Advertisement
ಚಿಲಿಂಬಿ ಕ್ರಾಸ್-ಬಾರಾಡಿ ಸಂಪರ್ಕ ರಸ್ತೆ ಅಭಿವೃದ್ಧಿ ಸಂದರ್ಭ ಗುತ್ತಿಗೆದಾರರು ಹಳೆ ವಿದ್ಯುತ್ ಕಂಬ ತೆರವುಗೊಳಿಸಿ ಹೊಸ ಕಂಬಗಳನ್ನು ಅಳವಡಿಸಿದ್ದರು. ಆದರೆ ಮಳೆಗಾಲ ಆರಂಭವಾಗುತ್ತಿದ್ದಂತೆ ಬಹುತೇಕ ವಿದ್ಯುತ್ ಕಂಬಗಳು ವಾಲಿಕೊಂಡಿವೆ. ಹಲವು ಬಾರಿ ಸ್ಥಳೀಯರು ಅಪಾಯಕಾರಿಯಾದ ವಿದ್ಯುತ್ ಕಂಬ ದುರಸ್ತಿಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಈ ರಸ್ತೆ ಮೂಲಕ ಶಾಲಾ ವಿದ್ಯಾರ್ಥಿಗಳು ಸಂಚರಿಸುತ್ತಿದ್ದು ಹಾಗೂ ದಿನನಿತ್ಯ ದ್ವಿಚಕ್ರ ಸೇರಿದಂತೆ ಹಲವು ವಾಹನಗಳು ಈ ರಸ್ತೆಯ ಮೂಲಕ ಸಂಚರಿಸುತ್ತವೆ.
Related Articles
Advertisement