Advertisement
ಕಳೆದ ಎರಡ್ಮೂರು ತಿಂಗಳಿಂದ ರೈತರು ಹಿಂಗಾರು ಬಿತ್ತನೆಯಲ್ಲಿ ತೊಡಗಿದ್ದಾರೆ. ಉತ್ತಮ ಮಳೆಯಿಂದ ಸಪ್ಪೆಯಾದ ಹೊಲಗಳಿಗೆ ಮಂಗಳ ಡಿಎಪಿಗೆ ಹೆಚ್ಚಿನ ಬೇಡಿಕೆ ಬಂದಿದೆ.
Related Articles
Advertisement
ಇದನ್ನೂ ಓದಿ: ಪ್ರೀತಿಗೆ ವಿರೋಧ;ಪ್ರಿಯತಮೆ ಮನೆಯಲ್ಲೇ ಆಕೆಯ ಹತ್ಯೆಗೆ ಯತ್ನ, ಪ್ರಿಯತಮನೂ ಆಸ್ಪತ್ರೆಗೆ ದಾಖಲು
ಹೆಚ್ಚಿನ ದರಕ್ಕೆ ಗೊಬ್ಬರ ಮಾರಾಟ
ಡಿಎಪಿ ಗೊಬ್ಬರ ಅಭಾವ ಪರಿಸ್ಥಿತಿಯನ್ನು ಮನಗಂಡ ಕೆಲ ಮಾರಾಟಗಾರರು ತಮ್ಮಲ್ಲಿರುವ ಗೊಬ್ಬರವನ್ನು ನಿಗದಿತ ದರಕ್ಕಿಂತ ಹೆಚ್ಚಿನ ಮೊತ್ತಕ್ಕೆ ಮಾರುತ್ತಿದ್ದಾರೆ. ಇನ್ನು ಕೆಲವರು ಬೇರೆಡೆ ದಾಸ್ತಾನು ಮಾಡಿ ಅಭಾವ ಸೃಷ್ಟಿಯಾಗುವಂತೆ ಮಾಡಿದ್ದಾರೆಂಬ ಆರೋಪ ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ವ್ಯಾಪಕವಾಗಿ ಕೇಳಿ ಬರುತ್ತಿದೆ.
ಕೆಲವು ಗ್ರಾಮೀಣ ಭಾಗದಲ್ಲಿ ಅಂಗಡಿಗಳನ್ನು ತೆರೆದು ಹೆಚ್ಚಿನ ದರಕ್ಕೆ ಗೊಬ್ಬರ ಮಾರುತ್ತಿದ್ದಾರೆ. ರೈತರಿಗೆ ಜಿಎಸ್‌ಟಿ ರಸೀದಿ ನೀಡುತ್ತಿಲ್ಲ ಎಂದು ರೈತರಾದ ಗ್ಯಾನಪ್ಪ, ಮಲ್ಲಪ್ಪ, ದುರುಗಪ್ಪ, ಭೀಮಪ್ಪ ಆರೋಪಿಸಿದ್ದಾರೆ.
ರೈತರೊಂದಿಗೆ ಒಂದೇ ಒಂದು ಸಭೆಯಿಲ್ಲಒಂದು ಕಾರ್ಯಕ್ರಮ ಮಾಡಬೇಕಾದರೆ ಹತ್ತಾರು ಪೂರ್ವಭಾವಿ ಸಭೆ ಮಾಡಿ ಚರ್ಚಿಸುವ ಅಧಿಕಾರಿಗಳು ಬಹುಸಂಖ್ಯಾತ ರೈತಾಪಿ ವರ್ಗದ ಕೃಷಿ ಚಟುವಟಿಕೆ ಆರಂಭವಾಗುವ ರೈತರೊಂದಿಗೆ ಒಂದೇ ಒಂದು ಸಭೆ ನಡೆಸುವುದಿಲ್ಲ. ಮುಂಜಾಗ್ರತಾ ಕ್ರಮವಾಗಿ ಕೃಷಿ ಪರಿಕರ, ಬೀಜ, ಗೊಬ್ಬರ ವ್ಯವಸ್ಥಿತವಾಗಿ ಸಂಗ್ರಹಿಸಲು ಆಸಕ್ತಿ ವಹಿಸುವುಲ್ಲ. ಗಡ್ಡಕ್ಕೆ ಬೆಂಕಿ ಹತ್ತಿದಾಗ ಬಾವಿ ತೋಡಿದರೆನ್ನುವಂತೆ ಮಳೆ ಬಿದ್ದ ಮೇಲೆಯೇ ಕೃಷಿ ಇಲಾಖೆ ಅಧಿಕಾರಿಗಳು ಕಣ್ಣು ಹಾಯಿಸುತ್ತಿರುವುದು ಸರಿಯಲ್ಲ ಎಂದು ರೈತ ಮುಖಂಡ ಅಮರಣ್ಣ ಗುಡಿಹಾಳರ ಆರೋಪಿಸುತ್ತಾರೆ. -ದೇವಪ್ಪ ರಾಠೊಡ