆ. ಲಾರ್ವಾ ಸರ್ವೇ ಮೂಲಕ ನಿಯಂತ್ರಣ ಮಾಡಲು ಔಷಧಿ ಸಿಂಪಡಣೆ ಹೆಚ್ಚಿಸಬೇಕು. ಡೆಂಗ್ಯೂ ಸೋಂಕು ಹೆಚ್ಚುತ್ತಿರುವ ಸಂದರ್ಭದಲ್ಲಿ ಸಾರ್ವಜನಿಕರು ನಗರಸಭೆ ಮತ್ತು ಆರೋಗ್ಯ ಇಲಾಖೆ ಸೂಚನೆಯ ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದರು.
Related Articles
Advertisement